ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪುರದಾಳು ಗ್ರಾಮದ ಬಾರೆಹಳ್ಳ ಡ್ಯಾಮ್ ಗೆ ನೀರು ತುಂಬಿಸಿ :ಗ್ರಾ.ಪಂ ಅಧ್ಯಕ್ಷ ಪ್ರದೀಪ್ ಹೆಬ್ಬೂರು ಒತ್ತಾಯ

ಶಿವಮೊಗ್ಗ : ತುಂಗಾ ಏತ ನೀರಾವರಿ ಯೋಜನೆಯಡಿ ಶರಾವತಿ ಮುಳುಗಡೆ ರೈತರಿರುವ ಪುರದಾಳು ಗ್ರಾಮದ ಬಾರೆಹಳ್ಳ ಡ್ಯಾಮ್ ಗೆ ನೀರು ತುಂಬಿಸುವಂತೆ ಪುರದಾಳು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪ್ರದೀಪ್ ಎಸ್ ಹೆಬ್ಬೂರು ಅವರು ಒತ್ತಾಯಿಸಿದ್ದಾರೆ.
ತಾಲೂಕಿನ ಪುರದಾಳು ಗ್ರಾಮದಲ್ಲಿ ಶರಾವತಿ ಮುಳುಗಡೆ ಸಂತ್ರಸ್ಥರು ಹೆಚ್ಚಾಗಿ ವಾಸಿಸುತ್ತಿದ್ದಾರೆ.
ಶರಾವತಿ ಮುಳುಗಡೆ ಸಂತ್ರಸ್ಥರ ಕೃಷಿ ಚಟುವಟಿಕೆಗಾಗಿ ೧೯೭೦ರ ಸುಮಾರಿನಲ್ಲಿ ಬಾರೇಹಳ್ಳ ಡ್ಯಾಮ್ ಕಟ್ಟಲಾಗಿದ್ದು,ಸದರಿ ಡ್ಯಾಮ್ ಗೆ ೨೦೧೯ ರಲ್ಲಿ ತುಂಗಾ ನದಿಗೆ ಅರಕೆರೆ ಸಮೀಪ ಜಾಕ್ವಲ್ ನಿರ್ಮಿಸಿ ಏತ ನೀರಾವರಿಯ ಮೂಲಕ ನೀರನ್ನು ತುಂಬಿಸಿ ರೈತರಿಗೆ ಅನುಕೂಲ ಮಾಡಿಕೊಡಲಾಗಿತ್ತು. ಇದರ ಪರಿಣಾಮವಾಗಿ ಸಾವಿರಾರು ರೈತರು ಈ ಯೋಜನೆಯನ್ನು ನಂಬಿ ಸುಮಾರು ೩೦೦೦ಕ್ಕೂ ಅಧಿಕ ಎಕರೆ ಭೂಪ್ರದೇಶದಲ್ಲಿ ಅಡಿಕೆ,ಭತ್ತ ಇತ್ಯಾದಿ ಬೆಳೆಗಳನ್ನು ಮಾಡಿ ಜೀವನ ಕಟ್ಟಿಕೊಳ್ಳುತ್ತಿದ್ದಾರೆ. ಈ ನಡುವೆ ತುಂಗಾ ಏತನೀರಾವರಿಯ ವಿದ್ಯುತ್ ಬಿಲ್ ಬಾಕಿ ಇರುವ ಕಾರಣ ಮೆಸ್ಕಾಂನವರು ವಿದ್ಯುತ್ ಸಂಪರ್ಕ ಕಡಿತಗೊಳಿಸಿದೆ. ಇದರಿಂದ ಜಾಕ್ವೆಲ್‌ನಿಂದ ನೀರು ಎತ್ತುವುದು ಸ್ಥಗಿತಗೊಂಡು ಡ್ಯಾಮ್‌ಗೆ ನೀರು ತುಂಬಿಸುವ ಕಾರ್ಯ ಸ್ಥಗಿತಗೊಂಡಿದೆ.
ಈ ವರ್ಷ ಮಳೆಯ ತುಂಬಾ ಕಡಿಮೆ.ವಾಡಿಕೆಯಂತೆ ಮಳೆಯೂ ಆಗಿಲ್ಲ,ಬರಗಾಲದ ಛಾಯೆ ಆವರಿಸುತ್ತಿದೆ.ಜೂನ್ ತಿಂಗಳಿನಿಂದ ಡಿಸೆಂಬರ್‌ವರೆಗೆ ಆರು ತಿಂಗಳು ಕಾಲ ನೀರು ಎತ್ತಲು ಅವಕಾಶವಿದ್ದರೂ ವಿದ್ಯುತ್ ಸಂಪರ್ಕ ಇಲ್ಲದೇ ನೀರು ಎತ್ತಲ್ಲು ಸಾಧ್ಯವಾಗಿಲ್ಲ. ರಾಜ್ಯ ಸರ್ಕಾರ ಕೂಡಲೇ ವಿದ್ಯುತ್ ಬಿಲ್ ಪಾವತಿಸಿ ನೀರು ಎತ್ತಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರ ಬಿಲ್ ಪಾವತಿ ಮಾಡದಿದ್ದರೆ ಬಾರೇಹಳ್ಳ ಅಚ್ಚುಕಟ್ಟು ಪ್ರದೇಶದ ರೈತರು,ಜನಜಾನುವಾರುಗಳು ನೀರಿಗಾಗಿ ಆಹಾಕಾರ ಪಡಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ. ಆದ್ದರಿಂದ ಸರ್ಕಾರ ಈ ಕೂಡಲೇ ಎಚ್ಚೆತ್ತುಕೊಂಡು ಅಗತ್ಯವಿರುವ ವಿದ್ಯುತ್ ಬಿಲ್ ಪಾವತಿಸಿ ನೀರು ಎತ್ತಲು ಅವಕಾಶ ಕಲ್ಪಿಸಿ ಕೊಡುವುದರ ಮೂಲಕ ಡ್ಯಾಮ್ ಗಳಿಗೆ ನೀರು ಹರಿಸಬೇಕಾಗಿ ಕೋರುತ್ತೇವೆ. ಇಲ್ಲವಾದಲ್ಲಿ ಶರಾವತಿ ಮುಳುಗಡೆ ರೈತರನ್ನು ಕಡೆಗಣಿಸುತ್ತಿರುವ ಸರ್ಕಾರದ ವಿರುದ್ಧ ಜಿಲ್ಲಾಽಕಾರಿಗಳ ಕಚೇರಿಯ ಎದುರು ಸಾವಿರಾರು ರೈತರೊಂದಿಗೆ ಅಹೋರಾತ್ರಿ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!