ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಮಸಾಗರದಲ್ಲಿ ವಿಜೃಂಭಣೆಯಿಂದ ಗಂಗಾದೇವಿ ಗಂಗೆಸ್ಥಳ, ಭಾವಚಿತ್ರ ಮೆರವಣಿಗೆ

ಬಳ್ಳಾರಿ / ಕಂಪ್ಲಿ : ತಾಲೂಕಿನ ರಾಮಸಾಗರ ಗ್ರಾಮದಲ್ಲಿ ಗಂಗಾಮತ ಸಮಾಜದಿಂದ ಗಂಗಾದೇವಿ ಗಂಗೆಸ್ಥಳ ಮತ್ತು ಭಾವಚಿತ್ರ ಮೆರವಣಿಗೆ ಶುಕ್ರವಾರ ಅದ್ಧೂರಿಯಾಗಿ ನಡೆಯಿತು.
ಇಲ್ಲಿನ ಮುಖ್ಯರಸ್ತೆ ಬದಿಯಲ್ಲಿ ಗಂಗಾಮತ ಸಮಾಜದ ಗಂಗಾ ಪರಮೇಶ್ವರಿ ಸೇವಾ ಸಮಿತಿ ಟ್ರಸ್ಟ್‌ ನ ನಾಮಫಲಕ ಉದ್ಘಾಟಿಸಲಾಯಿತು.
ತುಂಗಭದ್ರ ನದಿ ತಟದಲ್ಲಿ ಗಂಗೆಪೂಜೆ ಸಲ್ಲಿಸಿ, ನಂತರ ಗಂಗೆಸ್ಥಳ ಮೆರವಣಿಗೆ ಜರುಗಿತು. ಪೂಜಾ, ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ ಶ್ರದ್ದಾಭಕ್ತಿಯಿಂದ ನೆರವೇರಿದವು.

ಮೆರವಣಿಗೆ ಗಂಗಾದೇವಿ ದೇವಸ್ಥಾನದಿಂದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ, ಎದುರು ಬಸವಣ್ಣ ಮೂಲಕ ಪುನಃ ದೇವಸ್ಥಾನದಲ್ಲಿ ಸಮಾವೇಶಗೊಂಡಿತು.
ಮಹಿಳೆ ಕಳಸ, ಡೊಳ್ಳು ಕುಣಿತ ಸೇರಿದಂತೆ ನಾನಾ ಕಲಾ ಪ್ರಕಾರಗಳೊಂದಿಗೆ ವಿಜೃಂಭಣೆಯಿಂದ ಗಂಗಾದೇವಿ ಭಾವಚಿತ್ರ ಮೆರವಣಿಗೆ ನೆರವೇರಿತು.
ಈ ಸಂದರ್ಭದಲ್ಲಿ ಗಂಗಾಮತ ಸಮಾಜದ ಮುಖಂಡರು, ಯುವಕರು, ಮಹಿಳೆಯರು, ಮಕ್ಕಳು ಸೇರಿದಂತೆ ಎಲ್ಲಾ ವರ್ಗದವರು ಪಾಲ್ಗೊಂಡಿದ್ದರು. ನಂತರ ಅನ್ನದಾಸೋಹ ಏರ್ಪಡಿಸಲಾಗಿತ್ತು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!