ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪಲ್ಸ್ ಪೊಲೀಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಬಳ್ಳಾರಿ : ಮಕ್ಕಳಲ್ಲಿ ಶಾಶ್ವತ ಅಂಗವಿಕಲತೆ ಉಂಟು ಮಾಡುವ ‘ಪೋಲಿಯೋ ಮೈಲಿಟಿಸ್’ ವೈರಸ್ ನಿಯಂತ್ರಣಕ್ಕಾಗಿ ಗಣಿನಾಡು ಬಳ್ಳಾರಿ ಜಿಲ್ಲೆಯ 2 ಲಕ್ಷ ಮಕ್ಕಳುಗೆ ಇಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಆರಂಭಗೊಂಡಿದೆ.

ಬಳ್ಳಾರಿಯ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಇದಕ್ಕೆ ಮೇಯರ್ ಪಿ.ಗಾದೆಪ್ಪ ಮಕ್ಕಳಿಗೆ ಪೋಲಿಯೋ ಹನಿ ಹಾಕುವುದರ ಮೂಲಕ ಚಾಲನೆ ನೀಡಿದರು.
ಜಿಲ್ಲೆಯ ಐದು ವರ್ಷದೊಳಗಿನ ಎರಡು ವರ್ಷದೊಳಗಿನ ಮಕ್ಕಳಗೆ ಎಲ್ಕಾ ಸರ್ಕಾರಿ ಆಸ್ಪತ್ರೆ, ಬಸ್ ನಿಲ್ದಾಣ, ರೈಲು ನಿಲ್ದಾಣ, ಶಾಲೆ ಮೊದಲಾದ ಕಡೆ ಪೊಲೀಯೋ ಹನಿ ಹಾಕುವ ಕಾರ್ಯ ಎರೆಡು ಸಾವಿರ ಸಿಬ್ಬಂದಿಯಿಂದ ಒಂದು ಸಾವಿರ ಸ್ಥಳಗಳಲ್ಲಿ ನಡೆಯುತ್ತಿದೆ.
ಚಾಲನೆ ನೀಡಿ ಮಾತನಾಡಿದ ಮೇಯರ್ ಗಾದೆಪ್ಪ, ಆರೋಗ್ಯವಂತ ಮಕ್ಕಳಿಗಾಗಿ, ಅಂಗವಿಕಲತೆ ಬಾರದಿರಲು ಪೋಷಕರು ತಮ್ಮಮಕ್ಕಳಿಗೆ ತಪ್ಪದೇ ಪೊಲೀಯೋ ಹನಿ ಹಾಕಿಸಿ ಎಂದು ಮಾನವಿ ಮಾಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಇಂದು ಮಧ್ಯಾಹ್ನ 2 ಗಂಟೆಯೊಳಗೆ ಬಹುತೇಕ ಎಲ್ಲಾ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲು ವ್ಯವಸ್ಥೆ ಮಾಡಿದೆ. ಇಂದು ತಪ್ಪಿಸಿಕೊಂಡ ಮಕ್ಕಳಿಗೆ ನಾಳೆಯಿಂದ ಲಿಸಿಕೆ ಹಾಕಲು ಮೂರು ದಿನಗಳ ಕಾಲ 615 ಭೇಟಿ, 50 ಟ್ರಾನ್ಸಿಟ್ ಹಾಗೂ 15 ಸಂಚಾರಿ ತಂಡಗಳು ಸೇರಿದಂತೆ ಒಟ್ಟು 916 ತಂಡಗಳನ್ನು ನಿಯೋಜಿಸಲಾಗಿದೆ ಎಂದು ಹೇಳಿದ್ದಾರೆ.
ಈ ವೇಳೆ ಕರ್ನಾಟಕ ಮಿನರಲ್ಸ್ ನಿಗಮದ ಅಧ್ಯಕ್ಷ ಹೆಚ್.ಲಕ್ಷ್ಮಣ, ಜಿಪಂ ಸಿಇಓ ಮಹಮ್ಮದ್ ಹ್ಯಾರೀಸ್ ಸುಮೇರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸಾರೆಡ್ಡಿ, ಆರ್ ಸಿ ಹೆಚ್. ಅಧಿಕಾರಿ ಡಾ.ಹನುಂಮತಪ್ಪ, ಮಕ್ಕಳ ವಿಭಾಗದ ಮುಖ್ಯಸ್ಥ ಡಾ.ಸುಯಜ್ಞ ಜೋಷಿ ಮೊದಲಾದವರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!