ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಡಾ. ಜಿ. ಪರಮೇಶ್ವರ್ ಅವರ 75ನೇ ಜನ್ಮದಿನ ಅಮೃತ ಮಹೋತ್ಸವ: ಕೊರಟಗೆರೆಯಲ್ಲಿ ಪೂಜೆ, ರಕ್ತದಾನ ಶಿಬಿರ, ಹಣ್ಣು ವಿತರಣೆ

ಕೊರಟಗೆರೆ : ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿ, ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೊರಟಗೆರೆ ಕ್ಷೇತ್ರದ ಶಾಸಕ ಡಾ. ಜಿ. ಪರಮೇಶ್ವರ್ ಅವರ 75ನೇ ಜನ್ಮದಿನ ಅಮೃತ ಮಹೋತ್ಸವದ ಅಂಗವಾಗಿ ಕೊರಟಗೆರೆ ಪಟ್ಟಣದಲ್ಲಿ ವಿವಿಧ ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಕೊರಟಗೆರೆ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಡಾ. ಜಿ. ಪರಮೇಶ್ವರ್ ಅವರ ಅಭಿಮಾನಿಗಳ ನೇತೃತ್ವದಲ್ಲಿ ಬೆಳಿಗ್ಗೆ 10 ಗಂಟೆಗೆ ವಿಘ್ನ ವಿನಾಶಕ ಶ್ರೀ ಕಟ್ಟೆ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬಳಿಕ ಪಟ್ಟಣ ಪಂಚಾಯಿತಿ ಮುಂಭಾಗ ಕೇಕ್ ಕತ್ತರಿಸಿ ಸಾರ್ವಜನಿಕರಿಗೆ ಸಿಹಿ ವಿತರಣೆ ನಡೆಸಲಾಗುವುದು. ಇದೇ ಸಂದರ್ಭದಲ್ಲಿ ಕೊರಟಗೆರೆ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ವಿತರಿಸುವ ಕಾರ್ಯಕ್ರಮವೂ ಹಮ್ಮಿಕೊಳ್ಳಲಾಗಿದ್ದು, ಭಾಗವಹಿಸುವವರಿಗೆ ಬೆಳಗಿನ ಉಪಹಾರದ ವ್ಯವಸ್ಥೆ ಮಾಡಲಾಗಿದೆ.

ಬಳಿಕ ಬೆಳಿಗ್ಗೆ 10.30ಕ್ಕೆ ಸರ್ಕಾರಿ ಜೂನಿಯರ್ ಕಾಲೇಜಿನ ರಾಜೀವ್ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಡಾ. ಜಿ. ಪರಮೇಶ್ವರ್ ಅವರ ಅಭಿಮಾನಿಗಳ ವತಿಯಿಂದ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಹಾಗೂ ಸಾರ್ವಜನಿಕರು ಭಾಗವಹಿಸಿ ರಕ್ತದಾನ ಮಾಡುವ ಮೂಲಕ ಜೀವ ಉಳಿಸುವ ಮಹತ್ವದ ಕಾರ್ಯದಲ್ಲಿ ಕೈಜೋಡಿಸುವಂತೆ ಸಂಘಟಕರು ಮನವಿ ಮಾಡಿದ್ದಾರೆ. ಭಾಗವಹಿಸುವ ಎಲ್ಲರಿಗೂ ಮಧ್ಯಾಹ್ನದ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ.

ಈ ಕಾರ್ಯಕ್ರಮಕ್ಕೆ ಕೊರಟಗೆರೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮುಖಂಡರು, ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಅಪಾರ ಸಂಖ್ಯೆಯ ಸಾರ್ವಜನಿಕರು ಭಾಗವಹಿಸಲಿದ್ದಾರೆ.

ರಕ್ತದಾನ ಶಿಬಿರದ ಯಶಸ್ವಿ ಆಯೋಜನೆಗೆ ಅಗತ್ಯ ಆಡಳಿತಾತ್ಮಕ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ತಹಶೀಲ್ದಾರ್ ಮಂಜುನಾಥ್ ಸೇರಿದಂತೆ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಸಹಕಾರ ನೀಡುತ್ತಿದ್ದಾರೆ.

ವರದಿ. ಪ್ರಸನ್ನ ಕುಮಾರ್ .ಎಸ್. ಕೊರಟಗೆರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!