
ಪೊನ್ನಂಪೇಟೆ: 80ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ವಿರಾಜಪೇಟೆ ಶಾಸಕರು ಹಾಗೂ ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯವರಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು ಭಾಗವಹಿಸಿದರು.

ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದ ಮಾನ್ಯ ಶಾಸಕರು, ನಮಗೆ ಸ್ವಾತಂತ್ರ್ಯ ಒದಗಿಸಿಕೊಟ್ಟ ಎಲ್ಲಾ ಮಹನೀಯರನ್ನು ಸ್ಮರಿಸುವುದು ನಮ್ಮ ಜವಾಬ್ದಾರಿ. ದೇಶದ ಭವಿಷ್ಯದ ಬಗ್ಗೆ ಚಿಂತಿಸುವ ಪ್ರಜೆಗಳಾಗಿ ನಾವು ರೂಪಗೊಂಡು ಸದೃಢ ಭಾರತ ನಿರ್ಮಿಸುವತ್ತ ನಮ್ಮ ಗಮನಹರಿಸಬೇಕು ಎಂದು ಕರೆ ನೀಡಿದರು.
ಎಲ್ಲರಿಗೂ ಸ್ವಾತಂತ್ರ್ಯ ದಿನಾಚರಣೆಯ ಶುಭ ಕೋರಿದ ಮಾನ್ಯ ಶಾಸಕರು, ಹಿರಿಯರ ಹೋರಾಟದಿಂದ ಭಾರತಕ್ಕೆ ದೊರಕಿದ ಸ್ವಾತಂತ್ರ್ಯವನ್ನು ನಮ್ಮ ಮುಂದಿನ ಪೀಳಿಗೆಗೆ ನೀಡುವ ಬಹುದೊಡ್ಡ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಿದೇರಿರ ನವೀನ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಕಾಳಿಮಾಡ ಪ್ರಶಾಂತ್, ತಾಲೂಕು ಬಗರ್ ಹುಕುಂ ಅಧ್ಯಕ್ಷರು ಅಣ್ಣಳ್ಳಮಾಡ ಲಾಲಾ ಅಪ್ಪಣ್ಣ, ಪೊನ್ನಂಪೇಟೆ ತಹಶೀಲ್ದಾರ್ ಸಂಜನಾ, ಇ ಓ ರಾಜೇಶ್, ಹಿರಿಯರು ಮುಕಳೇರ ಕುಶಾಲಪ್ಪ, ಪಂಚಾಯಿತಿ ಅಧ್ಯಕ್ಷರು ಹರೀಶ್, ಉಪಾಧ್ಯಕ್ಷರು ರಶೀದ್, ಸದಸ್ಯರು, ಪಕ್ಷದ ಮುಖಂಡರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ವರದಿ: ಪ್ರಿತುನ್ ಪೂವಣ್ಣ




















