ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೊರಟಗೆರೆಯಲ್ಲಿ ದೇಶಭಕ್ತಿ ಘೋಷಣೆಗಳು ಹಾಗೂ ವಿದ್ಯಾರ್ಥಿಗಳ ಪದ ಸಂಚನದೊಂದಿಗೆ ವಿಜೃಂಭಣೆಯ ಸ್ವಾತಂತ್ರ್ಯೋತ್ಸವ.

ಕೊರಟಗೆರೆ: ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶನಿವಾರ ಅತ್ಯಂತ ಸಂಭ್ರಮ ಮತ್ತು ವಿಜೃಂಭಣೆಯಿಂದ ಆಚರಿಸಲಾಯಿತು. ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಶಾಲೆಗಳ 24 ತಂಡಗಳ ವಿದ್ಯಾರ್ಥಿಗಳು ಆಕರ್ಷಕ ಪಥಸಂಚಲನ ನಡೆಸಿ ಗಣ್ಯರಿಗೆ ಗೌರವ ಸಲ್ಲಿಸಿದರು.
ತಹಶೀಲ್ದಾರ್ ಮಂಜುನಾಥ್ ಧ್ವಜಾರೋಹಣ ನೆರವೇರಿಸಿ ಸುಮಾರು 45 ನಿಮಿಷಗಳ ಕಾಲ ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿದರು.
ಪ್ರತಿ ವರ್ಷ ಆಗಸ್ಟ್ 15ರಂದು ದೇಶಭಕ್ತಿಯ ಉತ್ಸಾಹ ಧ್ವಜಾರೋಹಣ ಸಾಂಸ್ಕೃತಿ ಕಾರ್ಯಕ್ರಮ ನಾಯಕರ ಭಾಷಣ ದೇಶದ ಎಲ್ಲೆಡೆ ಇರುತ್ತದೆ ಹಾಗೆಯೇ ನಾವು ಇಂದು ಇಲ್ಲಿ ಎಲ್ಲರೂ ಸೇರುವುದು ಸ್ವಾತಂತ್ರ್ಯ ಹಬ್ಬದ ಆಚರಣೆ ಮಾಡಲು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ನೆನಪು ಮಾಡಿಕೊಂಡು ಅವರಿಗೆ ನಮಸ್ಕರಿಸಿ ಸ್ವಾತಂತ್ರ್ಯದ ಮಹತ್ವದ ಜೊತೆಗೆ ನಮ್ಮ ಜವಾಬ್ದಾರಿಗಳೇನು ಎಂಬುದನ್ನು ಅರ್ಥ ಮಾಡಿಕೊಂಡು ದೇಶಕ್ಕೆ ನಾವು ಸಹ ಏನಾದರೂ ಕೊಡುಗೆ ನೀಡಬೇಕು. ದೇಶದ ಅಭಿವೃದ್ಧಿ ಪ್ರಜೆಗಳ ಅಭಿವೃದ್ಧಿ ನಾಡಿನ ಅಭಿವೃದ್ಧಿ ಒಂದು ಕುಟುಂಬದ ಅಭಿವೃದ್ಧಿ ನಿರಂತರವಾಗಿ ಸಾಗುತ್ತಿದ್ದರೆ ಅದಕ್ಕೆ ಕೊನೆ ಇಲ್ಲ ಅದುವೇ ಹಿಂದಿನ ಭಾರತವೇ ಸಾಕ್ಷಿ. ನಮ್ಮ ದೇಶದಲ್ಲಿ ಶಾಂತಿಯಿಂದ ಐಕ್ಯತೆ ಬೇದ ಭಾವವಿಲ್ಲದೆ ಎಲ್ಲರೂ ಒಟ್ಟಾಗಿ ಒಂದು ಕ್ಷೇತ್ರದಲ್ಲಿ ಏನಾದರೂ ಸಾಧಿಸುವ ಅವಕಾಶವಿದೆ ಎಂದರೆ ಅದು ನಮ್ಮ ಭಾರತದಲ್ಲಿ ಮಾತ್ರ.

