ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣ ನಮ್ಮ ಗುರಿ: ಕೊರಟಗೆರೆಯಲ್ಲಿಪೊಲೀಸ್ ಇಲಾಖೆ ವತಿಯಿಂದ ಜಾಗೃತಿ ಅಭಿಯಾನ.

ಕೊರಟಗೆರೆ: ಯುವಕರು ಮತ್ತು ಯುವಪೀಳಿಗೆ ಮಾದಕ ವ್ಯಸನದಿಂದ ದೂರವಿರಿಸಲು, “ಡ್ರಗ್ಸ್ ಮುಕ್ತ ಕರ್ನಾಟಕ” ನಿರ್ಮಾಣದ ಸಂಕಲ್ಪದೊಂದಿಗೆ ತುಮಕೂರು ಜಿಲ್ಲಾ ಪೊಲೀಸ್ ಇಲಾಖೆ, ಕೊರಟಗೆರೆ ಪೊಲೀಸ್ ಇಲಾಖೆ ಹಾಗೂ ರಾಘವೇಂದ್ರ ಇಂಟರ್‌ನ್ಯಾಷನಲ್ ಶಾಲೆಯ ಸಹಯೋಗದಲ್ಲಿ ಪಟ್ಟಣದ ಎಂ.ಜಿ. ಪ್ಯಾಲೇಸ್‌ನಲ್ಲಿ ಸೋಮವಾರ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಪ್ರಿಯದರ್ಶಿನಿ ಪಿಯು ಕಾಲೇಜಿನ ನೂರಾರು ವಿದ್ಯಾರ್ಥಿಗಳು, ಉಪನ್ಯಾಸಕರು, ಶಿಕ್ಷಕರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಪಡೆದು, ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿದರು.

ಪ್ರಿಯದರ್ಶಿನಿ ಪಿಯು ಕಾಲೇಜಿನ ಪ್ರಾಂಶುಪಾಲ ರುದ್ರೇಶ್ ಮಾತನಾಡಿ, ವಿದ್ಯಾರ್ಥಿಗಳು ಯಾವುದೇ ಆಮಿಷಗಳಿಗೆ ಒಳಗಾಗದೆ ಶಿಕ್ಷಣದತ್ತ ಗಮನಹರಿಸಬೇಕು. ಮಾದಕ ವ್ಯಸನದಿಂದ ದೂರವಿದ್ದು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಕೈಜೋಡಿಸುವಂತೆ ಕರೆ ನೀಡಿದರು.
ಮಧುಗಿರಿ ಡಿವೈಎಸ್‌ಪಿ ಮಂಜುನಾಥ್ ಮಾತನಾಡಿ, ಜಿಲ್ಲೆಯಲ್ಲಿ ಮಾದಕ ವಸ್ತುಗಳ ಜಾಲವನ್ನು ನಿರ್ಮೂಲನೆ ಮಾಡಲು ಪೊಲೀಸ್ ಇಲಾಖೆ ನಿರಂತರ ಕಾರ್ಯಾಚರಣೆ ನಡೆಸುತ್ತಿದೆ.

ಅನುಮಾನಾಸ್ಪದ ಚಟುವಟಿಕೆಗಳು ಕಂಡುಬಂದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು. ಡ್ರಗ್ಸ್ ಸೇವನೆ ಹಾಗೂ ಮಾರಾಟ ಕಾನೂನುಬಾಹಿರವಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ತಾಲ್ಲೂಕು ದಂಡಾಧಿಕಾರಿ ಮಂಜುನಾಥ್ ಮಾತನಾಡಿ, ಯುವಕರು ದೇಶದ ಅಮೂಲ್ಯ ಆಸ್ತಿ. ಅವರ ಭವಿಷ್ಯ ಸುರಕ್ಷಿತವಾಗಿರಲು ಪೋಷಕರು, ಶಿಕ್ಷಕರು ಹಾಗೂ ಸಮಾಜದ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕೆಂದು ಹೇಳಿದರು.

ತಾಲ್ಲೂಕು ಆರೋಗ್ಯಾಧಿಕಾರಿಯವರಾದ ಜೋಶ್ನಾ ರೆಡ್ಡಿ ಮಾತನಾಡಿ, ಮಾದಕ ವಸ್ತುಗಳ ಸೇವನೆಯಿಂದ ದೇಹ ಮತ್ತು ಮನಸ್ಸಿನ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು ವ್ಯಸನದಿಂದ ದೂರವಿರಬೇಕೆಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಂತ್ಯದಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ಕೈಜೋಡಿಸುವ ಪ್ರತಿಜ್ಞೆ ಸ್ವೀಕರಿಸಿದರು. ಸಮಾಜದಲ್ಲಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುವ ಇಂತಹ ಕಾರ್ಯಕ್ರಮಗಳು ಯುವಜನರಲ್ಲಿ ಉತ್ತಮ ಅರಿವು ಮೂಡಿಸುತ್ತಿವೆ ಎಂದು ಅಭಿಪ್ರಾಯ ವ್ಯಕ್ತವಾಯಿತು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!