ಬಳ್ಳಾರಿ / ಕಂಪ್ಲಿ : ಸಮೃದ್ಧ ಮಳೆ, ಬೆಳೆಗಾಗಿ ಆಶಿಸಿ ಇದೇ ಮೊದಲ ಬಾರಿಗೆ ಪಟ್ಟಣದ ಸಾಹಿತ್ಯ ಸಿರಿ ಪ್ರತಿಷ್ಠಾನವು ಆ.22ರಂದು ಸಂಜೆ 5 ಗಂಟೆಗೆ ಶ್ರೀ ವಾಸವಿ ಕನ್ನಡ ಹಿರಿಯ ಪ್ರಾಥಮಿಕ ಅನುದಾನಿತ ಶಾಲಾವರಣದಲ್ಲಿ ಮಳೆ ಕವಿಗೋಷ್ಠಿ ಹಮ್ಮಿಕೊಳ್ಳಲಾಗಿದೆ.
ಬಳ್ಳಾರಿಯ ಬಾಲಕಿಯರ ಸರ್ಕಾರಿ ಪಿಯು ಕಾಲೇಜಿನ ಉಪನ್ಯಾಸಕ ಡಾ.ಯು.ಶ್ರೀನಿವಾಸಮೂ ರ್ತಿ ಕವಿಗೋಷ್ಠಿಯ ಅಧ್ಯಕ್ಷತೆವಹಿಸಲಿದ್ದು, ಶ್ರೀ ವಾಸವಿ ವಿದ್ಯಾಸಂಸ್ಥೆಯ ಅಧ್ಯಕ್ಷ ಜಿ.ರಾಜಾರಾವ್ ಉದ್ಘಾಟಿಸುವರು.
ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷ ಡಿ.ಶ್ರೀಧರಶ್ರೇಷ್ಠಿ, ಸಾಹಿತ್ಯ సిరి ಪ್ರತಿಷ್ಠಾನದ ಅಧ್ಯಕ್ಷ ಜಿ.ಪ್ರಕಾಶ್, ಕಾರ್ಯಾಧ್ಯಕ್ಷ ಷಣ್ಮುಖಪ್ಪ ಚಿತ್ರಗಾರ್ ಪಾಲ್ಗೊಂಡು,
ತಾಲೂಕಿನ ಕವಿಗಳು ಮಳೆ ಕವಿಗೋಷ್ಠಿಯಲ್ಲಿ ಕವಿತೆ ವಾಚಿಸಲಿದ್ದಾರೆ. ಕವಿಗೋಷ್ಠಿಯಲ್ಲಿ ಪಾಲ್ಗೊಳ್ಳಲಿಚ್ಛಿಸುವ ಆಸಕ್ತ ಕವಿಗಳು ತಮ್ಮ ಹೆಸರನ್ನು ನೋಂದಾಯಿಸಲು ಮೊಬೈಲ್ ಸಂಖ್ಯೆ
98869 40339 ಸಂಪರ್ಕಿಸುವಂತೆ ಪ್ರತಿಷ್ಠಾನದ ಅಧ್ಯಕ್ಷ ಜಿ.ಪ್ರಕಾಶ್ ಪ್ರಕಟಣೆ ನೀಡಿದ್ದಾರೆ.
ವರದಿ : ಜಿಲಾನಸಾಬ್ ಬಡಿಗೇರ್




















