ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜನಸ್ನೇಹಿ ವೈದ್ಯ ಡಾ. ಅಕ್ಷಯ್‌ಗೆ ವೈದ್ಯರ ದಿನಾಚರಣೆಯಂದು ಸಾರ್ವಜನಿಕರಿಂದ ಅಭಿನಂದನೆಗಳ ಮಹಾಪೂರ.

ಕೋಳಾಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುಣಮಟ್ಟದ ಆರೋಗ್ಯ ಸೇವೆ – ಮಾದರಿ ಕೇಂದ್ರವನ್ನಾಗಿಸಲು ಸಾರ್ವಜನಿಕರ ಒತ್ತಾಯ

ಕೊರಟಗೆರೆ: ರಾಷ್ಟ್ರೀಯ ವೈದ್ಯರ ದಿನಾಚರಣೆಯ ಅಂಗವಾಗಿ ಕೋಳಾಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ಡಾ. ಅಕ್ಷಯ್ ಅವರಿಗೆ ಸಾರ್ವಜನಿಕರು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸಿ, ಅವರ ಜನಪರ ಸೇವೆಯನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು.

ಕಳೆದ ಕೆಲವು ವರ್ಷಗಳಿಂದ ಕೋಳಾಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಡಾ. ಅಕ್ಷಯ್ ಅವರ ನೇತೃತ್ವದಲ್ಲಿ ಆರೋಗ್ಯ ಕೇಂದ್ರದಲ್ಲಿ ಗಮನಾರ್ಹ ಬದಲಾವಣೆಗಳು ಕಂಡುಬಂದಿವೆ. ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ, ಅಗತ್ಯ ಔಷಧಿಗಳ ಲಭ್ಯತೆ, ಆಸ್ಪತ್ರೆಯ ಸ್ವಚ್ಛತೆ, ಸಿಬ್ಬಂದಿಯ ಸಮನ್ವಯ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮಗಳ ಮೂಲಕ ಈ ಆಸ್ಪತ್ರೆ ಸಾರ್ವಜನಿಕರ ವಿಶ್ವಾಸ ಗಳಿಸಿದೆ.

ಲೈನ್‌ಮ್ಯಾನ್ ರಮೇಶ್ ಮಾತನಾಡಿ, ” ಡಾ. ಅಕ್ಷಯ್ ಅವರು ಕೋಳಾಲ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬಂದ ನಂತರ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದಾರೆ. ಸರ್ಕಾರದಿಂದ ದೊರೆಯುವ ಆರೋಗ್ಯ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುವ ಕೆಲಸ ಮಾಡಿದ್ದಾರೆ. ರೋಗಿಗಳಿಗೆ ಅಗತ್ಯ ಔಷಧಿಗಳನ್ನು ಲಭ್ಯವಾಗುವಂತೆ ನೋಡಿಕೊಂಡಿದ್ದು, ಆಸ್ಪತ್ರೆಯ ಸ್ವಚ್ಛತೆ, ರೋಗಿಗಳ ಆರೈಕೆ, ವೈದ್ಯಕೀಯ ಮಾರ್ಗದರ್ಶನ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಉತ್ತಮ ಬದಲಾವಣೆ ಕಂಡುಬಂದಿದೆ. ಆದ್ದರಿಂದ ಅವರು ಸಾರ್ವಜನಿಕರ ಪಾಲಿಗೆ ‘ಜನಸ್ನೇಹಿ ವೈದ್ಯ’ರಾಗಿ ಗುರುತಿಸಿಕೊಂಡಿದ್ದಾರೆ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ಅಕ್ಷಯ್, “ನನ್ನ ವೈದ್ಯಕೀಯ ಸೇವೆಯನ್ನು ತುಮಕೂರು ಜಿಲ್ಲೆಯಲ್ಲಿ ಆರಂಭಿಸಿದ್ದು ನನ್ನ ಭಾಗ್ಯ. ಕೋಳಾಲ ಪ್ರಾಥಮಿಕ ಆರೋಗ್ಯ ಕೇಂದ್ರ ನನ್ನ ಎರಡನೇ ಕಾರ್ಯಕ್ಷೇತ್ರವಾಗಿರುವುದು ಹೆಮ್ಮೆಯ ವಿಷಯ. ಇಲ್ಲಿನ ಜನರು ವೈದ್ಯರ ಸಲಹೆಯನ್ನು ನಿಷ್ಠೆಯಿಂದ ಪಾಲಿಸುವುದರಿಂದ ಚಿಕಿತ್ಸೆಗೆ ಉತ್ತಮ ಸ್ಪಂದನೆ ದೊರೆಯುತ್ತದೆ. ಆಸ್ಪತ್ರೆಯ ಎಲ್ಲಾ ಸಿಬ್ಬಂದಿ ತಂಡದ ಮನೋಭಾವದಿಂದ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕ ಸೇವೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನೀಡಲು ಸಹಕರಿಸುತ್ತಿದ್ದಾರೆ” ಎಂದರು.

