ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಧರ್ಮೇಂದ್ರ ಪ್ರಧಾನ್ ಖಾತೆಯನ್ನು ನುಂಗಿದ ‘ಜಿರಲೆ’, ಕೊನೆಗೂ ರಾಜೀನಾಮೆ ಸಲ್ಲಿಕೆ

ನಿನ್ನೆಯೇ ( ಶನಿವಾರ) ರಾಜೀನಾಮೆ ಸ್ಪೋಟಕ ಸುದ್ದಿ ಪ್ರಕಟಿಸಿದ “ಕರುನಾಡ ಕಂದ”

ನವದೆಹಲಿ : ದೆಹಲಿಯ ಜಂತರ್ ಮಂತರ್‌ನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನಡೆಸಿದ ಬೃಹತ್ ಪ್ರತಿಭಟನೆಗಳ ಬೆನ್ನಲ್ಲೇ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಧರ್ಮೇಂದ್ರ ಪ್ರಧಾನ್ ಇಂದು ಶನಿವಾರ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶುಕ್ರವಾರ ಕೇಂದ್ರ ಸಚಿವರಾದ ಜೆಪಿ ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರನ್ನು ಭೇಟಿಯಾಗಿದ್ದ ಸಿಜೆಪಿ ವಕ್ತಾರರು ತಮ್ಮ 3 ಬೇಡಿಕೆಗಳನ್ನು ಸಲ್ಲಿಸಿದ್ದರು. ಅದರಲ್ಲಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆಯೇ ಮೊದಲ ಮತ್ತು ಮುಖ್ಯವಾದ ಬೇಡಿಕೆಯಾಗಿತ್ತು. ಸಂಧಾನ ಮಾತುಕತೆಯ ವೇಳೆ ಉಳಿದ ಎರಡು ಬೇಡಿಕೆಗಳಿಗೆ ಕೂಡಲೇ ಒಪ್ಪಿಗೆ ಸೂಚಿಸಿದ್ದ ಕೇಂದ್ರ ಸಚಿವರು ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ನಿರ್ಧಾರ ತೆಗೆದುಕೊಳ್ಳಲು ಶನಿವಾರ ಮಧ್ಯಾಹ್ನದವರೆಗೆ ಸಮಯ ಕೋರಿದ್ದರು.
ಇದೀಗ ಕೊನೆಗೂ ಸಿಜೆಪಿ ಹಾಗೂ ಪ್ರತಿಭಟನಾಕಾರರ ಬೇಡಿಕೆಗೆ ಮಣಿದಿರುವ ಕೇಂದ್ರ ಸರ್ಕಾರ ಧರ್ಮೇಂದ್ರ ಪ್ರಧಾನ್ ಅವರಿಂದ ರಾಜೀನಾಮೆ ಪಡೆದಿದೆ. ಅಲ್ಲಿಗೆ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ಪ್ರತಿಭಟನೆ ಮಾಡುತ್ತಿರುವವರ ಎಲ್ಲ ಬೇಡಿಕೆಗಳೂ ಈಡೇರಿದಂತಾಗಿದೆ.

ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಧರ್ಮೇಂದ್ರ ಪ್ರಧಾನ್, “ಜಂತರ್ ಮಂತರ್‌ನಲ್ಲಿ ಹಾಗೂ ದೇಶಾದ್ಯಂತ ಇರುವ ಪರಿಸ್ಥಿತಿಯ ಲಾಭವನ್ನು ದೇಶವಿರೋಧಿ ಶಕ್ತಿಗಳು ಪಡೆಯಬಾರದು. ದೇಶವು ಒಗ್ಗಟ್ಟಿನಿಂದ ಇರಬೇಕು. ಭಾರತದ ವಿದ್ಯಾರ್ಥಿಗಳು ಕಾನೂನು ಸಂಕಷ್ಟದಲ್ಲಿ ಸಿಲುಕಿಕೊಳ್ಳದೆ ತಮ್ಮ ಅಧ್ಯಯನ ಮತ್ತು ವೃತ್ತಿಜೀವನದ ಮೇಲೆ ಗಮನ ಹರಿಸಬೇಕು ಎಂಬ ಕಾರಣಕ್ಕಾಗಿ ನಾನು ಪ್ರಧಾನಮಂತ್ರಿಯವರಿಗೆ ನನ್ನ ರಾಜೀನಾಮೆಯನ್ನು ಸಲ್ಲಿಸಿದ್ದೇನೆ” ಎಂದು ತಿಳಿಸಿದ್ದಾರೆ.

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಬಳಿಕ ಎಕ್ಸ್​ನಲ್ಲಿ ಪ್ರತಿಕ್ರಿಯಿಸಿದ ಸಿಜೆಪಿ, “ಶಿಕ್ಷಣ ಸಚಿವರು ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ, ವಿದ್ಯಾರ್ಥಿ ಶಕ್ತಿಗೆ ಜಯವಾಗಲಿ” ಎಂದು ಬರೆದುಕೊಂಡಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!