ಹುಬ್ಬಳ್ಳಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಧಾರವಾಡ ಜಿಲ್ಲೆಯ ಹುಬ್ಬಳ್ಳಿ-ಧಾರವಾಡ (ಶಹರ) ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ 2025-26ನೇ ಸಾಲಿಗೆ ಖಾಲಿಯಿರುವ ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿರುವಂತೆ ಸ್ವಿಕೃತಗೊಂಡ ಅರ್ಜಿಗಳನ್ನು ಜಿಲ್ಲಾ ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಸಭೆಯಲ್ಲಿ ನಿಯಮಾನುಸಾರ ಪರಿಶೀಲಿಸಿ ಅರ್ಹ ಅಭ್ಯರ್ಥಿಗಳನ್ನು ಗುರುತಿಸಲಾಗಿದೆ. ಅಂಗನವಾಡಿ ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಉಪನಿರ್ದೆಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಧಾರವಾಡ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹುಬ್ಬಳ್ಳಿ-ಧಾರವಾಡ(ಶಹರ) ರವರ ಕಛೇರಿಯ ನಾಮಫಲಕದಲ್ಲಿ ಜುಲೈ 16 ರಂದು ಪ್ರಕಟಿಸಲಾಗಿದೆ.
ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಯನ್ನು ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದ ದಿನಾಂಕದಿಂದ 7 ಕೆಲಸದ ದಿನಗಳೊಳಗಾಗಿ ಅಂದರೆ ಜುಲೈ 16 ರಿಂದ 23 ರವರೆಗೆ ಸಂಜೆ 5.30 ಗಂಟೆಯೊಳಗೆ ಆಕ್ಷೇಪಣೆ ಸಲ್ಲಿಸಬಹುದಾಗಿರುತ್ತದೆ. ತಾತ್ಕಾಲಿಕ ಆಯ್ಕೆ ಪಟ್ಟಿ ಹಾಗೂ ಆಕ್ಷೇಪಣೆ ಸಲ್ಲಿಕೆಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಡಿ.ಸಿ ಕಂಪೌಂಡ, ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಹತ್ತಿರ, ಲೋಕೂರು ಬಿಲ್ಡಿಂಗ್, ಮೊದಲನೇ ಮಹಡಿ, ಧಾರವಾಡ ಅಥವಾ ದೂರವಾಣಿ ಸಂಖ್ಯೆ 0836-2440733 ಸಂಪರ್ಕಿಸುವಂತೆ ಹುಬ್ಬಳ್ಳಿ ಧಾರವಾಡ ಶಹರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


















