ಜಿಲ್ಲೆಯ ಸಾಧಕ ಹಾಗೂ ಪ್ರಗತಿಪರ
ರೈತರನ್ನು ಗೌರವಿಸುವ ಸಲುವಾಗಿ ಜುಲೈ 16ರಂದು ಸವಾಯಿ ಗಂಧರ್ವ ಸಭಾಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಡಾ.ವಾಸುದೇವ ಮೇಟಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಪೋಸ್ಟರ್ ಬಿಡುಗಡೆ ಗೊಳಿಸಿ ಮಾತನಾಡಿದ ಅವರು, ಧಾರವಾಡ ಜಿಲ್ಲಾ
ರೈತ ಸಂಘದ ನೇತೃತ್ವದಲ್ಲಿ ಈ ಕಾರ್ಯಕ್ರಮ ಜರುಗಲಿದ್ದು, ಕೃಷಿ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಜಿಲ್ಲೆಯ ಪ್ರಗತಿಪರ ರೈತರಿಗೆ ವಿಶೇಷ ಗೌರವ ಸಮರ್ಪಣೆ ಮಾಡಲಾಗುವುದು. ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಡಾ.ವಾಸುದೇವ ಮೇಟಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪಾಲ್ಗೊಳ್ಳಲಿದ್ದಾರೆ.
ಶಾಸಕರಾದ ಪ್ರಸಾದ ಅಬ್ಬಯ್ಯ, ಸಂತೋಷ್ ಲಾಡ್, ಎನ್.ಎಚ್. ಕೋನರೆಡ್ಡಿ, ಶಿವಾನಂದ ಡಿ.ಬೆಂತೂರ, ಮಹೇಶ ಟೆಂಗಿನಕಾಯಿ, ಅರವಿಂದ ಬೆಲ್ಲದ, ಎಂ.ಆರ್.ಪಾಟೀಲ ಹಾಗೂ ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಸೇರಿದಂತೆ ಹಲವು ರಾಜಕೀಯ ಮತ್ತು ಸಹಕಾರಿ ವಲಯದ ಗಣ್ಯರು ಉಪಸ್ಥಿತರಿರಲಿದ್ದಾರೆ. ಜಿಲ್ಲಾ ರೈತ ಸಂಘದ ಮುಖಂಡ ಫಕೀರಪ್ಪ ಕ. ಪೂಜಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ರಾಮನಗೌಡ, ಬಸನಗೌಡ ಪರ್ವತಗೌಡ, ಫಕೀರಪ್ಪ ಕ. ಪೂಜಾರ
ಉಪಸ್ಥಿತರಿದ್ದರು.
- ಕರುನಾಡ ಕಂದ ಸುದ್ದಿ




















