ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಜ್ಯಾದ್ಯಂತ ತಂಬಾಕು, ನಿಕೋಟಿನ್ ಉತ್ಪನ್ನಗಳ ವಿರುದ್ಧ ಸಮರ: ಗುಟ್ಕಾ, ಪಾನ್ ಮಸಾಲಾ ಒಂದು ವರ್ಷ ನಿಷೇಧ

ಬೆಂಗಳೂರು : ಸಾರ್ವಜನಿಕ ಆರೋಗ್ಯ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಯುಕ್ತ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳನ್ನು ಒಂದು ವರ್ಷದ ಅವಧಿಗೆ ರಾಜ್ಯಾದ್ಯಂತ ನಿಷೇಧಿಸಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು ಆಗಸ್ಟ್ 10ರಂದು ಹೊರಡಿಸಿದ ಅಧಿಸೂಚನೆಯನ್ವಯ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದ್ದು, ವ್ಯಸನಮುಕ್ತ ಕರ್ನಾಟಕಕ್ಕೆ ಸಹಕರಿಸಲು ಮನವಿ ಮಾಡಿದೆ.

ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ರಾಜ್ಯಾದ್ಯಂತ ಕಳಪೆ ಹೋಟೆಲ್‌ಗಳು ಹಾಗೂ ನಿಯಮಬಾಹಿರ ಕಾಸ್ಮೆಟಿಕ್ (ಸೌಂದರ್ಯವರ್ಧಕ) ಉದ್ಯಮಗಳ ವಿರುದ್ಧ ಸರಣಿ ದಾಳಿ ನಡೆಸಿ ಬಿಸಿ ಮುಟ್ಟಿಸಿದ್ದ ಬೆನ್ನಲ್ಲೇ ಸಾರ್ವಜನಿಕರ ಆರೋಗ್ಯ ರಕ್ಷಣೆ ಹಾಗೂ ವ್ಯಸನಮುಕ್ತ ಕರ್ನಾಟಕ ನಿರ್ಮಾಣದ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಒಂದು ಮಹತ್ವದ ನಿರ್ಧಾರ ಕೈಗೊಂಡಿದೆ. ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ಸಾಗಣೆ, ವಿತರಣೆ ಮತ್ತು ಮಾರಾಟವನ್ನು ರಾಜ್ಯಾದ್ಯಂತ ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಆಗಸ್ಟ್ 10ರಿಂದಲೇ ಜಾರಿ

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ಕಲಂ 30(2)(a) ಸೇರಿದಂತೆ Food Safety and Standards Regulations, 2011ರ ನಿಯಮ 2.3.4 ಅಡಿಯಲ್ಲಿ ಈ ಕಠಿಣ ಕ್ರಮ ಜರುಗಿಸಲಾಗಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು 2026ರ ಆಗಸ್ಟ್ 10ರಂದು ಈ ಸಂಬಂಧ ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಅಧಿಸೂಚನೆ ಹೊರಡಿಸಿದ ದಿನಾಂಕದಿಂದಲೇ ಈ ಆದೇಶ ಜಾರಿಗೆ ಬಂದಿದೆ. ಪ್ಯಾಕ್ ಮಾಡಿದ ಅಥವಾ ಪ್ರತ್ಯೇಕವಾಗಿ ಮಾರಾಟ ಮಾಡುವ ಎಲ್ಲಾ ಮಾದರಿಯ ನಿಷೇಧಿತ ತಂಬಾಕು ಉತ್ಪನ್ನಗಳ ಮೇಲೆಯೂ ಇಲಾಖೆ ತೀವ್ರ ನಿಗಾ ಇರಿಸಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!