ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪತ್ರಿಕಾ ಪ್ರಕಟಣೆ

ಬೈಲಹೊಂಗಲ :ಮುಂಗಾರು ಮಳೆ ಪ್ರಾರಂಭದ ದಿನಗಳಲ್ಲಿ ಡೆಂಗ್ಯೂ, ಚಿಕನ್ ಗುನ್ಯಾ, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳು ಹರಡುವ ಸಂಭವ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಬೈಲಹೊಂಗಲ ನಗರಸಭೆ ವ್ಯಾಪ್ತಿಯ ಸಾರ್ವಜನಿಕರು ತಮ್ಮ ಆರೋಗ್ಯದ ಹಿತದೃಷ್ಠಿಯಿಂದ ನೀರನ್ನು ಕಾಯಿಸಿ ಆರಿಸಿ ಕುಡಿಯುವುದು ಮತ್ತು ಮನೆಗಳಲ್ಲಿನ ಎಲ್ಲಾ ನೀರಿನ ತೊಟ್ಟಿಗಳು (ನೀರಿನ ಟ್ಯಾಂಕ್), ಡ್ರಂ, ಬ್ಯಾರಲ್ಗಳು, ಏರ್ ಕೂಲರ್ ಇತ್ಯಾದಿಗಳನ್ನು ವಾರಕೊಮ್ಮೆ ಖಾಲಿ ಮಾಡಿ ಸ್ವಚ್ಛಪಡಿಸಿ, ಮತ್ತೆ ಭರ್ತಿ ಮಾಡಿಕೊಂಡು ಮುಚ್ಚಳದಿಂದ ಮುಚ್ಚುವುದು, ಬಯಲಿನಲ್ಲಿರುವ ತ್ಯಾಜ್ಯ ವಸ್ತುಗಳಾದ ಒಡೆದ ಬಾಟಲಿ ಮುಂತಾದವುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಎಚ್ಚರ ವಹಿಸುವುದು ಅಥವಾ ಸೂಕ್ತ ವಿಲೇವಾರಿ ಮಾಡುವುದು ಹಾಗೂ ನಗರಸಭೆಯಿಂದ ಹಮ್ಮಿಕೊಂಡ ಸೊಳ್ಳೆ ನಿಯಂತ್ರಣ ಕ್ರಮಗಳಿಗೆ ಸಹಕಾರ ನೀಡಲು ಮತ್ತು ಸ್ವಯಂ ರಕ್ಷಣಾ ವಿಧಾನಗಳಾದ ಸೊಳ್ಳೆ ನಿರೋಧಕಗಳನ್ನು ಹಾಗೂ ಸೊಳ್ಳೆ ಪರದೆಯನ್ನು ಬಳಸಲು ಮತ್ತು ರೋಗದ ಲಕ್ಷಣ ಕಂಡೊಡನೆ ವೈದ್ಯರಿಂದ ಪರೀಕ್ಷೆ ಮಾಡಿಸಿ ಸೂಕ್ತ ಚಿಕಿತ್ಸೆ ಪಡೆಯಬೇಕೆಂದು ಪೌರಾಯುಕ್ತರಾದ ಶ್ರೀಮತಿ ಭಾಗ್ಯಶ್ರೀ ಆರ್. ಹುಗ್ಗಿ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ವರದಿ ಮಂಜು ಎಂ.ಚಿಕ್ಕಣ್ಣವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!