ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬಳ್ಳಾರಿ / ಸಂಡೂರ್ : ತಾಲೂಕಿನ ದರೋಜಿ ವಲಯದಲ್ಲಿ ಸರ್ಕಾರಿ ಹಿರಿಯ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ತಾಲೂಕು ಯೋಜನಾಧಿಕಾರಿ ರಾಘವೇಂದ್ರ .ಕೆ. ಇವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಕುಟುಂಬಗಳು ನೆಮ್ಮದಿಯಾಗಿ ಇರಬೇಕೆಂದರೆ ದುಷ್ಟಗಳಿಂದ ದೂರವಿರಬೇಕು, ಪೂಜ್ಯರು ಮತ್ತು ಮಾತೃಶ್ರೀ ಅಮ್ಮನವರು ಅನೇಕ ಕಾರ್ಯಕ್ರಮಗಳನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡುತ್ತಿದ್ದು ಅದರಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವೂ ಒಂದಾಗಿದೆ ಎಂದು ತಿಳಿಸಿದರು.
ಸಂಪನ್ಮೂಲ ವ್ಯಕ್ತಿಗಳಾದ ಜಿಲಾನ್ ಸಾಬ್ ಬಡಿಗೇರ ಉಪನ್ಯಾಸ ನೀಡಿ ಮಕ್ಕಳಿಗೆ ದುಶ್ಚಟಗಳಿಂದ ದೂರ ಇರುವ ಬಗ್ಗೆ ಅರಿವು ಮೂಡಿಸುವಂಥ ಮಾಹಿತಿಯನ್ನು ದೃಷ್ಟಾಂತದ ಮೂಲಕ ನೀಡಿ ಸಮಾಜದಲ್ಲಿ ದುಷ್ಟ ಅಭ್ಯಾಸಗಳನ್ನು ಕಡಿವಾಣ ಹಾಕಬಹುದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಡೆವ ಸ್ವಾಸ್ತ ಸಂಕಲ್ಪ ಕಾರ್ಯಕ್ರಮವು ಸಮಾಜಕ್ಕೆ ಬಹುದೊಡ್ಡ ಕೊಡುಗೆಯನ್ನು ನೀಡುತ್ತಿದೆ ಎಂದು ತಿಳಿಸಿದರು.
ಶಾಲೆಯ ಮುಖ್ಯೋಪಾಧ್ಯಾಯನಿ ಹುಲ್ಲೇಶಿ ರವರು ಮಾತನಾಡಿ ದುಶ್ಚಟಗಳ ಜೊತೆಗೆ ಮೊಬೈಲ್ ಬಳಕೆಯೂ ಸಹ ಒಂದು ದುಷ್ಟಟವಾಗಿ ಪರಿಣಮಿಸಿದ್ದು ಇದನ್ನು ಸಹ ಅತಿ ಕಡಿಮೆ ಬಳಕೆ ಮಾಡುವುದರ ವಿದ್ಯಾಭ್ಯಾಸದ ಕಡೆಗೆ ಗಮನ ಹರಿಸಬೇಕು ಎಂದು ಮಕ್ಕಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಕೆ. ಎಸ್. ಗುರುಮೂರ್ತಿ, ಮಲ್ಲಿಕಾರ್ಜುನ ಸ್ವಾಮಿ, ಗ್ರಾಮ ಪಂಚಾಯಿತಿ ಸದಸ್ಯ ಮಾಯಣ್ಣ, ಊರಿನ ಹಿರಿಯರು, ಶಿಕ್ಷಕಿಯರಾದ ಜ್ಯೋತಿ, ಕಲಾವತಿ, ವಲಯದ ಮೇಲ್ವಿಚಾರಕರಾದ ಎಚ್ ಮಂಜಣ್ಣ, ಸೇವಾ ಪ್ರತಿನಿಧಿಗಳಾದ ಗೌರಮ್ಮ ಸರೋಜಾ ಹಾಗೂ ಎಲ್ಲಾ ವಿದ್ಯಾರ್ಥಿಗಳು ಹಾಜರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!