ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ದ್ವಿಭಾಷಾ ನೀತಿಯಲ್ಲಿ ಕನ್ನಡಕ್ಕೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಲಿ: ಡಾ. ಸುಧೀಂದ್ರ

ಶಿವಮೊಗ್ಗ: ಮಕ್ಕಳ ಮನಸ್ಸಿನ ವಿಕಸನಕ್ಕೆ ಮಾತೃಭಾಷೆ ಅತ್ಯಂತ ಅಗತ್ಯವಾಗಿದ್ದು, ಶಿಕ್ಷಣದಲ್ಲಿ ಮಾತೃಭಾಷೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಶಿವಮೊಗ್ಗ ಜಿಲ್ಲಾ ಶಾಖೆಯ ಅಧ್ಯಕ್ಷ ಡಾ.ಸುಧೀಂದ್ರ ಹೇಳಿದರು.
ಮಾತೃಭಾಷೆಯ ಮೂಲಕವೇ ಮಕ್ಕಳಿಗೆ ಜಗತ್ತಿನ ಅರಿವು ಮೂಡಲು ಸಾಧ್ಯ. ಆದರೆ ಪ್ರಸ್ತುತ ರಾಜ್ಯ ಸರ್ಕಾರ ಜಾರಿಗೆ ತರಲು ಪ್ರಸ್ತಾಪಿಸಿರುವ ದ್ವಿಭಾಷಾ ನೀತಿಯಲ್ಲಿ ಕನ್ನಡಕ್ಕೆ ನೀಡಬೇಕಾದ ಮಹತ್ವ ಮತ್ತು ಆದ್ಯತೆ ಗೋಚರಿಸುತ್ತಿಲ್ಲ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ತಜ್ಞರ ಅಭಿಪ್ರಾಯದಂತೆ ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಗಳನ್ನು ಶಿಕ್ಷಣ ಮಾಧ್ಯಮವಾಗಿ ಬಳಸುವ ಸಂದರ್ಭದಲ್ಲಿ ಶಿಕ್ಷಕರ ಮೇಲೆಯೇ ಏಕಕಾಲಕ್ಕೆ ಎರಡೂ ಭಾಷೆಗಳನ್ನು ಬೋಧಿಸುವ ಹೆಚ್ಚುವರಿ ಹೊಣೆಗಾರಿಕೆ ಬೀಳಲಿದೆ. ಪ್ರಾಥಮಿಕ ಶಿಕ್ಷಣದ ಪಠ್ಯಕ್ರಮದಲ್ಲಿ ಕನ್ನಡ ಮತ್ತು ಇಂಗ್ಲಿಷ್ ಪಾಠಗಳಿದ್ದರೂ, ಇಂಗ್ಲಿಷ್‌ನಲ್ಲಿರುವ ಕೆಲವು ಪಾಠಗಳು ಕನ್ನಡಕ್ಕೆ ಪೂರ್ಣವಾಗಿ ಅನುವಾದಗೊಂಡಿಲ್ಲ. ಇದರಿಂದ ಪಠ್ಯಪೂರೈಕೆಯಲ್ಲಿ ಕೊರತೆ ಉಂಟಾಗುವ ಸಾಧ್ಯತೆಯಿದೆ ಎಂದರು.
ಪ್ರಶ್ನೆಪತ್ರಿಕೆ ಎರಡೂ ಭಾಷೆಗಳಲ್ಲಿದ್ದು, ಮಕ್ಕಳು ಉತ್ತರಿಸಲು ಒಂದು ಭಾಷೆಯನ್ನು ಆಯ್ಕೆ ಮಾಡಬೇಕಾಗಿದೆ. ಕನ್ನಡದಲ್ಲಿ ಸರಿಯಾದ ಉತ್ತರ ಬರೆದರೆ ಬಿ ಗ್ರೇಡ್, ಅದೇ ರೀತಿಯ ಉತ್ತರವನ್ನು ಇಂಗ್ಲಿಷ್‌ನಲ್ಲಿ ಬರೆದರೆ ಎ ಗ್ರೇಡ್ ನೀಡಲಾಗುತ್ತದೆ ಎಂಬ ಪರಿಸ್ಥಿತಿ ನಿರ್ಮಾಣವಾದರೆ ಕನ್ನಡ ಮಾಧ್ಯಮದ ಮಕ್ಕಳಿಗೆ ಅನ್ಯಾಯವಾಗುತ್ತದೆ. ಇದು ಶಿಕ್ಷಣ ತಜ್ಞರ ವಲಯದಲ್ಲಿ ಗಂಭೀರ ಪ್ರಶ್ನೆ ಮೂಡಿಸಿದೆ ಎಂದು ಹೇಳಿದರು.
ಎ ಗ್ರೇಡ್ ಪಡೆಯುವ ಆಸೆಯಿಂದ ಮಕ್ಕಳು ಇಂಗ್ಲಿಷ್ ಭಾಷೆಯತ್ತ ಆಕರ್ಷಿತರಾಗಿ, ಕನ್ನಡದ ಬಗ್ಗೆ ತಾತ್ಸಾರ ಬೆಳೆಸಿಕೊಳ್ಳುವ ಸಾಧ್ಯತೆಯಿದೆ. ಇಂತಹ ಆಡಳಿತ ನೀತಿಯನ್ನು ಮುಂದುವರಿಸಿದರೆ ಕನ್ನಡ ಕ್ರಮೇಣ ಮೂಲೆಗುಂಪಾಗುವ ಅಪಾಯವಿದೆ. ಆದ್ದರಿಂದ ದ್ವಿಭಾಷಾ ನೀತಿಯ ಕುರಿತು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆ ನಡೆಯಬೇಕು ಎಂದು ಡಾ.ಸುಧೀಂದ್ರ ಒತ್ತಾಯಿಸಿದರು.

ದ್ವಿಭಾಷಾ ನೀತಿಯ ಕುರಿತು ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕೋರಿ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸುವ ಸಂಬಂಧ ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರ ಸಮ್ಮುಖದಲ್ಲಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಮನವಿ ಪತ್ರದ ಪ್ರಮುಖ ಅಂಶಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು, ಮನವಿ ಪತ್ರವನ್ನು ಗೌರವಾನ್ವಿತ ರಾಷ್ಟ್ರಪತಿಗಳಿಗೆ ತಮ್ಮ ಕಚೇರಿಯ ಮೂಲಕ ಕಳುಹಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪರಿಷತ್ತಿನ ವಿಭಾಗ ಪ್ರಮುಖ ಹರ್ಷ ಹೊಸಳ್ಳಿ, ಕಾರ್ಯದರ್ಶಿ ಸುರೇಶ್ ಭಟ್, ಖಜಾಂಚಿ ಕೆ.ಜಿ.ಮಂಜುನಾಥ ಶರ್ಮ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯ ನ್ಯಾಯವಾದಿ ಕೆ.ಸಿ.ಬಸವರಾಜ್ ಉಪಸ್ಥಿತರಿದ್ದರು.

ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ /ಬೆಂಗಳೂರು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!