ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ.

ಸರ್ಕಾರದ ಯೋಜನೆ ಕಾರ್ಮಿಕ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಕಾರ್ಮಿಕರು.

ಕೊರಟಗೆರೆ: ತಾಲ್ಲೂಕಿನ ಹೊಳವನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗಾಗಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು.
ನವ ಕರ್ನಾಟಕ ಸಂಘಟನೆ, ತುಮಕೂರು ಇವರ ಸಹಭಾಗಿತ್ವದಲ್ಲಿ ನಡೆದ ಶಿಬಿರದಲ್ಲಿ ನೂರಾರು ಕಟ್ಟಡ ಕಾರ್ಮಿಕರು ಹಾಗೂ ಅವರ ಕುಟುಂಬದ ಸದಸ್ಯರು ಭಾಗವಹಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.
ಕಾರ್ಮಿಕರು ದಿನವಿಡೀ ದುಡಿಮೆಯಲ್ಲಿ ತೊಡಗಿರುವುದರಿಂದ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಶಿಬಿರ ಆಯೋಜಿಸಲಾಗಿತ್ತು.
ಶಿಬಿರದಲ್ಲಿ ರಕ್ತದೊತ್ತಡ, ಮಧುಮೇಹ ಸೇರಿದಂತೆ ವಿವಿಧ ಆರೋಗ್ಯ ತಪಾಸಣೆಗಳನ್ನು ನಡೆಸಲಾಯಿತು. ಆರೋಗ್ಯ ಸಮಸ್ಯೆಗಳು, ದೈಹಿಕ ಆಯಾಸ ಹಾಗೂ ಕೆಲಸದ ಸ್ಥಳದಲ್ಲಿ ಸುರಕ್ಷತಾ ಕ್ರಮಗಳನ್ನು ಪಾಲಿಸುವ ಕುರಿತು ವೈದ್ಯರು ಕಾರ್ಮಿಕರಿಗೆ ಸಲಹೆ ನೀಡಿದರು.

ಆರೋಗ್ಯ ಕಾಳಜಿ ಅಗತ್ಯ:

ಬ್ಲಾಸೆಮ್ ಹಾಸ್ಪಿಟಲ್‌ನ ಡಾ. ಪರೀಕ್ಷಿತ್ ಮಾತನಾಡಿ, ಕಟ್ಟಡ ಕಾರ್ಮಿಕರು ಪ್ರತಿನಿತ್ಯ ಕಷ್ಟಪಟ್ಟು ದುಡಿಯುತ್ತಿದ್ದು, ತಮ್ಮ ಆರೋಗ್ಯದ ಬಗ್ಗೆ ಸಮಯ ನೀಡುವುದು ಬಹಳ ಮುಖ್ಯ. ರಾತ್ರಿ 9 ಗಂಟೆಯಾದರೂ ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಿ ಅವರಿಗೆ ಸಂಪೂರ್ಣ ಆರೋಗ್ಯ ಮಾಹಿತಿ ನೀಡುವುದು ನಮ್ಮ ಕರ್ತವ್ಯ. ಯಾವುದೇ ಆರೋಗ್ಯ ಸಮಸ್ಯೆ ಕಂಡುಬಂದರೆ ನಿರ್ಲಕ್ಷ್ಯ ಮಾಡದೆ ಆರಂಭದಲ್ಲೇ ವೈದ್ಯರನ್ನು ಸಂಪರ್ಕಿಸಬೇಕು ಎಂದು ಸಲಹೆ ನೀಡಿದರು.

ಸಾಮಾಜಿಕ ಕಾಳಜಿಯ ಕಾರ್ಯಕ್ರಮ :

ನವ ಕರ್ನಾಟಕ ಕಾರ್ಮಿಕ ಒಕ್ಕೂಟದ ಜಿಲ್ಲಾ ಕಾರ್ಯದರ್ಶಿ ಬಿಂದು ಮಾತನಾಡಿ, ಕಾರ್ಮಿಕರು ಸಮಾಜದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಆದರೆ ದಿನನಿತ್ಯದ ದುಡಿಮೆಯ ನಡುವೆ ಆರೋಗ್ಯದ ಬಗ್ಗೆ ಗಮನ ಹರಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದ್ದು, ಮುಂದಿನ ದಿನಗಳಲ್ಲಿಯೂ ಇಂತಹ ಸಾಮಾಜಿಕ ಕಾರ್ಯಕ್ರಮಗಳನ್ನು ಮುಂದುವರಿಸುವ ಉದ್ದೇಶವಿದೆ ಎಂದರು.

