ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಹಿಂದುಳಿದ ವರ್ಗಗಳಿಗೆ ಅನುಕೂಲವಾಗಿದೆ : ಕೆ.ಶ್ರೀನಿವಾಸರಾವ್

ಬಳ್ಳಾರಿ / ಕಂಪ್ಲಿ : ಕಳೆದ ಮೂರು ವರ್ಷಗಳಿಂದ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೇಸ್ ಸರ್ಕಾರ ನೀಡಿರುವ ಪಂಚ ಗ್ಯಾರಂಟಿ ಯೋಜನೆಗಳು ರಾಜ್ಯ ಜನತೆಗೆ ಅದರಲ್ಲೂ ಹಿಂದುಗಳಿದ ವರ್ಗಗಳಿಗೆ ಅನುಕೂಲವಾಗಿವೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠನ ಸಮಿತಿ ತಾಲ್ಲೂಕು ಅಧ್ಯಕ್ಷ ಕೆ.ಶ್ರೀನಿವಾಸರಾವ್ ತಿಳಿಸಿದರು.
ಅವರು ತಾಲ್ಲೂಕಿನ ಹಂಪಾದೇವನಹಳ್ಳಿ ಗ್ರಾ.ಪಂ.ವ್ಯಾಪ್ತಿಯ ಜವುಕು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಪಂಚ ಗ್ಯಾರಂಟಿ ಯೋಜನೆಗಳ ಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಹಾಗೂ ವಿಬಿ ರಾಮಜಿ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ನೋಂದಾಯಿಸಿಕೊಂಡ ಫಲಾನುಭವಿಗಳಿಗೆ ಗ್ಯಾರಂಟಿಗಳನ್ನು ತಲುಪಿಸಲಾಗವುದು. ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿಗಳನ್ನು ನಿಲ್ಲಿಸದೇ ಅರ್ಹರಿಗೆ ಸೂಕ್ತವಾಗಿ ತಲುಪಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.
ತಾ.ಪಂ.ಇಒ ಆರ್.ಕೆ.ಶ್ರೀಕುಮಾರ್ ಮಾತನಾಡಿ ಸರ್ಕಾರದ ಗ್ಯಾರಂಟಿಗಳನ್ನು ಬಳಸಿಕೊಂಡು ಪ್ರಗತಿ ಸಾದಿಸಬೇಕು. ಸರ್ಕಾರದ ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ ಯೋಜನೆ ಸೇರಿದಂತೆ ಇತರೆ ಯೋಜನೆಗಳು ಹಿಂದುಳಿದ ಜನತೆಗೆ ವರದಾನವಾಗಿವೆ. ಗ್ಯಾರಂಟಿಗಳನ್ನು ಕಡಿತಗೊಳಿಸದೇ ಎಲ್ಲರಿಗೂ ತಲುಪಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಶಿವಕುಮಾರ್, ವೀರಭದ್ರಗೌಡ, ಎಂ.ರಾಜಾಭಕ್ಷಿ ಮುಖಂಡರಾದ ರಾಜೇಗೌಡ, ಎ.ಹುಲುಗಪ್ಪ, ಎ.ಕಿಮಾರಸ್ವಾಮಿ, ಹನುಮಂತಪ್ಪ, ಸಿ.ಬಸವರಾಜ, ಎಸ್.ಬಸವರಾಜ, ಪಿಡಿಒ ಬೀರಲಿಂಗ, ಐಈಸಿ ಸಂಯೋಜಕ ಎಚ್.ಹನುಮೇಶ, ಡಿಇಒ ನಾಗರಾಜ, ಕರವಸೂಲಿಗಾರ ಜಡೆಯ್ಯಸ್ವಾಮಿ, ಬಿಎಫ್ ಟಿ ಪಂಪಾಪತಿ, ಎಂಬಿಕೆ ಪುಷ್ಪಾವತಿ ಸೇರಿದಂತೆ ಸಾರ್ವಜನಿಕರು ಭಾಗವಹಿಸಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!