ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅನಧಿಕೃತ ಸಾರಾಯಿ ಮಾರಾಟ ತಡೆಗೆ ಆಗ್ರಹಿಸಿ ಯುವಕ್ರಾಂತಿ ಸಂಘಟನೆ ಮನವಿ

ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಮಂಠಾಳ ಗ್ರಾಮದಲ್ಲಿ ಅನಧಿಕೃತವಾಗಿ ಸಾರಾಯಿ ಮಾರಾಟ ನಡೆಯುತ್ತಿರುವುದನ್ನು ತಕ್ಷಣವೇ ತಡೆಗಟ್ಟುವಂತೆ ಆಗ್ರಹಿಸಿ, ಯುವ ಕ್ರಾಂತಿ ಸಂಘಟನೆಯ ವತಿಯಿಂದ ಅಬಕಾರಿ ನಿರೀಕ್ಷಕರಿಗೆ ಮನವಿ ಸಲ್ಲಿಸಲಾಯಿತು.
ಗ್ರಾಮದಲ್ಲಿ ಅನಧಿಕೃತ ಸಾರಾಯಿ ಮಾರಾಟದಿಂದ ಯುವಜನತೆ ಹಾಗೂ ಸಾರ್ವಜನಿಕರ ಆರೋಗ್ಯ ಮತ್ತು ಸಾಮಾಜಿಕ ಜೀವನದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಿ, ಅನಧಿಕೃತ ಸಾರಾಯಿ ಮಾರಾಟದಲ್ಲಿ ತೊಡಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಂಡು, ಈ ಅಕ್ರಮವನ್ನು ಸಂಪೂರ್ಣವಾಗಿ ನಿಲ್ಲಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ಯುವ ಕ್ರಾಂತಿ ಸಂಘಟನೆಯ ಮಂಠಾಳ ಘಟಕದ ಅಧ್ಯಕ್ಷರಾದ ಸಂದೀಪ್ ಪಾಟೀಲ, ವೀರೇಶ್ ಗುಡ್ಡಾ ಮಹೇಶ್ ಜಾಧವ್ , ಅಂಕುಶ್ ದರೆ ,ಮಹೇಶ್ ಬಿರಾದಾರ ,ಆದೇಶ್ ಸುಣಗಾರ ಸೇರಿದಂತೆ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ: ಶ್ರೀನಿವಾಸ ಬಿರಾದಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!