ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ತುಂಗಾ ಜಲಾಶಯದಿಂದ 56 ಸಾವಿರ ಕ್ಯೂಸೆಕ್ಸ್ ನೀರು ನದಿಗೆ

ವಿಜಯನಗರ / ಹೊಸಪೇಟೆ : ಶಿವಮೊಗ್ಗ ಜಿಲ್ಲೆಯ ಗಾಜನೂರು ಬಳಿಯ ತುಂಗಾ ಜಲಾಶಯದ 22 ಗೇಟ್ ಗಳನ್ನು ತೆರೆದು ನದಿಗೆ ಇಂದು 56 ಸಾವಿರ ಕ್ಯೂಸೆಕ್ಸ್ ನೀರು ಹರಿಬಿಡಲಾಗಿದೆ. ಇದು ತುಂಗಭದ್ರಾ ಜಲಾಶಯದ ಅಚ್ಚುಕಟ್ಟು ಪ್ರದೇಶದ ರೈತರಿಗೆ ಸಂತಸ ತಂದಿದೆ.

ಮಲೆನಾಡಿನಲ್ಲಿ ಮಳೆ ಬಿರುಸುಗೊಂಡಿದೆ. ಹೀಗಾಗಿ ಗಾಜನೂರಿನ ತುಂಗಾ, ಲಕ್ಕವಳ್ಳಿಯ ಭದ್ರಾ ಹಾಗೂ ಕಾರ್ಗಲ್ನ ಲಿಂಗನಮಕ್ಕಿ ಜಲಾಶಯಗಳಿಗೆ ಒಳಹರಿವು ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ.

ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆಯಲ್ಲಿ ಕಳೆದ 24 ಗಂಟೆಗಳಲ್ಲಿ 28.6 ಸೆಂ.ಮೀ ದಾಖಲೆಯ ಮಳೆಯಾಗಿದ್ದು. ವಾರಾಹಿ ಜಲಾನಯನ ಪ್ರದೇಶದ ವ್ಯಾಪ್ತಿಯ ಹೊಸನಗರ ತಾಲ್ಲೂಕಿನ ಚಕ್ರಾ ನಗರದಲ್ಲಿ 21 ಸೆಂ.ಮೀ ಮಳೆ ದಾಖಲಾಗಿದೆ. ಸಾವೇಹಕ್ಲಿನಲ್ಲಿ 19.4, ಮಾಣಿಯಲ್ಲಿ 17.1 ಹಾಗೂ ಮಾಸ್ತಿಕಟ್ಟೆಯಲ್ಲಿ 16 ಸೆಂ.ಮೀ ಮಳೆಯಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಕೊಪ್ಪ, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಭಾಗದ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದೆ.

ಭದ್ರಾ ಜಲಾಶಯಕ್ಕೂ ನೀರಿನ ಹರಿವು ಹೆಚ್ಚಳ :

ಭದ್ರಾ ಜಲಾಶಯಕ್ಕೆ ಒಳಹರಿವು 12,983 ಕ್ಯುಸೆಕ್ ಇದೆ. ಕಳೆದ 24 ಗಂಟೆಗಳಲ್ಲಿ ಜಲಾಶಯದಲ್ಲಿ 1.3 ಅಡಿ ನೀರು ಏರಿಕೆಯಾಗಿದೆ. 186 ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 157.3 ಅಡಿ ನೀರಿನ ಸಂಗ್ರಹ ಇದೆ. ಕಳೆದ ವರ್ಷ ಇದೇ ದಿನ ಜಲಾಶಯದಲ್ಲಿ 180.3 ಅಡಿ ನೀರು ಸಂಗ್ರಹಗೊಂಡಿತ್ತು.
ಹೀಗಾಗಿ ಈ ವರೆಗೆ ಮಳೆ ಇಲ್ಲದೆ ಬರಗಾಲಕ್ಕೆ ತುತ್ತಾಗಬೇಕಿದ್ದ ರೈತರಿಗೆ ಇನ್ನು ಕೆಲ ದಿನದಲ್ಲಿ ತುಂಗಭದ್ರ ಜಲಾಶಯಕ್ಕೆ ನೀರು ಬಂದು ಕಾಲುವೆಗಳಿಗೆ ನೀರು ಹರಿಸಿದರೆ ಬಿತ್ತನೆ, ಸಸಿ ನಾಟಿಮಾಡುವ ಕಾರ್ಯ ಚುರುಕುಗೊಳ್ಳಲಿದೆ.

ಸಧ್ಯ ಜಲಾಶಯದಲ್ಲಿ 40.80 ಟಿಎಂಸಿ ನೀರಿದ್ದು. 25 ಸಾವಿರ ಕ್ಯೂಸೆಕ್ಸ್ ನೀರಿನ ಒಳ ಹರಿವು ಇದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!