ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜುಲೈ ೨೯ ರಂದು ಕೊಡಗು ಜಿಲ್ಲಾ ರೈತ ಸಂಘದ ಪ್ರಮುಖರ ಸಭೆ ಬಂದ ನಿರ್ಧಾರ

ಪೊನ್ನಂಪೇಟೆ : ಬಿಡದಿ ರೈತರ ಹೋರಾಟಕ್ಕೆ ತೆರಳುತ್ತಿದ್ದ ರೈತರನ್ನು ಬಂಧಿಸಿರುವ ಕ್ರಮ ಖಂಡಿಸಿ ಕೊಡಗು ಬಂದ್ ಕರೆ ನೀಡುವ ಪೂರ್ವಭಾವಿ ಸಭೆಯನ್ನು ಜುಲೈ 29 ರಂದು ಗೋಣಿಕೊಪ್ಪ ಮತ್ತು ಸೋಮವಾರಪೇಟೆಯಲ್ಲಿ ಸಭೆ ನಡೆಸಿ ಪ್ರಕಟಿಸಲಾಗುವುದು ಎಂದು ಕೊಡಗು ರೈತ ಸಂಘ ಮತ್ತು ಹಸಿರು ಸೇನೆ ಕಾನೂನು ಸಲಹೆಗಾರ ಹೇಮಚಂದ್ರ ತಿಳಿಸಿದರು.
ಸಂಘದ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆ ನಂತರ ಈ ಬಗ್ಗೆ ತಿಳಿಸಿದ ಅವರು, ಸಂಘ- ಸಂಸ್ಥೆ ಪ್ರಮುಖರು, ಪಕ್ಷಗಳ ಮುಖಂಡರು ಸೇರಿದಂತೆ ಪ್ರಮುಖರನ್ನು ಸಭೆಗೆ ಆಹ್ವಾನಿಸಿ ಬಂದ್ ನಡೆಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಬಂದ್ ನಡೆಸಲು ಎಲ್ಲರ ಸಹಕಾರ ಅಗತ್ಯ. ಈ ನಿಟ್ಟಿನಲ್ಲಿ ಸಲಹೆ, ಮಾರ್ಗದರ್ಶನ ಪಡೆದು ಮುಂದುವರಿಯಲಾಗುವುದು. ಬುಧವಾರ ಬೆಳಿಗ್ಗೆ 10.30 ಗಂಟೆಗೆ ಗೋಣಿಕೊಪ್ಪ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಭಾಂಗಣ ಮತ್ತು ಸೋಮವಾರಪೇಟೆ ಪತ್ರಿಕಾ ಭವನದಲ್ಲಿ ಪ್ರತ್ಯೇಕವಾಗಿ ಸಭೆ ನಡೆಸಲಾಗುವುದು. ಈ ಬಗ್ಗೆ ಸಂಘದ ಅಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಅಧ್ಯಕ್ಷತೆಯಲ್ಲಿ ನಡೆ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಪ್ರಕಟಿಸಿದರು.
ಹೋರಾಟದಿಂದ ರೈತರನ್ನು ವಶಕ್ಕೆ ಪಡೆದು, ಸುತ್ತಾಡಿಸಿ, ಬಂಧನದಲ್ಲಿಟ್ಟಿರವುದು ಪೊಲೀಸ್ ಇಲಾಖೆ ನಡೆ ಸರಿಯಾಗಿಲ್ಲ. ಮಹಿಳೆಯರು ಸೇರಿದಂತೆ ರೈತರು ಕೂಡ ಇದರಿಂದ ತೊಂದರೆ ಅನುಭವಿಸಲಾಗಿದೆ. ಇದರಿಂದಾಗಿ ಕ್ರಮವನ್ನು ಖಂಡಿಸಿ ಮುಂದುವರಿಯಬೇಕಿದೆ. ಈ ನಿಟ್ಟಿನಲ್ಲಿ ಎಲ್ಲರ ಸಹಕಾರ, ಬೆಂಬಲವನ್ನು ಪಡೆದು ಮುಂದುವರಿಯಲಾಗುವುದು ಎಂದು ತಿಳಿಸಿದರು.

ರೈತ ಸಂಘದ ಸೋಮವಾರಪೇಟೆ ತಾಲೂಕು ಅಧ್ಯಕ್ಷ ಕೆ. ಎಂ. ದಿನೇಶ್ ಮಾತನಾಡಿ, ರೈತರನ್ನು ನಡೆಸಿಕೊಂಡ ರೀತಿಯನ್ನು ರೈತ ಸಂಘ ಖಂಡಿಸುತ್ತದೆ. ರೈತರನ್ನು ಕಡೆಗಣಿಸಿ ಸರ್ಕಾರ ಉಳಿದಿರುವ ಇತಿಹಾಸವಿಲ್ಲ. ಇದರಿಂದಾಗಿ ಕ್ರಮವನ್ನು ಖಂಡಿಸಲು ಸೂಕ್ತ ನಿರ್ದೇಶನ ಪಡೆದುಕೊಂಡು ಮುಂದುವರಿಯಲು ಸಭೆ ನಡೆಸಲಾಗುವುದು ಎಂದು ತಿಳಿಸಿದರು.

ವರದಿ: ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!