ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೊಡವ ಸಿಎನ್ ಸಿ ವತಿಯಿಂದ ಕಕ್ಕಡ ಪದಿನೆಟ್ಟ್ ಹಬ್ಬ ಆಚರಣೆ

ಮಡಿಕೇರಿ : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ೩೧ನೇ ವರ್ಷದ ಕೊಡವ ಸಾಂಪ್ರದಾಯಿಕ “ಕಕ್ಕಡ ಪದ್ನೆಟ್ಟ್” ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಹಿರಿಯ ಮಾಧ್ಯಮ ವರದಿಗಾರರು ಹಾಗೂ ಹಿಂದಿನ ಉಪ ಮುಖ್ಯಮಂತ್ರಿಗಳ ಮಾಜಿ ಮಾಧ್ಯಮ ಮತ್ತು ರಾಜಕೀಯ ಸಲಹೆಗಾರ ದೀಪಕ್ ತಿಮ್ಮಯ್ಯ ಅವರು ಕೊಡವ ಭೂಮಿಯನ್ನು ಕಳೆದುಕೊಂಡರೆ ಮುಂದೆ ಕೊಡವರ ಅಸ್ತಿತ್ವಕ್ಕೆ ದಕ್ಕೆ ಬರಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಮಡಿಕೇರಿ ಸಮೀಪದ ಕ್ಯಾಪಿಟಲ್ ವಿಲೇಜ್ ನಲ್ಲಿ ನಡೆದ “ಕಕ್ಕಡ ಪಡ್ನೆಟ್” ಹಬ್ಬವನ್ನು ಕೊಡವ ಪರಂಪರೆಯ ಪವಿತ್ರ ಮಂದ್ ನಲ್ಲಿ ಆರಂಭಿಸಲಾಯಿತು. ಸಿಎನ್ ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಮುಖ್ಯ ಅತಿಥಿ ದೀಪಕ್ ತಿಮ್ಮಯ್ಯ ಹಾಗೂ ಮಂದಪಂಡ ಮನೋಜ್ ಮಂದಣ್ಣ ಅವರು ಪೂರ್ವಾಜರ ಗೌರವ ಸೂಚಕವಾಗಿ ಗಾಳಿಯಲ್ಲಿ ಗುಂಡು ಹಾರಿಸಿದರು. ನಂತರ ಬಾಳೆಕಂಬ ಕತ್ತರಿಸುವ ಬಾಳೆಬೆಂಗುವ ವಿಧಿಯನ್ನು ನೆರವೇರಿಸಲಾಯಿತು.
ಮೆರವಣಿಗೆಯ ಮೂಲಕ ಭತ್ತದ ಗದ್ದೆಗೆ ತೆರಳಿದ ನಾಚಪ್ಪ ಅವರು ಕೃಷಿ ಚಟುವಟಿಕೆಯ ಆರಂಭವನ್ನು ಸೂಚಿಸಲು ಗಾಳಿಯಲ್ಲಿ ಗುಂಡು ಹಾರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎನ್.ಯು.ನಾಚಪ್ಪ ಅವರು ಭಾರತದ ಸಂವಿಧಾನದ 244 ಮತ್ತು 371ನೇ ವಿಧಿಗಳು ಆರ್/ಡಬ್ಲ್ಯೂ 5, 6 ಮತ್ತು 8ನೇ ಪರಿಚ್ಛೇದಗಳ ಅಡಿಯಲ್ಲಿ ಗೂರ್ಖಾಲ್ಯಾಂಡ್, ಲೇಹ್, ಲಡಾಖ್ ಮತ್ತು ಈಶಾನ್ಯ ಭಾರತದ ರಾಜ್ಯಗಳ ಮಾದರಿಯಲ್ಲಿ ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆ ಮತ್ತು ಸ್ವ-ಆಡಳಿತ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮಂಡಿಸಿದರು.

ವರದಿ : ಪ್ರಿತುನ್ ಪೂವಣ್ಣ ಅಯ್ಯನೆರವಂಡ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!