ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಪ್ರಸ್ತುತ ಗೌರವ ಅಧ್ಯಕ್ಷರಾಗಿ, ಸಾಹಿತ್ಯ ಲೋಕಕ್ಕೆ ನೀಡಿದ ಅನುಪಮ ಸೇವೆ, ಕಾರ್ಕಳ “ಕವಿರತ್ನಾಕರವರ್ಣಿ “ವಿದ್ಯಾಪೀಠದ ಮತ್ತು ಮೂಡಿಗೆರೆ ಹೊಯ್ಸಳ ವಿದ್ಯಾಪೀಠದ ಪ್ರಾಂಶುಪಾಲರಾಗಿ ಮಾಡಿದ ಸಾಹಿತ್ಯ ಸೇವೆ, ಶೈಕ್ಷಣಿಕ ಸೇವೆಯನ್ನು ಪರಿಗಣಿಸಿ,
ಶ್ರೀ ಇರಾ ನೇಮು ಪೂಜಾರಿಯವರಿಗೆ ಕಾಸರಗೋಡು ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಪ್ರಯುಕ್ತ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಪದವಿ ಸೇವಾಕಾಂಕ್ಷಿ ಡಾ. ಸೋಮಶೇಖರ್ ಐ. ಎ. ಎಸ್. ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ “ಕರ್ನಾಟಕ -ಗಡಿನಾಡು ಕನ್ನಡ ಸಮ್ಮೇಳನ” ದಲ್ಲಿ “ರಾಷ್ಟ್ರಕವಿ ಗೋವಿಂದ ಪೈ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ -2026 ನೀಡಿ ಗೌರವಿಸಲಾಗುವುದು ಎಂದು “ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ ದಿ. 26.7.2026 ರಂದು ನಡೆಯಲಿರುವ ಸಮ್ಮೇಳನಾಧ್ಯಕ್ಷರಾದ ಡಾ. ಕೆ. ಎನ್. ವೆಂಕಟರಮಣ ಹೊಳ್ಳ ಹಾಗೂ ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ಕೆ. ವಾಮನ್ ರಾವ್ ಬೇಕಲ್ ಜಂಟಿಯಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಕರುನಾಡ ಕಂದ ಸುದ್ದಿ




















