ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿ, ಈಡೇರಿಸಲು ನಿರಂತರವಾಗಿ ಶ್ರಮಿಸಲಾಗುವುದು : ತಾಲೂಕು ಅಧ್ಯಕ್ಷ ಹನುಮಂತಪ್ಪ

ಬಳ್ಳಾರಿ / ಕಂಪ್ಲಿ : ಶಿಕ್ಷಣದಲ್ಲಿ ಸಾವಿರಾರು ಸಮಸ್ಯೆಗಳಿದ್ದು, ಇಂತಹ ಸಮಸ್ಯೆಗಳಿಗೆ ಒಗ್ಗಟ್ಟಿನೊಂದಿಗೆ ಹೋರಾಟದ ಮೂಲಕ ಬಗೆಹರಿಸಿಕೊಳ್ಳುವ ಜೊತೆಗೆ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿ, ಈಡೇರಿಸಲು ನಿರಂತರವಾಗಿ ಶ್ರಮಿಸಲಾಗುವುದು ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಹನುಮಂತಪ್ಪ ಹೇಳಿದರು.

ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿಯ ಕೆರೆ ಶಾಲೆಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಛೇರಿಯಲ್ಲಿ ಗುರುವಾರ ಸಂಜೆ ಹಮ್ಮಿಕೊಂಡಿದ್ದ ತಾಲೂಕು ಸಂಘದ ನೂತನ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಚುನಾವಣಾಧಿಕಾರಿ ನಿಯಮಾನುಸಾಗರವಾಗಿ ತಾಲೂಕು ಘಟಕಕ್ಕೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಪ್ರಜಾಪ್ರಭುತ್ವದ ಅಡಿಯಲ್ಲಿ ಚುನಾವಣಾ ಪ್ರಕ್ರಿಯೆ ನಡೆದಿದೆ. ತಾಲೂಕಿನಲ್ಲಿ ಎರಡು ಸಂಘಟನೆಗಳು ಆಗಿರುವುದು ನೋವಿನ ಸಂಗತಿಯಾಗಿದೆ. ನಮ್ಮ ಸಂಘದ ಮೂಲಕ ತಾಲೂಕಿನ ಪ್ರತಿಯೊಬ್ಬ ಶಿಕ್ಷಕರ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಲಾಗುವುದು. ಶಿಕ್ಷಣದಲ್ಲಿ ಸಾವಿರಾರು ಸಮಸ್ಯೆಗಳಿದ್ದು, ಇಂತಹ ಸಮಸ್ಯೆಗಳಿಗೆ ಒಗ್ಗಟ್ಟಿನೊಂದಿಗೆ ಹೋರಾಟದ ಮೂಲಕ ಬಗೆಹರಿಸಿಕೊಳ್ಳಬೇಕಾಗಿದೆ. ಸಂಘವನ್ನು ಉಳಿಸಿ ಬೆಳೆಸೋಣ. ಸಂಘಕ್ಕೆ ವ್ಯಕ್ತಿ, ಶಾಶ್ವತವಲ್ಲ, ವ್ಯಕ್ತಿತ್ವ ಶಾಶ್ವತ. ಪ್ರಜಾಸತ್ತಾತ್ಮಕ ಹಾಗೂ ಸಂವಿಧಾನದ ಅಡಿಯಲ್ಲಿ ರಾಜ್ಯದ್ಯಂತ ಚುನಾವಣಾ ಅಧಿಕಾರಿಗಳು ನೇಮಕದೊಂದಿಗೆ ಚುನಾವಣಾ ಪ್ರಕ್ರಿಯೆ ಕಂಪ್ಲಿ ತಾಲೂಕಿನಲ್ಲಿ ನಡೆದಿದ್ದು ಅಧಿಕೃತವಾಗಿ ನಮ್ಮ ಸಂಘ ರಚನೆಯಾಗಿದೆ ಚುನಾವಣಾ ಅಧಿಕಾರಿಗಳಿಂದ ಪ್ರಮಾಣ ಪತ್ರವನ್ನು ಪಡೆದ ಮತ್ತು ಎಲ್ಲಾ ಶಿಕ್ಷಕರು ಸದಸ್ಯತ್ವ ಶುಲ್ಕ ಕಟ್ಟುವ ಡಿಪಿಎಆರ್ ಸಂಘ ಮಾನ್ಯತೆ ಪಡೆದ ಚಂದ್ರಶೇಖರ ನುಗ್ಲಿ ಹಾಗೂ ಶ್ರೀ ಚೇತನ್ ಅವರ ರಾಜ್ಯ ಸಂಘವೇ ಅಂತಿಮ ಎಂದರು.

