ಕಲ್ಬುರ್ಗಿ ಸುದ್ದಿ :ಜೇವರ್ಗಿ ಮತ್ತು ಯಡ್ರಾಮಿ ತಾಲೂಕಿನ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾದ ರಾಜೇಂದ್ರ /ಸಿದ್ರಾಮಪ್ಪ ಪೂಜಾರಿ ಮಾಜಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಪುತ್ರರಾದ ಇವರ ಕುಟುಂಬದವರು ಎರಡು ತಲೆಮಾರುಗಳಿಂದ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ತಾಲ್ಲೂಕಿನಲ್ಲಿ ಪಕ್ಷದ ಗೆಲುವಿಗೆ ಶ್ರಮಿಸಿದ್ದಾರೆ ಹಾಗೂ ಗ್ರಾಮೀಣ ಮಟ್ಟದಿಂದ ತಾಲೂಕು ಹಾಗೂ ಜಿಲ್ಲಾ ಮಟ್ಟದವರೆಗೂ ಕಾಂಗ್ರೆಸ್ ಪಕ್ಷದ ಹಲವಾರು ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದು ಅಲ್ಲದೆ ಕಾಂಗ್ರೆಸ್ ಪಕ್ಷದ ಹಲವಾರು ಯೋಜನೆಗಳನ್ನು ಗ್ರಾಮೀಣ ಜನರಿಗೆ ಅರಿವು ಮೂಡಿಸಿದ್ದಾರೆ ಅಲ್ಲದೆ ತಮ್ಮದೇ ಅಭಿಮಾನಿ ಯುವ ಸಮುದಾಯವನ್ನು ಕಟ್ಟಿಕೊಂಡು ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ದುಡಿಯುತ್ತಿದ್ದಾರೆ ಆದ್ದರಿಂದ ಕೆಕೆಆರ್‌ಡಿಬಿ ಅಧ್ಯಕ್ಷರು ಹಾಗೂ ತಾಲೂಕಿನ ಶಾಸಕರಾದ ಡಾ. ಅಜಯ್ ಸಿಂಗ್ ಅವರು ರಾಜೇಂದ್ರ ಪೂಜಾರಿ ಅವರ ಕಾಂಗ್ರೆಸ್ ಪಕ್ಷದ ಸೇವೆಯನ್ನು ಪರಿಗಣಿಸಿ ನಿಗಮ ಮಂಡಳಿಯಲ್ಲಿ ರಾಜೇಂದ್ರ ಪೂಜಾರಿ ಅವರಿಗೆ ಒಳ್ಳೆಯ ಸ್ಥಾನಮಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ಕನಕ ಕಾರ್ಮಿಕ ಕಲ್ಯಾಣ ಸಂಘದ ಯುವ ಘಟಕದ ರಾಜ್ಯಾಧ್ಯಕ್ಷರಾದ ಮಲ್ಲಣ್ಣ ಎಂ. ಪೂಜಾರಿ ಬಿಳವಾರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- ಕರುನಾಡ ಕಂದ ಸುದ್ದಿ




















