ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹದಗೆಟ್ಟ ರಸ್ತೆಯ ಪರಿಣಾಮ ಬಸ್ ಅಪಘಾತ ತಪ್ಪಿದ ಭಾರಿ ಅನಾಹುತ

ಕೂಡಲೇ ನೂತನ ರಸ್ತೆ ನಿರ್ಮಾಣ ಮಾಡಲು ಮನವಿ

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮುಡಬಿ ಗ್ರಾಮದ ರಸ್ತೆಯು ಸಂಪೂರ್ಣ ಹದಗೆಟ್ಟ ಪರಿಣಾಮ ಮೊನ್ನೆ ಕಲಬುರಗಿಯಿಂದ ಬಸವಕಲ್ಯಾಣಕ್ಕೆ ಚಲಿಸುತ್ತಿರುವ ಸರ್ಕಾರಿ ಬಸ್ ರಸ್ತೆ ಕೆಳಗಡೆ ಬಿದ್ದ ಪರಿಣಾಮ ಪ್ರಯಾಣಿಕರಿಗೆ ಗಾಯಗಳಾಗಿ ಆಸ್ಪತ್ರೆ ಸೇರಿದ್ದಾರೆ ಎಂದು ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆಯ ಸ್ವಾಭಿಮಾನಿ ಬಣ ಆರೋಪ ಮಾಡಿದೆ.

ಈ ಕುರಿತು ಮುಡಬಿ ಗ್ರಾಮದ ಮುಖ್ಯ ರಸ್ತೆಯಲ್ಲಿ ನಿಂತು ಮಾತನಾಡಿದ ತಾಲೂಕು ಅಧ್ಯಕ್ಷ ಮಾಂತೇಶ್ ಗೌರಕರ ಅವರು ಮುಡಬಿ ಗ್ರಾಮವು ಬಸವಕಲ್ಯಾಣ ತಾಲೂಕಿನ ಹೋಬಳಿ ಗ್ರಾಮವಾಗಿದ್ದು ಹಲವು ಗ್ರಾಮಗಳಿಗೆ ಸಂಪರ್ಕಿಸುವ ರಸ್ತೆ ಹೊಂದಿವೆ ಆದರೆ ಹಲವು ವರ್ಷಗಳಿಂದ ಮುಖ್ಯ ರಸ್ತೆಗಳು ಹದಗೆಟ್ಟು ಅಪಘಾತ ಸಂವಿಸುತ್ತಿದ್ದರು ಇಲ್ಲಿನ ತಾಲೂಕು ಆಡಳಿತ ಮತ್ತು ಗ್ರಾಮ ಪಂಚಾಯಿತಿ ಕಣ್ಣಿದ್ದು ಕುರುಡರಂತೆ ವರ್ತಿಸುತ್ತಿದೆ, ಹದಗೆಟ್ಟ ರಸ್ತೆಯಲ್ಲಿ ವಾಹನ ಸವಾರರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ವಾಹನ ಚಲಿಸುವ ಪರಸ್ಥಿತಿ ನಿರ್ಮಾಣವಾಗಿದೆ ಮುಡಬಿ ಗ್ರಾಮವನ್ನು ತಾಲೂಕು ಆಡಳಿತ ಮತ್ತು ಜನಪ್ರತಿನಿಧಿಗಳು ಸಂಪೂರ್ಣ ನಿರ್ಲಕ್ಷಿಸುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಅಲ್ಲದೆ ಇಲ್ಲಿನ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಶಾಲೆ, ಆಸ್ಪತ್ರೆ , ನೆಮ್ಮದಿ ಕೇಂದ್ರಗಳಿಗೆ ಹೋಗಲು ಸೂಕ್ತ ರಸ್ತೆಗಳಿಲ್ಲ ಕೂಡಲೇ ಇಲ್ಲಿನ ಅಧಿಕಾರಿಗಳು ಎಚ್ಚೆತ್ತುಕೊಂಡು ಮುಂಬರುವ 15 ದಿನಗಳ ಒಳಗೇ ಮೂಡಬಿ ಗ್ರಾಮ ಮುಖ್ಯ ರಸ್ತೆಗಳು ಸೇರಿ ಓಣಿಯ ರಸ್ತೆಗಳು ನೂತನವಾಗಿ ನಿರ್ಮಾಣ ಮಾಡಬೇಕು ಇಲ್ಲದಿದ್ದರೆ ನಮ್ಮ ಕರವೇ ಸಂಘಟನೆಯಿಂದ ಉಗ್ರ ಹೋರಾಟ ಮಾಡಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ವರದಿ ಶ್ರೀನಿವಾಸ ಬಿರಾದಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!