” ನನ್ನ ತಂದೆಯವರು ವೈದ್ಯಕೀಯ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಸಾರ್ವಜನಿಕರ ಆರೋಗ್ಯಕ್ಕಾಗಿ ದುಡಿದಿದ್ದಾರೆ. ಅವರ ಸೇವಾ ಮನೋಭಾವವೇ ನನಗೆ ಸ್ಫೂರ್ತಿ. ಮುಂದಿನ ದಿನಗಳಲ್ಲಿಯೂ ಬಡವರು ಹಾಗೂ ಗ್ರಾಮೀಣ ಜನರಿಗೆ ಪ್ರಾಮಾಣಿಕ, ಗುಣಮಟ್ಟದ ಆರೋಗ್ಯ ಸೇವೆ ನೀಡುವುದೇ ನನ್ನ ಪ್ರಮುಖ ಗುರಿಯಾಗಿದೆ” ಎಂದು ಅವರು ತಿಳಿಸಿದರು.

ಕೋಳಾಲ ಪ್ರಾಥಮಿಕ ಆರೋಗ್ಯ ಕೇಂದ್ರ – ತಾಲೂಕಿಗೆ ಮಾದರಿ

ಕಳೆದ ಮೂರು-ನಾಲ್ಕು ವರ್ಷಗಳಲ್ಲಿ ಆಸ್ಪತ್ರೆಯಲ್ಲಿ ಹೆರಿಗೆಗಳ ಸಂಖ್ಯೆ ಗಮನಾರ್ಹವಾಗಿ ಹೆಚ್ಚಳಗೊಂಡಿದೆ.
ಆಸ್ಪತ್ರೆಯಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಲಾಗಿದ್ದು, ವಾರ್ಡ್‌ಗಳು, ರೋಗಿಗಳ ಹಾಸಿಗೆಗಳು, ಶೌಚಾಲಯಗಳು ಹಾಗೂ ಹೆರಿಗೆ ಕೊಠಡಿಗಳು ಉತ್ತಮ ಗುಣಮಟ್ಟದಲ್ಲಿ ನಿರ್ವಹಣೆಯಾಗುತ್ತಿವೆ.
ಡಾ. ಅಕ್ಷಯ್ ಅವರ ನೇತೃತ್ವದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ತಪಾಸಣಾ ಶಿಬಿರಗಳು, ಜಾಗೃತಿ ಕಾರ್ಯಕ್ರಮಗಳು ಹಾಗೂ ಖಾಸಗಿ ಸಂಸ್ಥೆಗಳ ಸಹಯೋಗದಲ್ಲಿ ಹಲವು ಆರೋಗ್ಯ ಸೇವೆಗಳು ಯಶಸ್ವಿಯಾಗಿ ನಡೆದಿವೆ.
ರಾಜ್ಯದ ಅನೇಕ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಕಂಡುಬರುತ್ತಿರುವ ಸಂದರ್ಭದಲ್ಲೂ ಕೋಳಾಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಗತ್ಯ ಔಷಧಿಗಳು ಸಮರ್ಪಕವಾಗಿ ಲಭ್ಯವಾಗುತ್ತಿದ್ದು, ಇದು ಆಸ್ಪತ್ರೆಯ ಪರಿಣಾಮಕಾರಿ ಆಡಳಿತಕ್ಕೆ ಸಾಕ್ಷಿಯಾಗಿದೆ.

