ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ತುಂಗ ಹಾಗೂ ಹೊಸಹಳ್ಳಿ ಏತ ನೀರಾವರಿ ಯೋಜನೆಯಡಿ ಎಲ್ಲಾ ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳಿಗೆ ಸೂಚನೆ

ರೈತರ ಸಮ್ಮುಖದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಶಾಸಕಿ ಶಾರದಾ ಪೂರ್ಯನಾಯ್ಕ್

ಶಿವಮೊಗ್ಗ : ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಮತಿ ಶಾರದಾ ಪೂರ್ಯನಾಯ್ಕ್ ಅವರು ತಮ್ಮ ಕಚೇರಿಯಲ್ಲಿ ತುಂಗ ಏತ ನೀರಾವರಿ ಯೋಜನೆ ಹಾಗೂ ಹೊಸಹಳ್ಳಿ ಏತ ನೀರಾವರಿ ಯೋಜನೆಯ ವ್ಯಾಪ್ತಿಗೆ ಒಳಪಡುವ ಕೆರೆಗಳಿಗೆ ನೀರು ತುಂಬಿಸುವ ಕುರಿತು ನೀರಾವರಿ ಇಲಾಖೆ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.
ಸಭೆಯಲ್ಲಿ ಹಾರನಹಳ್ಳಿ ಹಾಗೂ ಕುಂಸಿ ಭಾಗದ ರೈತರು ಉಪಸ್ಥಿತರಿದ್ದು, ಕೆರೆಗಳಿಗೆ ಸಮರ್ಪಕವಾಗಿ ನೀರು ಹರಿಸದಿರುವುದು, ನೀರಿನ ಹಂಚಿಕೆಯಲ್ಲಿ ಉಂಟಾಗಿರುವ ಸಮಸ್ಯೆಗಳು ಹಾಗೂ ಮುಂಬರುವ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ನೀರಿನ ಲಭ್ಯತೆ ಕುರಿತು ತಮ್ಮ ಅಹವಾಲುಗಳನ್ನು ಶಾಸಕರ ಗಮನಕ್ಕೆ ತಂದರು.
ರೈತರ ಅಹವಾಲುಗಳನ್ನು ಆಲಿಸಿದ ಶಾಸಕಿ ಶಾರದಾ ಪೂರ್ಯನಾಯ್ಕ್ ಅವರು, ತುಂಗ ಹಾಗೂ ಹೊಸಹಳ್ಳಿ ಏತ ನೀರಾವರಿ ಯೋಜನೆಯ ವ್ಯಾಪ್ತಿಗೆ ಒಳಪಡುವ ಎಲ್ಲಾ ಕೆರೆಗಳಿಗೂ ಯಾವುದೇ ತಾರತಮ್ಯವಿಲ್ಲದೆ ನೀರು ತುಂಬಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ರೈತರ ಹಿತಾಸಕ್ತಿಗೆ ಆದ್ಯತೆ ನೀಡುವ ಮೂಲಕ ಯೋಜನೆಯ ಉದ್ದೇಶ ಸಂಪೂರ್ಣವಾಗಿ ಈಡೇರುವಂತೆ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.
ನೀರಿನ ಹರಿವು, ಕೆರೆಗಳ ಭರ್ತಿ ಪ್ರಗತಿ ಹಾಗೂ ತಾಂತ್ರಿಕ ಅಡಚಣೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕರು, ಅಗತ್ಯವಿರುವ ಎಲ್ಲ ಕ್ರಮಗಳನ್ನು ತ್ವರಿತವಾಗಿ ಕೈಗೊಂಡು ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಸೂಚಿಸಿದರು. ನೀರಾವರಿ ವ್ಯವಸ್ಥೆಯಲ್ಲಿ ಸಮನ್ವಯ ಕಾಪಾಡಿಕೊಂಡು ಪ್ರತಿಯೊಂದು ಕೆರೆಯೂ ಭರ್ತಿಯಾಗುವಂತೆ ಕಾರ್ಯಯೋಜನೆ ರೂಪಿಸಿ ಅನುಷ್ಠಾನಗೊಳಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ನೀರಾವರಿ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು, ಹಾರನಹಳ್ಳಿ ಮತ್ತು ಕುಂಸಿ ಭಾಗದ ರೈತರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ / ಬೆಂಗಳೂರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!