ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಭಾಗಮಂಡಲದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಿಂದ ೩ಕೋಟಿ ರೂ ವೆಚ್ಚದ ಕಾಮಗಾರಿಗಳಿಗೆ ಚಾಲನೆ

ಭಾಗಮಂಡಲ : ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ತಾಲೂಕಿನ ಭಾಗಮಂಡಲಕ್ಕೆ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯವರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ₹೩ ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ನಿಮಿತ್ತ ಭೇಟಿ ನೀಡಿದರು.
ಭಾಗಮಂಡಲ ಮೇಲ್ಸೇತುವೆ ಅಭಿವೃದ್ಧಿ ಹಾಗೂ ಕಾವೇರಿ ಮತ್ತು ಕನ್ನಿಕಾ ನದಿಗಳಿಗೆ ಅಡ್ಡಲಾಗಿ ಕಾಲು ಸೇತುವೆ ನಿರ್ಮಾಣ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು ನೆರವೇರಿಸಿದ ಮಾನ್ಯ ಶಾಸಕರು, ನೀರಾವರಿ ನಿಗಮದ ವತಿಯಿಂದ ವಿಶೇಷ ಪ್ರಯತ್ನವಾಗಿ ಈ ಅನುದಾನವನ್ನು ತರಲಾಗಿದ್ದು ಶೀಘ್ರದಲ್ಲೇ ಈ ಕಾಮಗಾರಿ ಪ್ರಾರಂಭಗೊಳ್ಳಲಿದ್ದು ಉತ್ತಮ ಗುಣಮಟ್ಟ ಕಾಯ್ದುಕೊಳ್ಳುವುದರೊಂದಿಗೆ ಇಲ್ಲಿಯ ಜನತೆಯ ಸಮಸ್ಯೆಯನ್ನು ಬಗೆಹರಿಸುವಲ್ಲಿ ಇದು ಪ್ರಮುಖ ಪಾತ್ರ ವಹಿಸಲಿದೆ ಎಂದು ಬಣ್ಣಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರು ಚೆಪ್ಪುಡಿರ ಅರುಣ್ ಮಾಚಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶೌಕತ್ ಅಲಿ, ತಾಲೂಕು ಬಗರ್ ಹುಕುಂ ಅಧ್ಯಕ್ಷರು
ನೆರವಂಡ ಉಮೇಶ್, ಸಾಮಾಜಿಕ ಜಾಲತಾಣ ಜಿಲ್ಲಾಧ್ಯಕ್ಷರು ಸೂರಜ್ ಹೊಸೂರು, ಯುವ ಕಾಂಗ್ರೆಸ್ಸಿನ ಗೌರೀಶ್ ರೈ, ಕಕ್ಕಬೆ ಪಂಚಾಯತ್ ಮಾಜಿ ಅಧ್ಯಕ್ಷರು ಸಂಪನ್ ಅಯ್ಯಪ್ಪ, ಮಹಿಳಾ ಅಧ್ಯಕ್ಷರು ಇಂದುಮತಿ ರವೀಂದ್ರ, ಪಟ್ಟಮಾಡ ಸಂಜು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ವರದಿ: ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!