ಕಾರ್ಮಿಕರಿಗೆ ಅನುಕೂಲ :
ಆರೋಗ್ಯ ತಪಾಸಣೆ ಮಾಡಿಸಿಕೊಂಡ ಕಾರ್ಮಿಕ ಮಹಮ್ಮದ್ ಆರಿಫ್ ಮಾತನಾಡಿ, ಪ್ರತಿದಿನ ಕಟ್ಟಡ ನಿರ್ಮಾಣ ಕೆಲಸಕ್ಕೆ ತೆರಳುವುದರಿಂದ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಸಮಯ ಸಿಗುವುದಿಲ್ಲ. ಶಿಬಿರದಲ್ಲಿ ಉಚಿತವಾಗಿ ತಪಾಸಣೆ ಮಾಡಿಸಿಕೊಂಡು ವೈದ್ಯರಿಂದ ಆರೋಗ್ಯದ ಕುರಿತು ಮಾಹಿತಿ ಮತ್ತು ಸಲಹೆ ಪಡೆದುಕೊಂಡಿದ್ದು, ಇಂತಹ ಶಿಬಿರಗಳು ಕಾರ್ಮಿಕರಿಗೆ ಹೆಚ್ಚು ಅನುಕೂಲವಾಗಿವೆ ಎಂದರು.

ಕಲ್ಯಾಣ ಯೋಜನೆಗಳ ಮಾಹಿತಿ :
ನವ ಕರ್ನಾಟಕ ತುಮಕೂರು ನಗರ ಅಧ್ಯಕ್ಷ ಮಲ್ಲೇಶ್ ಮಾತನಾಡಿ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಿಕೊಂಡಿರುವ ಅರ್ಹ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗೆ ವೈದ್ಯಕೀಯ ನೆರವು, ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ನೆರವು, ಅಪಘಾತ ಪರಿಹಾರ, ಮಕ್ಕಳ ಶಿಕ್ಷಣ ಸಹಾಯ, ವಿವಾಹ ಸಹಾಯ ಹಾಗೂ ಪಿಂಚಣಿ ಸೇರಿದಂತೆ ವಿವಿಧ ಕಲ್ಯಾಣ ಸೌಲಭ್ಯಗಳು ಲಭ್ಯವಿವೆ. ಕಾರ್ಮಿಕರು ತಮ್ಮ ನೋಂದಣಿ ಹಾಗೂ ಚಂದಾ ಪಾವತಿ ವಿವರಗಳನ್ನು ಸರಿಯಾಗಿ ನಿರ್ವಹಿಸಿಕೊಂಡು, ತಮಗೆ ದೊರೆಯಬಹುದಾದ ಸೌಲಭ್ಯಗಳ ಕುರಿತು ಕಾರ್ಮಿಕ ಇಲಾಖೆ ಅಥವಾ ಕಲ್ಯಾಣ ಮಂಡಳಿಯಿಂದ ಮಾಹಿತಿ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಮಿಕರ ಆರೋಗ್ಯವೇ ಕುಟುಂಬದ ಭದ್ರತೆಯಾಗಿದ್ದು, ದುಡಿಯುವ ಕೈಗಳಿಗೆ ಆರೋಗ್ಯದ ಕಾಳಜಿ ನೀಡುವ ಇಂತಹ ಉಚಿತ ಆರೋಗ್ಯ ತಪಾಸಣಾ ಶಿಬಿರಗಳು ಇನ್ನಷ್ಟು ನಡೆಯಬೇಕು ಎಂದು ಅವರು ಆಶಿಸಿದರು.

ಕಾರ್ಯಕ್ರಮದಲ್ಲಿ ನವ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಒಕ್ಕೂಟದ ಕೊರಟಗೆರೆ ತಾಲೂಕು ಮಹಿಳಾ ಉಪಾಧ್ಯಕ್ಷೆ ಶ್ವೇತಾ, ಸಂಘಟನೆಯ ಸದಸ್ಯರು, ಬ್ಲಾಸೆಮ್ ಹಾಸ್ಪಿಟಲ್ ತಂಡದ ಟೀಮ್ ಲೀಡರ್ ಡಾ. ಅಭಿಷೇಕ್, ಡಾ. ಪ್ರಥಮ್ ಎ. ಪಾಟೀಲ್, ಡಾ. ಪರೀಕ್ಷಿತ್, ನಿರೋಷ, ಲ್ಯಾಬ್ ಟೆಕ್ನಿಷಿಯನ್ ಕೀರ್ತಿ ಸೇರಿದಂತೆ ವೈದ್ಯಕೀಯ ಸಿಬ್ಬಂದಿ ಹಾಗೂ ಕಟ್ಟಡ ಕಾರ್ಮಿಕರು ಉಪಸ್ಥಿತರಿದ್ದರು.

ವರದಿ .ಪ್ರಸನ್ನ ಕುಮಾರ್. ಎಸ್. ಕೊರಟಗೆರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!