ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಳ್ಳಾರಿ- ಗುಂತಕಲ್ ನಡುವಿನ 1,264 ಕೋಟಿ ವೆಚ್ಚದ ರೈಲು ಮಾರ್ಗಕ್ಕೆ ಸಂಪುಟ ಒಪ್ಪಿಗೆ

ನವದೆಹಲಿ, ಜುಲೈ 24: ಕರ್ನಾಟಕದ ರೈಲ್ವೆ ಯೋಜನೆ ಬಗ್ಗೆ ಇಂದು ನಡೆದ ಸಂಪುಟ ಸಭೆಯಲ್ಲಿ ಮುಖ್ಯವಾದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕೇಂದ್ರ ಸಂಪುಟ ನಿರ್ಧಾರಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಆಂಧ್ರಪ್ರದೇಶ ಮತ್ತು ಕರ್ನಾಟಕವನ್ನು ಸಂಪರ್ಕಿಸುವ 1,264 ಕೋಟಿ ರೂ. ವೆಚ್ಚದ ಬಳ್ಳಾರಿ-ಗುಂತಕಲ್ ರೈಲ್ವೆ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಪಿಎಂ ಗತಿ ಶಕ್ತಿ ರಾಷ್ಟ್ರೀಯ ಬೃಹತ್ ಯೋಜನೆ ಅಡಿಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ಈ 46 ಕಿ.ಮೀ ಉದ್ದದ ಮಲ್ಟಿ-ಟ್ರ್ಯಾಕಿಂಗ್ ಯೋಜನೆಯು, ರೈಲು ಮಾರ್ಗದ ಸಾಮರ್ಥ್ಯವನ್ನು ಹೆಚ್ಚಿಸುವುದು, ಸರಕು ಸಾಗಣೆಯನ್ನು ಸುಗಮಗೊಳಿಸುವುದು ಮತ್ತು ಬಹುಮಾದರಿ ಸಂಪರ್ಕವನ್ನು ಬಲಪಡಿಸುವ ಗುರಿಯನ್ನು ಹೊಂದಿದ್ದು, 2028-29ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಈ ರೈಲು ಮಾರ್ಗ ಕರ್ನಾಟಕದ ಬಳ್ಳಾರಿ ಹಾಗೂ ಆಂಧ್ರಪ್ರದೇಶದ ಅನಂತಪುರ ಮತ್ತು ಕರ್ನೂಲ್ ಸೇರಿದಂತೆ ಒಟ್ಟು 3 ಜಿಲ್ಲೆಗಳಲ್ಲಿ ಈ ಯೋಜನೆ ಹಾದುಹೋಗಲಿದೆ.

ಇತ್ತೀಚೆಗೆ ಬಳ್ಳಾರಿ ಸಂಸದರಾದ ಇ. ತುಕಾರಾಂ ಇದರ ಬಗ್ಗೆ ಪ್ರಸ್ತಾವನೆ ಸಲ್ಲಿಸಿ ಮನವಿ ಮಾಡಿಕೊಂಡಿದ್ದರು. ಇದರ ಫಲವಾಗಿ ಕಾರ್ಯ ರೂಪಗೊಂಡಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!