ಬಳ್ಳಾರಿ / ಕಂಪ್ಲಿ : ಗುರುಗಳು ತಿಳಿಸಿಕೊಟ್ಟ ವಿದ್ಯೆ ಜೀವನದಲ್ಲಿ ಅತ್ಯಮೂಲ್ಯವಾದ ಕೊಡುಗೆಯಾಗಿದೆ ಎಂದು ತಾಷೆ ರಾಮ್ಡೋಲ್ ವಿದ್ವಾಂಸರಾದ ಶಿಕಾರಿ ರಾಮು ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಪಟ್ಟಣದ ಪರಿಶಿಷ್ಟ ವರ್ಗಗಳ ಕಲ್ಯಾಣ. ಇಲಾಖೆಯ ಸರ್ಕಾರಿ ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯದಲ್ಲಿ ಪರಿಶಿಷ್ಟ ಪಂಗಡ ವಿದ್ಯಾರ್ಥಿನಿಯರಿಗೆ ಶುಕ್ರವಾರ ಆಯೋಜಿಸಿದ್ದ ಸುಗಮ ಸಂಗೀತ ಕಲಾ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿನಿಯರ ತಮ್ಮ ಪ್ರತಿಭೆ ಗುರುತಿಸಿಕೊಳ್ಳಲು ಕಾರ್ಯಕ್ರಮವು ಸೂಕ್ತ ವೇದಿಕೆಯಾಗಿದ್ದು, ವಿದ್ಯಾರ್ಥಿಗಳು ಸದುಪ ಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ವಸತಿ ನಿಲಯ ಪಾಲಕ ವಿರೂಪಾಕ್ಷ ಅವರು ಮಾತನಾಡಿ, ವಿದ್ಯಾರ್ಥಿಗಳು ಸಿಕ್ಕಂತ ಅವಕಾಶಗಳನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಿಕೊಳ್ಳ ಬೇಕು. ಸೂಕ್ತ ವೇದಿಕೆಯಲ್ಲಿ ಪ್ರತಿಭೆಯನ್ನು ಗುರುತಿಸಿಕೊಂಡಾಗ ಮಾತ್ರ ಶಾಲೆಗೆ ಹಾಗೂ ಕುಟುಂಬಕ್ಕೆ ಕೊಡುಗೆ ನೀಡಲು ಸಾಧ್ಯ ಎಂದು ಹೇಳಿದರು.
ನಮ್ಮ ವಿದ್ಯಾರ್ಥಿ ನಿಲಯದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸುತಿರುವುದಕ್ಕೆ ತುಂಬಾ ಹೆಮ್ಮೆಯ ಸಂಗ ತಿಯಾಗಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಅಭಿನಂದನೆ ತಿಳಿಸಿದರು.
ಶೈಲಾ ದೇವರುಮನಿ ಅವರು ಮಾತನಾಡಿ, ಆರು ತಿಂಗಳು ನಡೆಯುವ ಈ ತರಬೇತಿಯು ವಿದ್ಯಾರ್ಥಿಗಳು ಕಲಿಯಲು ಒಳ್ಳೆಯ ಅವಕಾಶವಾಗಿದೆ ಎಂದು ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ ಅವರು ಸ್ವಾಗತಿಸಿ, ಕಾರ್ಯಕ್ರಮ ಕುರಿತು ಪ್ರಾಸ್ತಾವಿಕ ನುಡಿಗಳನ್ನಾಡಿ ದರು.
ಈ ಸಂದರ್ಭದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್




















