ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಎಸ್ ಸಿ, ಎಸ್ ಟಿ ಸಮುದಾಯದವರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು : ಎಂ.ರಾಜಾಭಕ್ಷಿ

ಬಳ್ಳಾರಿ / ಕಂಪ್ಲಿ: ಸರ್ಕಾರದ ವಿವಿಧ ಯೋಜನೆಗಳನ್ನು, ಸೌಲಭ್ಯಗಳನ್ನು ಅರಿತುಕೊಂಡು, ಅವುಗಳನ್ನು ಸಮರ್ಪಕವಾಗಿ ಸದ್ಭಳಕೆ ಮಾಡಿಕೊಳ್ಳುವ ಮೂಲಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು (ಎಸ್ ಸಿ,ಎಸ್ ಟಿ) ಸರ್ವಾಂಗೀಣ ಅಭಿವೃದ್ಧಿಯನ್ನು ಒಂದಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಸಮಿತಿಯ ಸದಸ್ಯರಾದ ಎಂ ರಾಜಾಭಕ್ಷಿ ತಿಳಿಸಿದರು. ಅವರು ನಂ 10 ಮುದ್ದಾಪುರ ಗ್ರಾ.ಪಂ ವ್ಯಾಪ್ತಿಯ ಕಣವಿ ತಿಮ್ಮಲಾಪುರ ಗ್ರಾಮದಲ್ಲಿ ಏಪೇಡಿಸಿದ್ದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜಾಗೃತಿ ಸಭೆಯಲ್ಲಿ ಮಾತನಾಡಿದರು. ಪರಿಶಿಷ್ಟರ ಕಾಲೋನಿಗಳ ಅಭಿವೃದ್ಧಿಗೆ ಸರ್ಕಾರ ವಿಶೇಷ ಯೋಜನೆಗಳನ್ನು ರೂಪಿಸಿದೆ. ಕುಡಿಯುವ ನೀರು, ವಸತಿ, ರಸ್ತೆಗಳು ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸಲಗುತ್ತಿದೆ.ಶಿಕ್ಷಣ ಸೌಲಭ್ಯ ಪಡೆದುಕೊಂಡು ಸಮಾಜದ ಮುಖ್ಯವಾಹಿನಿಯತ್ತ ಸಾಗಬೇಕು ಎಂದರು.
ಸರ್ಕಾರದ ಪಂಚ ಗ್ಯಾರಂಡಿ, ಮತದಾರರ ಪಟ್ಟಿ ಪರಿಷ್ಕರಣೆ, ಹೊಸ ಮತದಾರರ ಸೇರ್ಪಡೆ ಕುರಿತು ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಪಿಡಿಒ ಶಿಲ್ಪರಾಣಿ, ಆಡಳಿತಾಧಿಕಾರಿ ಎಂ.ನಾರಾಯಣಸ್ವಾಮಿ, ಗ್ರಾ.ಪಂ.ಮಾಜಿ ಸದಸ್ಯ ಆರ್.ಎಂ.ರಾಮಯ್ಯ, ವೆಂಕಟೇಶ್ ಸೇರಿದಂತೆ ಇತರರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!