ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂಪ್ಲಿ ತಾಲೂಕಿನ ಹಂಪಾದೇವನಹಳ್ಳಿ ಗ್ರಾಮ ಪಂಚಾಯತಿ : ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಗಳ ಜಾಗೃತಿ ಕಾರ್ಯಕ್ರಮ

ಬಳ್ಳಾರಿ / ಕಂಪ್ಲಿ: ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿಗಳ ಯೋಜನೆಗೆ ಮೂರು ವರ್ಷ ತುಂಬಿರುವ ಪ್ರಯುಕ್ತ ತಾಲೂಕು ಗ್ಯಾರಂಟಿ ಅಧ್ಯಕ್ಷರಾದ
ಕೆ.ಶ್ರೀನಿವಾಸರಾವ್ ಅಧ್ಯಕ್ಷತೆಯಲ್ಲಿ ಹಾಗೂ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಾದ ಆರ್.ಕೆ. ಶ್ರೀಕುಮಾರ್ ಉಪಸ್ಥಿತಿಯಲ್ಲಿ ಗ್ಯಾರಂಟಿ ಯೋಜನೆಗಳ ಜಾಗೃತಿ ಕಾರ್ಯಕ್ರಮವು
ಹಂಪಾದೇವನಹಳ್ಳಿ ಗ್ರಾಮದಲ್ಲಿ ಜರುಗಿತು.

ಗ್ಯಾರಂಟಿ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಅಧ್ಯಕ್ಷರು ಮತ್ತು ಅಧಿಕಾರಿಗಳು 5 ಗ್ಯಾರಂಟಿ ಯೋಜನೆಗಳ ಸತತವಾಗಿ
ನೋಂದಾಯಿಸಿಕೊಂಡ ಎಲ್ಲಾ ಫಲಾನುಭವಿಗಳಿಗೆ ಕೂಡ ಕಡ್ಡಾಯವಾಗಿ ತಲುಪುತ್ತದೆ ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷ ಕೆ.ಶ್ರೀನಿವಾಸರಾವ್ ಮಾತನಾಡಿ ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರ ಅಧಿಕಾರ ಚುಕ್ಕಾಣಿ ಹಿಡಿದ ಮೇಲೆ ಚುನಾವಣೆ ಸಂದರ್ಭದಲ್ಲಿ
ಮತದಾರರಿಗೆ ಮಾತುಕೊಟ್ಟಂತೆ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ನುಡಿದಂತೆ ನಡೆದಿದ್ದೇವೆ ಯಾವುದೇ ಕಾರಣಕ್ಕೂ ಈ ಐದು
ಗ್ಯಾರಂಟಿಗಳನ್ನು ನಿಲ್ಲಿಸುವ ಅಥವಾ ಬಂದ್ ಮಾಡುವ ಅನಿವಾರ್ಯತೆ ಇಲ್ಲ ಸಮಾಜದ ಕಟ್ಟ ಕಡೆಯ ಫಲಾನುಭವಿ ಕೂಡ ಸಬಲರಾಗುವವರೆಗೂ
ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಸಾರ್ವಜನಿಕರಿಗೆ ಹೇಳಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ,ಗ್ಯಾರೆಂಟಿ ಸಮಿತಿಯ ಸದಸ್ಯರಾದ, ಶಿವಕುಮಾರ್, ವೀರಭದ್ರಗೌಡ ಹಾಗೂ ಗ್ಯಾರಂಟಿ ಯೋಜನೆಯ ಫಲಾನುಭವಿಗಳು ಗ್ರಾಮದ ಹಿರಿಯರು
ಸ್ವಸಹಾಯ ಸಂಘದ ಮಹಿಳೆಯರು ಹಾಗೂ ಸಾರ್ವಜನಿಕರು ಹಾಜರಿದ್ದರು.
ತಾಲ್ಲೂಕಿನ 10 ಗ್ರಾಮ ಪಂಚಾಯತಿಗಳಲ್ಲಿಯೂ ಸರ್ಕಾರದ ಗ್ಯಾರಂಟಿ ಯೋಜನೆಗಳ ಜಾಗೃತಿ ಕಾರ್ಯಕ್ರಮಗಳು ಅನುಷ್ಠಾನ ಸಮಿತಿಯ
ಸದಸ್ಯರು, ತಾ.ಪಂ. ಹಾಗೂ ಗ್ರಾ.ಪಂ. ಅಧಿಕಾರಿಗಳ ನೇತೃತ್ವದಲ್ಲಿ ಯಶಸ್ವಿಯಾಗಿ ಜರುಗಿದವು.
ಕಾರ್ಯಕ್ರದಲ್ಲಿ ಪಿಡಿಒಗಳು, ಕಾರ್ಯದರ್ಶಿಗಳು, ಸಿಬ್ಬಂದಿಗಳು, ಗ್ಯಾರಂಟಿ ಯೋಜನೆಯ
ಫಲಾನುಭವಿಗಳು ಭಾಗವಹಿಸಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!