ಬಾಗಲಕೋಟೆ/ ಮುಧೋಳ : ಶ್ರಾವಣ ಮಾಸದ ತನ್ನಿಮಿತ್ಯ ಮುಧೋಳ ತಾಲೂಕಿನ ಮುಗಳಖೋಡ ಗ್ರಾಮದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದಲ್ಲಿ ಗುರುವಾರ ದಿ. 13 ರಂದು ಸಂಜೆ 7:30 ಗಂಟೆಗೆ ಕಾಮಧೇನು ಕಲ್ಪಧೃಮ ಶ್ರೀ ಸಿದ್ಧಾರೂಢರ ಕಥಾಮೃತ ಪ್ರಾರಂಭಗೊಳ್ಳಲಿದೆ ಎಂದು ಶ್ರೀಮನ್ ನಿಜಗುಣ ಶಿವಯೋಗಿ ರಾಷ್ಟ್ರೀಯ ಪ್ರತಿಷ್ಠಾನದ ಯುವ ಮುಖಂಡ ಶ್ರೀನಿವಾಸ್ ಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪತ್ರಿಕೆಯೊಂದಿಗೆ ಮಾತನಾಡುತ್ತಾ ಒಂದು ತಿಂಗಳ ಪರ್ಯಂತರ ಶ್ರೀಸಿದ್ಧಾರೂಢ ಭಾರತಿ ಆಶ್ರಮದ ಪೂಜ್ಯರಾದ ಶರಣಬಸವ ಶಾಸ್ತ್ರಿಗಳು ಅವರಿಂದ ಪುರಾಣ ಕಾರ್ಯಕ್ರಮ ನಡೆಯಲಿದೆ.
ಪುರಾಣದ ಉದ್ಘಾಟನಾ ಸಮಾರಂಭದ ಸಾನಿಧ್ಯವನ್ನು ಪೂಜ್ಯರಾದ ಮಹಾಲಿಂಗಯ್ಯ ಸ್ವಾಮಿ ಹಿರೇಮಠ ಹಾಗೂ ಸಿದ್ದಯ್ಯ ಸ್ವಾಮಿ ಹಿರೇಮಠ ವಹಿಸುವರು. ಶ್ರೀ ಮಹಾಳಿಂಗೇಶ್ವರ ದೇವರ ಅರ್ಚಕರಾದ ಕುಮಾರ್ ಗುರುಪ್ರಸಾದ್ ಸ್ವಾಮೀಜಿಯವರ ಸಮ್ಮುಖದಲ್ಲಿ ಹಿರಿಯ ಜನಪದ ಕಲಾವಿದೆ ಶ್ರೀಮತಿ ಮುತ್ತವ ಲಕ್ಷ್ಮೇಶ್ವರ ಅವರ ಅಧ್ಯಕ್ಷತೆಯಲ್ಲಿ ಹಿರಿಯರಾದ ಮಲ್ಲು ಮುಚ್ಚಂಡಿ ಅವರು ಉದ್ಘಾಟಿಸಲಿದ್ದು ಗ್ರಾಮ ಪಂಚಾಯತಿಯ ಮಾಜಿ ಸದಸ್ಯ ಪರಮಾನಂದ ಸುಣಗಾರ ಜ್ಯೋತಿಯನ್ನು ಬೆಳಗಿಸಲಿದ್ದಾರೆ. ಪ್ರತಿದಿನ ಬೆಳಿಗ್ಗೆ 6 ರಿಂದ 7 ರವರೆಗೆ ಪ್ರವಚನವು ನಡೆಯಲಿದೆ ಎಂದು ಶ್ರೀನಿವಾಸ ಪ್ರಸಾದ್ ತಿಳಿಸಿದ್ದಾರೆ.
- ಕರುನಾಡ ಕಂದ ಸುದ್ದಿ



















