ಕುಶಾಲನಗರ :ಪುರಸಭೆ ವತಿಯಿಂದ ಸರ್ ಆರ್. ಗುಂಡುರಾಯರ ಸ್ಮಾರಕ ಪ್ರತಿಮೆ ನಿರ್ಮಾಣ ಕುರಿತು ಇಂದು ಪುರಸಭೆ ಸಭಾಂಗಣದಲ್ಲಿ ಸಾರ್ವಜನಿಕ ಸಭೆ ನಡೆಯಿತು
ಸಭೆಯಲ್ಲಿ ಸಾರ್ವಜನಿಕರು ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು ಸಾಮಾಜಿಕ ಸಂಘಟನೆಗಳ ಪ್ರತಿನಿಧಿಗಳು ಕೊಡಗು ಜನ ಅಭಿವೃದ್ಧಿ ಸಮಿತಿಯ ಸಂಸ್ಥಾಪಕರಾದ ಎಂ.ಎಂ.ದಾವುದ್ ಜಿಲ್ಲಾ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ವಿವಿಧ ರಾಜಕೀಯ ಮುಖಂಡರು ಭಾಗವಹಿಸಿದ್ದರು
ಸಭೆಯಲ್ಲಿ ಸರ್ ಆರ್. ಗುಂಡೂರಾಯರ ಪ್ರತಿಮೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರ ಅಭಿಪ್ರಾಯಗಳು ಹಾಗೂ ಸಲಹೆಗಳನ್ನು ಅಧಿಕಾರಿಗಳು ಆಲಿಸಿದರು ಈ ವೇಳೆ ಪ್ರತಿಮೆ ನಿರ್ಮಾಣವು ಗುಂಡುರಾಯರ ವ್ಯಕ್ತಿತ್ವ ಮತ್ತು ಕನ್ನಡದ ಗೌರವಕ್ಕೆ ತಕ್ಕಂತೆ ರೂಪುಗೊಳ್ಳಬೇಕು ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದರು.
ವರದಿ: ಪ್ರಿತುನ್ ಪೂವಣ್ಣ



