ದೇಶದ ಏಕತೆ, ಅಖಂಡತೆ ಹಾಗೂ ಸಂವಿಧಾನದ ಆಶಯಗಳನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿದರು.
ಸ್ವಾತಂತ್ರ್ಯ ನಮಗೆ ಸುಲಭವಾಗಿ ದೊರೆತದ್ದಲ್ಲ. ಅನೇಕ ಹೋರಾಟಗಾರರ ತ್ಯಾಗ ಮತ್ತು ಬಲಿದಾನದ ಫಲವಾಗಿ ಇಂದು ನಾವು ಸ್ವಾತಂತ್ರ್ಯದ ಗಾಳಿಯನ್ನು ಉಸಿರಾಡುತ್ತಿದ್ದೇವೆ. ಕೊರಟಗೆರೆ ಸೇರಿದಂತೆ ತುಮಕೂರು ಜಿಲ್ಲೆಯ ಅನೇಕ ಹೋರಾಟಗಾರರು ಸ್ವಾತಂತ್ರ್ಯ ಚಳವಳಿಯಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ಆದರ್ಶಗಳನ್ನು ಯುವಜನತೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಕರೆ ನೀಡಿದರು.

ಕೊರಟಗೆರೆ ರೋಟರಿ ಸಂಸ್ಥೆಯು ಸ್ವಾತಂತ್ರ್ಯೋತ್ಸವದಲ್ಲಿ ಸಹಭಾಗಿತ್ವ :

ಕೊರಟಗೆರೆ ರೋಟರಿ ಕ್ಲಬ್ ಅಧ್ಯಕ್ಷರಾದ ವಿಕೆ ನರಸಿಂಹಮೂರ್ತಿ ಹಾಗೂ ಸೆಕ್ರೆಟರಿಗಳಾದ ಹೊನ್ನೇಶ್ ರವರು 2000 ನೋಟ್ ಬುಕ್ ಹಾಗೂ ಲೇಖನಿಗಳನ್ನು ನೀಡಿ, ಸಿಹಿ ಹಂಚುವ ಮೂಲಕ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ನೀಡಿ ಸಹಕಾರ ನೀಡಿದರು. ಶಿಕ್ಷಣದ ಬಗ್ಗೆ ರೋಟರಿ ಸಂಸ್ಥೆಗೆ ಇರುವ ಕಾಳಜಿಯನ್ನು ನೋಡಿ ತಾಲ್ಲೂಕು ದಂಡಾಧಿಕಾರಿಗಳು ಕ್ಲಬ್ ನ ಎಲ್ಲಾ ಸದಸ್ಯರಿಗೆ ಹೃದಯಪೂರ್ವಕ ಅಭಿನಂದನೆಗಳನ್ನು ತಿಳಿಸಿದರು.

ಮಕ್ಕಳಿಂದ ದೇಶಭಕ್ತಿ ಗೀತೆ :

ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಂದ ದೇಶಭಕ್ತಿ ಗೀತೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು. ಸುಮಾರು 150 ವರ್ಷಗಳ ಇತಿಹಾಸ ಹೊಂದಿರುವ ‘ವಂದೇ ಮಾತರಂ’ ಗೀತೆಯನ್ನು ವಿದ್ಯಾರ್ಥಿಗಳು ಸಾಮೂಹಿಕವಾಗಿ ಹಾಡಿ ದೇಶಭಕ್ತಿಯ ವಾತಾವರಣ ನಿರ್ಮಿಸಿದರು.
ಸ್ವಾತಂತ್ರ್ಯ ಹೋರಾಟದಲ್ಲಿ ಕೊರಟಗೆರೆ ತಾಲ್ಲೂಕು ಸೇರಿದಂತೆ ತುಮಕೂರು ಜಿಲ್ಲೆಯ ಅನೇಕ ಮಹನೀಯರು ಸಲ್ಲಿಸಿದ ತ್ಯಾಗ, ಬಲಿದಾನವನ್ನು ಕಾರ್ಯಕ್ರಮದಲ್ಲಿ ಸ್ಮರಿಸಲಾಯಿತು. ತ್ರಿವರ್ಣ ಧ್ವಜ, ದೇಶಭಕ್ತಿ ಘೋಷಣೆಗಳು ಹಾಗೂ ವಿದ್ಯಾರ್ಥಿಗಳ ಪಥಸಂಚಲನದೊಂದಿಗೆ ಕೊರಟಗೆರೆಯಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಂಭ್ರಮದಿಂದ ನಡೆಯಿತು.

ವರದಿ. ಪ್ರಸನ್ನ ಕುಮಾರ್ ಎಸ್. ಕೊರಟಗೆರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!