ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪೂರ್ವಭಾವಿ ಸಭೆ

ಮೈಸೂರು/ ನಂಜನಗೂಡು: ಮಾಜಿ ಸಂಸದ ದಿವಂಗತ ಧ್ರುವನಾರಾಯಣ ಅವರ ಹುಟ್ಟುಹಬ್ಬದ ಪ್ರಯುಕ್ತ ಈ ಸಭೆಯನ್ನು ಜನಪ್ರಿಯ ಶಾಸಕರಾದ ದರ್ಶನ್ ಧ್ರುವನಾರಾಯಣ್ ಅಧ್ಯಕ್ಷತೆಯಲ್ಲಿ ನಂಜನಗೂಡಿನ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಅವರ ಸುಪುತ್ರರಾದ ಜನಪ್ರಿಯ ಶಾಸಕರಾದ ದರ್ಶನ್ ಧ್ರುವನಾರಾಯಣ್ ಅವರು ಮಾತನಾಡಿ ನಮ್ಮ ತಂದೆಯವರು ಎರಡು ಬಾರಿ ಸಂಸದರಾಗಿ ಮತ್ತು ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿ ಕ್ಷೇತ್ರಗಳಿಗೆ ಅಪಾರ ಜನಸೇವೆ ಸಮಾಜ ಸೇವೆಯನ್ನು ಸಲ್ಲಿಸಿದ್ದಾರೆ. ಆದ್ದರಿಂದ ಅವರ ಹುಟ್ಟು ಹಬ್ಬದ ಸಲುವಾಗಿ ಈ ಸಭೆಯನ್ನು ಕೈಗೊಳ್ಳಲಾಗಿದ್ದು ಎಲ್ಲರೂ ಕೂಡ ಸಲಹೆ ಸೂಚನೆಗಳನ್ನು ನೀಡಬೇಕಾಗಿ ವಿನಂತಿ ಎಂದರು. ಹುಟ್ಟುಹಬ್ಬವನ್ನು ಹೆಚ್ಚು ವಿಜೃಂಭಣೆಯಿಂದ ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳುವುದರ ಮೂಲಕ ಆಚರಿಸಬೇಕಾಗಿ ವಿನಂತಿಸಿಕೊಂಡರು.
ಈ ಸಭೆಯಲ್ಲಿ ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ , ನಗರಸಭೆ ಆಯುಕ್ತರಾದ ಬಸವರಾಜು, ಬ್ಲಾಕ್ ಅಧ್ಯಕ್ಷರುಗಳಾದ ಕುರಹಟ್ಟಿ ಮಹೇಶ್, ಶಂಕರ್, ಮಾರುತಿ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಲತಾ ಸಿದ್ದಶೆಟ್ಟಿ, ಮಂಜುನಾಥ್ ಅಬ್ದುಲ್ ಖಾದರ್ ಮುಂತಾದ ಗಣ್ಯರು
ಹಾಜರಿದ್ದರು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!