ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪಾನ್‌ ಮಸಾಲಾ ಉತ್ಪನ್ನಗಳ ಮೇಲಿನ ಆದೇಶ ವಾಪಾಸ್

ಬೆಂಗಳೂರು: ಕೇವಲ ಎರಡು ದಿನಗಳ ಹಿಂದೆ ರಾಜ್ಯದಲ್ಲಿ ಜಾರಿಯಾದ ಪಾನ್‌ ಮಸಾಲಾ ಉತ್ಪನ್ನಗಳ ಮೇಲೆ ಒಂದು ವರ್ಷದ ಬ್ಯಾನ್‌ ಇದೀಗ ರದ್ದಾಗಿದೆ. ಮುಖ್ಯಮಂತ್ರಿ ಡಿ. ಕೆ . ಶಿವಕುಮಾರ್‌ ಅವರು ಆದೇಶ ವಾಪಾಸ್‌ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ.
ರಾಜ್ಯಾದ್ಯಂತ ಗುಟ್ಕಾ ಹಾಗೂ ತಂಬಾಕು ಅಥವಾ ನಿಕೋಟಿನ್ ಒಳಗೊಂಡ ಪಾನ್ ಮಸಾಲಾ ಉತ್ಪನ್ನಗಳ ಮೇಲೆ ಒಂದು ವರ್ಷದ ನಿಷೇಧ ಹೇರಲಾಗಿತ್ತು. ಗುಟ್ಕಾ ಹಾಗೂ ತಂಬಾಕು ಅಥವಾ ನಿಕೋಟಿನ್ ಒಳಗೊಂಡ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ, ದಾಸ್ತಾನು, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ಆಹಾರ ಸುರಕ್ಷತಾ ಆಯುಕ್ತರು ನಿಷೇಧಿಸಿದ್ದರು. ಇದೀಗ ಡಿಕೆ ಶಿವಕುಮಾರ್‌ ಇದನ್ನು ರದ್ದು ಮಾಡಲು ಸೂಚನೆ ನೀಡಿದ್ದಾರೆ.
ತನಗೆ ಮಾಹಿತಿ ನೀಡದೆ ಈ ಆದೇಶ ಹೊರಡಿಸಲಾಗಿದೆ. ಇದರಿಂದ ಹಲವಾರು ರೈತರು ನಷ್ಟ ಅನುಭವಿಸಲಿದ್ದಾರೆ ಎಂದು ಸಿ.ಎಂ. ಗರಂ ಆಗಿದ್ದು, ಕೂಡಲೇ ಆದೇಶ ಹಿಂಪಡೆಯುವಂತೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

ಇದಕ್ಕೂ ಮೊದಲು ಗುರುವಾರ ಬಿಜೆಪಿ ಮತ್ತು ಕಾಂಗ್ರೆಸ್‌ ಶಾಸಕರ ನಿಯೋಗವೊಂದು ಸಿಎಂ ಬಳಿ ತೆರಳಿ ಆದೇಶ ಹಿಂಪಡೆಯುವಂತೆ ಮನವಿ ಮಾಡಿದ್ದರು. ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ, ಕಾಂಗ್ರೆಸ್‌ ಶಾಸಕ ಡಿಜಿ ಶಾಂತನೇಗೌಡ ನೇತೃತ್ವದ ನಿಯೋಗವು ಈ ಮನವಿ ಮಾಡಿತ್ತು.
ರಾಜ್ಯ ಸರ್ಕಾರದ ಆದೇಶದಿಂದ ರೈತರು ಗಾಬರಿಯಾಗಿದ್ದಾರೆ. ಮಾರುಕಟ್ಟೆ ಮೇಲೆ ಇದು ಪರಿಣಾಮ ಬೀಳಲಿದ್ದು, ಅಡಕೆ ಬೆಳೆಗಾರರಿಗೆ ಸರ್ಕಾರ ರಕ್ಷಣೆ ಕೊಡಬೇಕು ಎಂದು ನಿಯೋಗ ಮನವಿ ಮಾಡಿತ್ತು.

ವರದಿ :ಪ್ರಸಾದ್ ಹೆಚ್ ಬಿ ತೀರ್ಥಹಳ್ಳಿ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!