ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಚಳವಳಿಗೆ ಸಂಬಂಧಿಸಿದಂತೆ, ರಾಷ್ಟ್ರ ರಾಜಧಾನಿಯಲ್ಲಿ ಹಿರಿಯ ಕೇಂದ್ರ ಸಚಿವರು ಮತ್ತು ಪ್ರತಿಭಟನಾಕಾರರ ಪ್ರತಿನಿಧಿಗಳ ನಡುವೆ ನಡೆದ ಸಭೆಯ ಬಳಿಕ, ತಮ್ಮ ಪ್ರಮುಖ ಬೇಡಿಕೆಯ ಕುರಿತು ತೀರ್ಮಾನ ಕೈಗೊಳ್ಳಲು ಕೇಂದ್ರ ಸರ್ಕಾರವು ಶನಿವಾರ ಮಧ್ಯಾಹ್ನದವರೆಗೆ ಕಾಲಾವಕಾಶ ಕೋರಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ ಮಾಹಿತಿ ನೀಡಿದೆ. ಈ ಸಭೆಯಲ್ಲಿ ಸರ್ಕಾರದ ಪರವಾಗಿ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಮತ್ತು ಪಿಎಮ್‌ಒ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಭಾಗವಹಿಸಿದ್ದರೆ, ಸಿಜೆಪಿ ಪರವಾಗಿ ಅದರ ರಾಷ್ಟ್ರೀಯ ವಕ್ತಾರರಾದ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಭಾಗವಹಿಸಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್




