ವೈದ್ಯರ ದಿನಾಚರಣೆಯಂದು ಉಪಮುಖ್ಯಮಂತ್ರಿಗೆ ಸಾರ್ವಜನಿಕರ ಮನವಿ

ಕೋಳಾಲ ಪ್ರಾಥಮಿಕ ಆರೋಗ್ಯ ಕೇಂದ್ರವು ಅತಿ ಹೆಚ್ಚು ಜನಸಂಖ್ಯೆಗೆ ಸೇವೆ ನೀಡುವ ಪ್ರಮುಖ ಆರೋಗ್ಯ ಕೇಂದ್ರವಾಗಿದೆ. ಗ್ರಾಮೀಣ ಭಾಗದ ಸಾವಿರಾರು ಜನರು ಈ ಆಸ್ಪತ್ರೆಯನ್ನು ಅವಲಂಬಿಸಿರುವುದರಿಂದ ಇದನ್ನು ಉನ್ನತೀಕರಿಸಿ ಸಮುದಾಯ ಆರೋಗ್ಯ ಕೇಂದ್ರ ಅಥವಾ ಇನ್ನೂ ಮೇಲ್ದರ್ಜೆಯ ಆರೋಗ್ಯ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಬೇಕು ಎಂದು ಸಾರ್ವಜನಿಕರು ರಾಜ್ಯದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರಿಗೆ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಸರ್ಕಾರಿ ಆಂಬುಲೆನ್ಸ್ ಸೇವೆಯನ್ನು ಇನ್ನಷ್ಟು ಬಲಪಡಿಸುವ ಅಗತ್ಯವಿದೆ. ಹಲವು ಆಂಬುಲೆನ್ಸ್‌ಗಳಲ್ಲಿ ಅಗತ್ಯ ವೈದ್ಯಕೀಯ ಉಪಕರಣಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ. ತುರ್ತು ಚಿಕಿತ್ಸೆಯಲ್ಲಿ ಯಾವುದೇ ವಿಳಂಬವಾಗದಂತೆ ಸುಸಜ್ಜಿತ ಆಂಬುಲೆನ್ಸ್‌ಗಳು, ತರಬೇತಿ ಪಡೆದ ಸಿಬ್ಬಂದಿ ಹಾಗೂ ಆಧುನಿಕ ವೈದ್ಯಕೀಯ ಸೌಲಭ್ಯಗಳನ್ನು ಸರ್ಕಾರ ಒದಗಿಸಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ.

ಜೀವ ಉಳಿಸುವ ವೈದ್ಯರು ಸಮಾಜದ ಅಮೂಲ್ಯ ಸಂಪತ್ತು. ಅವರ ಸೇವೆಯನ್ನು ಗೌರವಿಸುವುದರ ಜೊತೆಗೆ ಸರ್ಕಾರಿ ಆರೋಗ್ಯ ವ್ಯವಸ್ಥೆಯನ್ನು ಇನ್ನಷ್ಟು ಸದೃಢಗೊಳಿಸುವ ಮೂಲಕ ಗ್ರಾಮೀಣ ಜನತೆಗೆ ಗುಣಮಟ್ಟದ ಆರೋಗ್ಯ ಸೇವೆ ತಲುಪಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಬೇಕು ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.

ವರದಿ. ಪ್ರಸನ್ನಕುಮಾರ್. ಎಸ್. ಕೊರಟಗೆರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!