ಹುಬ್ಬಳ್ಳಿ : ಕಳೆದ ಒಂದು ದಶಕದಿಂದ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ತನ್ನದೇ ಆದಂತಹ ವಿಭಿನ್ನ, ವಿನೂತನವಾಗಿ ರಾಜ್ಯದ 31 ಜಿಲ್ಲೆಗಳಲ್ಲಿ ಹಾಗೂ ವಿವಿಧ ರಾಜ್ಯಗಳಲ್ಲಿಯೂ ಕಾರ್ಯಕ್ರಮಗಳನ್ನು ಮಾಡುತ್ತಾ ಎಲೆಮರೆಕಾಯಿಯಂತಿರುವ ಪ್ರತಿಭೆಗಳನ್ನು ಬೆಳೆಸಲು, ಸಾಹಿತ್ಯಿಕವಾಗಿ, ಸಾಂಸ್ಕೃತಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಕಾರ್ಯ ಮಾಡುತ್ತಾ ಇದೀಗ ಬೆಳಕು ಸಂಸ್ಥೆ ವತಿಯಿಂದ 125ನೇ ಕಾರ್ಯಕ್ರಮ “ಬೆಳಕು ಸಮ್ಮೇಳನ”ವನ್ನು ಜುಲೈ 12, 2026ರಂದು ಭಾನುವಾರ ಮುಂಜ9.30 ರಿಂದ ಸಂಜೆ 7ಗಂಟೆಯವರಿಗೆ ಹುಬ್ಬಳ್ಳಿ ನಗರದಲ್ಲಿರುವ ಸವಾಯಿ ಗಂಧರ್ವ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ.
ಸಮ್ಮೇಳನದಲ್ಲಿ ಸಾಹಿತ್ಯ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಕಾರ್ಯಕ್ರಮಗಳ ಜೊತೆಗೆ ಪ್ರಶಸ್ತಿ ಪ್ರದಾನ ಮತ್ತು ಮೂರು ಪುಸ್ತಕಗಳ ಲೋಕಾರ್ಪಣೆ ಹಾಗೂ ವಿಶೇಷವಾಗಿ ಹಿಂದಿನ ಸಾಹಿತ್ಯ ದೀಪ, ಇಂದಿನ ಸಾಹಿತ್ಯ ಕನ್ನಡಿ ಎನ್ನುವ ವಿಷಯದ ಕುರಿತು ಸವಾಲು -ಜವಾಬು ಎನ್ನುವ ವಿಚಾರ ಗೋಷ್ಠಿ, ಕವಿಗೋಷ್ಠಿ, ಗಾಯನ, ನೃತ್ಯ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ನಡೆಯಲಿವೆ.
ಅಖಿಲ ಭಾರತ ಶಿಕ್ಷಕರ ಫೆಡರೇಶನ್ (ನವದೆಹಲಿ) ರಾಷ್ಟ್ರೀಯ ಅಧ್ಯಕ್ಷರಾದ ಬಸವರಾಜ್ ಗುರಿಕಾರ್ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ,ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಖಜಾಂಚಿಗಳಾದ ಶಿವರುದ್ರಯ್ಯ ವಿ.ವಿ. ಸಮ್ಮೇಳನದ ಉದ್ಘಾಟನೆ ಮಾಡಲಿದ್ದಾರೆ. ಮಾಜಿ ಸಚಿವರು ಹಾಗೂ ಹಿರಿಯ ಸಾಹಿತಿಗಳಾದ ಲೀಲಾದೇವಿ ಆರ್. ಪ್ರಸಾದ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ವಾಣಿಜ್ಯ ತೆರಿಗೆಗಳ ಮೇಲ್ಮನವಿ ವಿಭಾಗದ ಜಂಟಿ ಆಯುಕ್ತರಾದ ಸುಜಾತಾ ಕೆ.ಸಿ.ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ.
ಸಂಘಟನಾ ನುಡಿಯನ್ನು ಸಾಹಿತಿ ಹಾಗೂ ಬೆಳಕು ಸಂಸ್ಥೆಯ ಮಹಿಳಾ ಘಟಕದ ಗೌರವಾಧ್ಯಕ್ಷರಾದ ಡಾ. ನಿರ್ಮಲಾ ಸಿ. ಯಲಿಗಾರ್ ನೀಡಲಿದ್ದಾರೆ, ಬೆಳಕು ಟ್ರಸ್ಟ್ ಸಂಸ್ಥಾಪಕನಾದ ನಾನು ಅಣ್ಣಪ್ಪ ಮೇಟಿಗೌಡ ಪ್ರಾಸ್ತಾವಿಕವಾಗಿ ಮಾತನಾಡಲಿದ್ದೇನೆ ಕಾರ್ಯಕ್ರಮ ಅದ್ದೂರಿಯಿಂದ ಸಾಹಿತ್ಯವಾಗಿ ಸಾಂಸ್ಕೃತಿಕವಾಗಿ ಶೈಕ್ಷಣಿಕವಾಗಿ ನಡೆಯುತ್ತಿರುವುದರಿಂದ ಕಾರ್ಯಕ್ರಮಕ್ಕೆ ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕೆಂದು ವಿನಂತಿಸಿದ್ದಾರೆ.




















