
ಮಡಿಕೇರಿ: ಬೆಂಗಳೂರು ಶಾಂತಿನಗರದ ಶಾಸಕ ಎನ್.ಎ.ಹ್ಯಾರಿಸ್ ಅವರ ಪುತ್ರನ ವಿವಾಹ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಪತ್ನಿ ಉಷಾ ಶಿವಕುಮಾರ್ ಪಾಲ್ಗೊಂಡು ಶುಭ ಹಾರೈಸಿದರು.
ಹ್ಯಾರಿಸ್ ಅವರ ಪುತ್ರ ಮೊಹಮ್ಮದ್ ನಲಪಾಡ್ ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಸ್.ಐ.ಮುನೀರ್ ಅಹಮ್ಮದ್ ಅವರ ಪುತ್ರಿ ಮಲೀಹ ಫಾತಿಮಾ ಅವರ ವಿವಾಹ ಮಡಿಕೇರಿಯ ನಗರದಂಚಿನ ಮೇಕೇರಿ ಗ್ರಾಮದಲ್ಲಿರುವ ಮಾಜಿ ಸಚಿವ ಡಿ.ಟಿ.ಜಾನ್ ಅವರ ಕೂರ್ಗ್ ವೈಲ್ಡರ್’ನೆಸ್ ರೆಸಾರ್ಟ್‌ನಲ್ಲಿ ನಡೆಯಿತು.
ನಾಯಕ ನಟ ಕಿಚ್ಚ ಸುದೀಪ್ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು.
ವರದಿ: ಪ್ರಿತುನ್ ಪೂವಣ್ಣ



