ನಂತರ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಹೆಚ್.ದೊಡ್ಡಬಸಪ್ಪ ಮಾತನಾಡಿ, ಶಿಕ್ಷಕರ ಸಮಸ್ಯೆಗಳನ್ನು ಆಲಿಸಿ, ಬಗೆಹರಿಸುವಲ್ಲಿ ಸಾಕಷ್ಟು ಶ್ರಮಿಸಲಾಗಿದೆ. ಸಂಘ ವಿರೋಧಿ ಚಟುವಟಿಕೆ ಹಿನ್ನಲೆ ಕೆಲ ಶಿಕ್ಷಕರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಿದ್ದಾರೆ. ಕೆಲವರು ಮೇಲಾಧಿಕಾರಿಗಳ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದು, ನಾವು ಪ್ರತಿಯೊಂದು ಹಂತದಲ್ಲಿ ಅಧಿಕಾರಿಗಳಿಗೆ ಪ್ರಶ್ನೆ ಮಾಡುವುದರಿಂದ ನಮ್ಮನ್ನು ದೂರ ಮಾಡುತ್ತಿದ್ದಾರೆ. ಯಾವುದೇ ಸ್ಥಾನದಲ್ಲಿದ್ದರೂ ಶಿಕ್ಷಕರ ಯೋಗಕ್ಷೇಮದ ಜೊತೆಗೆ ಅವರ ಕಷ್ಟಗಳಿಗೆ ಸ್ಪಂದಿಸಿ, ಈಡೇರಿಸಲಾಗುವುದು ಎಂದರು.

ತಾಲೂಕು ನೂತನ ಅಧ್ಯಕ್ಷ ಹನುಮಂತಪ್ಪ, ಪ್ರಧಾನ ಕಾರ್ಯದರ್ಶಿ ಹೆಚ್.ಜಡಿಯಪ್ಪ , ಖಜಾಂಚಿ ಐ.ಗಂಗಮ್ಮ, ಗೌರವಾಧ್ಯಕ್ಷ ಸಿ.ಕೆ.ರಾಮಚಂದ್ರಪ್ಪ, ಉಪಾಧ್ಯಕ್ಷರಾದ ಸುನಿತಾ ಪೂಜಾರ್, ಕೆ.ಚಂದ್ರಶೇಖರ್, ಸಂಘಟನಾ ಕಾರ್ಯದರ್ಶಿ ಕೆ.ವೀರೇಶ್, ಅಗಳಿ ನಾಗರತ್ನ, ಸಹ ಕಾರ್ಯದರ್ಶಿ ಮಾಲಿಕ್, ಮರಿಸ್ವಾಮಿ ಇವರಿಗೆ ಪ್ರಮಾಣ ಪತ್ರ ನೀಡಿ, ಗೌರವಿಸುವ ಮೂಲಕ ಪದಗ್ರಹಣ ಮಾಡಲಾಯಿತು. ನಂತರ ತಾಲೂಕು ನಾಮ ನಿರ್ದೇಶಕ ಸದಸ್ಯರಾದ ಸುನಿತಾ, ಕೆ.ರಾಜೇಶ್ವರಿ, ಸದಾಶಿವ, ದೊಡ್ಡಬಸಪ್ಪ ಇವರನ್ನು ಗೌರವಿಸಲಾಯಿತು.

ಜಿಲ್ಲಾ ಸಂಘದ ನಾಮ ನಿರ್ದೇಶಕರಾದ ವೀರ ಕುಮಾರ್, ಕೆ.ಮಲ್ಲಿಕಾರ್ಜುನ್, ಕರುಣಾಕರಾಚಾರ್, ಕೆ.ಮಲ್ಲಿಕಾರ್ಜುನ, ಕೆ.ಚಿಕ್ಕಜಾಯಿಗನೂರು, ಮೂರ್ತಿ ಇವರನ್ನು ಆಯ್ಕೆ ಮಾಡಿ ಸನ್ಮಾನಿಸಿ ಪ್ರಮಾಣಪತ್ರ ನೀಡಿ ಗೌರವಿಸಲಾಯಿತು. ರಾಜ್ಯ ಸಂಘಕ್ಕೆ ಶ್ರೀತ ರಾಜ ನಾಯಕ್ ರವಿ ಕುಮಾರಣ್ಣ ಆಯ್ಕೆ ಮಾಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು, ಶಿಕ್ಷಕರು ಉಪಸ್ಥಿತರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!