ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ದೋಷರಹಿತ ಮತದಾರರ ಪಟ್ಟಿ ಪರಿಷ್ಕರಣೆ ಆರಂಭ ಜು.29ರವರೆಗೆ ಮನೆ-ಮನೆ SIR ಅಧಿಕಾರಿಗಳ ಭೇಟಿ.

ಕೊರಟಗೆರೆ: ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ Special Intensive Revision – S.I.R ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಒಂದು ತಿಂಗಳ ಕಾಲ ನಡೆಯುವ ಈ ಅಭಿಯಾನ ಜುಲೈ 29ಕ್ಕೆ ಮುಕ್ತಾಯವಾಗಲಿದೆ.

ಕ್ಷೇತ್ರದ ಮಾಹಿತಿ :
ಕೊರಟಗೆರೆ ಕ್ಷೇತ್ರದಲ್ಲಿ ಒಟ್ಟು 6 ಹೋಬಳಿ, 386 ಗ್ರಾಮ, 2,09,945 ಮತದಾರರು ಹಾಗೂ 240 ಮತಗಟ್ಟೆಗಳಿವೆ*. ಪ್ರತಿ ಮತಗಟ್ಟೆಗೆ ಒಬ್ಬರಂತೆ ಒಟ್ಟು 240 ಬೂತ್ ಮಟ್ಟದ ಅಧಿಕಾರಿಗಳನ್ನು (BLO) ನೇಮಿಸಲಾಗಿದೆ.
ತಾಲೂಕು ಮತ್ತು ಹೋಬಳಿ ನೋಡೆಲ್ ಅಧಿಕಾರಿಗಳು ಹಾಗೂ ಬಿಎಲ್‌ಒಗಳು ಮನೆ-ಮನೆಗೆ ಭೇಟಿ ನೀಡಿ ಮತದಾರರ ಹೆಸರು, ವಿಳಾಸ, ಫೋಟೋ ಸೇರಿದಂತೆ ಎಲ್ಲಾ ವಿವರಗಳನ್ನು ಪರಿಶೀಲಿಸಲಿದ್ದಾರೆ. ಹೊಸ ಮತದಾರರ ಸೇರ್ಪಡೆ, ಮೃತರಾದವರ ಹೆಸರು ತೆಗೆಯುವಿಕೆ, ತಿದ್ದುಪಡಿ ಕಾರ್ಯ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾ ನೋಂದಣಾಧಿಕಾರಿ ವಿಜಯಲಕ್ಷ್ಮಿ ಡಿ.ಆರ್, ಕೃಷಿ ಇಲಾಖೆ ಉಪನಿರ್ದೇಶಕ ಡಾ. ಚಂದ್ರಕುಮಾರ್ ಹಾಗೂ ಕೊರಟಗೆರೆ ತಹಶೀಲ್ದಾರ್ ಮಂಜುನಾಥ್, ಪುರಸಭೆ ಮುಖ್ಯ ಅಧಿಕಾರಿ ಉಮೇಶ್, ಕಸಬಾ ಹೋಬಳಿ ಆರ್ ಐ ಬಸವರಾಜು, ವಿ ಎ ಪವನ್ ಅವರು ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೂತ್ ಮಟ್ಟದ ಅಧಿಕಾರಿಗಳ ಕಾರ್ಯ ವೈಖರಿ ಪರಿಶೀಲಿಸಿದರು.
ಯಾವುದೇ ಗೊಂದಲ ಅಥವಾ ಲೋಪ ಉಂಟಾಗದಂತೆ ಮನೆ-ಮನೆಗೆ ಸಮರ್ಪಕವಾಗಿ ಪರಿಶೀಲನೆ ನಡೆಸಿ, ದೋಷರಹಿತ ಮತದಾರರ ಪಟ್ಟಿ ಸಿದ್ಧಪಡಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇವೆ.
ಸಾರ್ವಜನಿಕರು ಆಧಾರ್ ಕಾರ್ಡ್, ವೋಟರ್ ಐಡಿ, ಜನನ ಪ್ರಮಾಣ ಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಂಡು BLOಗಳಿಗೆ ಸಹಕರಿಸಬೇಕು ಎಂದು ಕೆ.ಮಂಜುನಾಥ, ತಹಶೀಲ್ದಾರ್ ತಿಳಿಸಿದರು.

” ಮತದಾರರ ಪಟ್ಟಿ ಪ್ರಜಾಪ್ರಭುತ್ವದ ಆಧಾರ. ಒಬ್ಬ ಮತದಾರನೂ ಮಿಸ್ ಆಗಬಾರದು, ನಕಲಿ ಮತದಾರ ಸೇರಬಾರದು. ಈ SIR ಅಭಿಯಾನದಲ್ಲಿ 100% ನಿಖರ ಪಟ್ಟಿ ತಯಾರಿಸುವುದು ನಮ್ಮ ಗುರಿ. BLOಗಳು ಪ್ರತಿ ಮನೆಗೂ ಭೇಟಿ ನೀಡಿ ಖಚಿತಪಡಿಸಿಕೊಳ್ಳುತ್ತಾರೆ”.

  • ವಿಜಯಲಕ್ಷ್ಮೀ, ತುಮಕೂರು ಜಿಲ್ಲಾ ನೊಂದಣಾಧಿಕಾರಿ.

ಗ್ರಾಮೀಣ ಭಾಗದ ರೈತಾಪಿ ಜನರಿಗೆ ಮತದಾನದ ಮಹತ್ವ ತಿಳಿಸಿಕೊಡುವುದು ನಮ್ಮ ಜವಾಬ್ದಾರಿ. ಈ ಪರಿಷ್ಕರಣೆ ವೇಳೆ 18 ವರ್ಷ ತುಂಬಿದ ಎಲ್ಲಾ ಯುವಕ-ಯುವತಿಯರ ಹೆಸರು ಸೇರ್ಪಡೆಯಾಗಬೇಕು. ರೈತರು ತಪ್ಪದೇ ಸಹಕರಿಸಿ.

  • ಡಾ. ಚಂದ್ರಕುಮಾರ್, ಉಪ ನಿರ್ದೇಶಕ, ಕೃಷಿ ಇಲಾಖೆ.

ವರದಿ. ಪ್ರಸನ್ನಕುಮಾರ್. ಎಸ್. ಕೊರಟಗೆರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!