ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಧರ್ಮೇಂದ್ರ ಪ್ರಧಾನ ರಾಜೀನಾಮೆ ಕುರಿತು ಗೋಪಾಲ ಎಲ್ ನಾಟೇಕಾರ್ ಪ್ರತಿಕ್ರಿಯೆ

ಸೇಡಂ : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆ ವಿದ್ಯಾರ್ಥಿಗಳ ಹೋರಾಟ ಮತ್ತು ಪ್ರಜಾಪ್ರಭುತ್ವದ ಒತ್ತಡಕ್ಕೆ ದೊರೆತ ನೈತಿಕ ಗೆಲುವಾಗಿದೆ ಎಂದು ಅಂಬೇಡ್ಕರ್ ಯುವ ಸೇನೆ ಸೇಡಂ ತಾಲೂಕ ಅಧ್ಯಕ್ಷರು ಹಾಗೂ ವಕೀಲರಾದ ಗೋಪಾಲ ಎಲ್ ನಾಟೆಕಾರ್ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು ದೇಶದ ಶಿಕ್ಷಣ ವ್ಯವಸ್ಥೆಯ ಹೊಣೆ ಹೊತ್ತಿದ್ದ ಸಚಿವರು ಪರೀಕ್ಷಾ ಅಕ್ರಮಗಳು ಹಾಗೂ ವಿದ್ಯಾರ್ಥಿಗಳ ಆಕ್ರೋಶದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿರುವುದು ಅಧಿಕಾರಕ್ಕಿಂತ ವಿದ್ಯಾರ್ಥಿಗಳ ಭವಿಷ್ಯವೆ ಮುಖ್ಯ ಎಂಬುವುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ ಎಂದು ಹೇಳಿದ್ದಾರೆ.

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮಗಳು ನಡೆದಾಗ ಆದರ ನೈತಿಕತೆ ಹಾಗೂ ಆಡಳಿತಾತ್ಮಕ ಹೊಣೆಗಾರಿಕೆಯನ್ನು ಸಂಬಂಧಿಸಿದ ಸಚಿವರು ಹೊರುವುದು ಪ್ರಜಾಪ್ರಭುತ್ವದ ಜವಾಬ್ದಾರಿಯಾಗಿದೆ. ಬಡವರು ದಲಿತರು ಹಿಂದುಳಿದವರು ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳು ಕಾಲ ಶ್ರಮಪಟ್ಟು ಪರೀಕ್ಷೆಗಳಿಗೆ ಸಿದ್ದರಾಗುತ್ತಾರೆ ಇಂತಹ ಸಂಧರ್ಭದಲ್ಲಿ ಪರೀಕ್ಷಾ ಆಕ್ರಮಗಳು ಅವರ ಪರಿಶ್ರಮ, ಸಮಯ ಮತ್ತು ಭವಿಷ್ಯಕ್ಕೆ ಧಕ್ಕೆ ತರುತ್ತವೆ ಎಂದು ಅವರು ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಯಾವುದೇ ರೀತಿಯ ರಾಜಿ ಮಾಡಿಕೊಳ್ಳಬಾರದು. ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಹಾಗೂ ಸಾಮಾಜಿಕ ನ್ಯಾಯವನ್ನು ಖಚಿತಪಡಿಸಬೇಕು.

ಸಚಿವರ ರಾಜೀನಾಮೆ ಒಂದು ಅಂತ್ಯವಲ್ಲ; ಶಿಕ್ಷಣ ಕ್ಷೇತ್ರದಲ್ಲಿ ಸಮಗ್ರ ಸುಧಾರಣೆಗೆ ಇದು ಆರಂಭವಾಗಬೇಕು ಗೋಪಾಲ ಎಲ್ ನಾಟೆಕಾರ್ ಆಗ್ರಹಿಸಿದ್ದಾರೆ. ಹೋರಾಟ, ವಿದ್ಯಾರ್ಥಿಗಳ ಯುವಜನತೆಯ ಧ್ವನಿ ಹಾಗೂ ಸಾಮಾಜಿಕ ನ್ಯಾಯದ ಪರವಾಗಿ ಎಲ್ಲರೂ ಒಂದಾಗಿ ನಿಲ್ಲಬೇಕೆಂದು ಹೇಳಿದ್ದಾರೆ.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!