ಕೊಪ್ಪಳದ ಭಾಗ್ಯನಗರದಲ್ಲಿನ
ತನ್ವಿ ಪಬ್ಲಿಕ್ ಶಾಲಾ ಆವರಣದಲ್ಲಿ ಧ್ವಜಾರೋಹಣ ಹಾಗೂ ಪುಟಾಣಿ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ಅತ್ಯಂತ ಸಡಗರ-ಸಂಭ್ರಮದಿಂದ ಜರುಗಿದವು.
ಕಾರ್ಯಕ್ರಮದ ನೇತೃತ್ವವನ್ನು ಶಾಲೆಯ ಸಂಸ್ಥಾಪಕರಾದ ಶ್ರೀ ಪ್ರಶಾಂತ್ ಡಂಗುರಮಠ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮುರಡಿಯ ಭೀಮಜ್ಜ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಶ್ರೀ ಸಿದ್ಧಪ್ಪ ಹಳ್ಳಿಕೇರಿ ಆಗಮಿಸಿ, ಧ್ವಜಾರೋಹಣ ನೆರವೇರಿಸಿ ಮಕ್ಕಳಿಗೆ ಶುಭ ಹಾರೈಸಿದರು.
ವೇದಿಕೆಯ ಮೇಲೆ ಗಣ್ಯರಾದ ಶ್ರೀ ಶಶಿಕುಮಾರ್ ಗಡ್ಡಿ, ಶ್ರೀ ಕೃಷ್ಣಮೂರ್ತಿ ಹಾಗೂ ಶಾಲೆಯ ಪ್ರಾಚಾರ್ಯರಾದ ಶ್ರೀಮತಿ ಪ್ರತೀಕಾ ಡಂಗುರಮಠ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವೇಷಭೂಷಣ ಪ್ರದರ್ಶನ ಏರ್ಪಡಿಸಲಾಗಿತ್ತು.
ಪುಟ್ಟ ಮಕ್ಕಳು ವೈವಿಧ್ಯಮಯ ಹಾಗೂ ದೇಶಭಕ್ತಿ ಬಿಂಬಿಸುವ ವೇಷಭೂಷಣಗಳನ್ನು ಧರಿಸಿ ಎಲ್ಲರ ಗಮನ ಸೆಳೆದರು.
ವಿದ್ಯಾರ್ಥಿಗಳು ಸಮಯೋಚಿತ ಭಾಷಣ ಮಾಡಿ ನೆರೆದಿದ್ದ ಸಭಿಕರ ಪ್ರಶಂಸೆಗೆ ಪಾತ್ರರಾದರು.
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕ ವೃಂದ, ಸಿಬ್ಬಂದಿ ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಕ್ಕಳ ಪ್ರತಿಭೆಯನ್ನು ಪ್ರೋತ್ಸಾಹಿಸಿದರು.
- ಕರುನಾಡ ಕಂದ ಸುದ್ದಿ



















