ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸರ್ಕಾರ ಮತ್ತು ರೋಟರಿ ಕ್ಲಬ್ ಸಹಯೋಗದೊಂದಿಗೆಮಹಿಳಾ ಮತ್ತು ಮಕ್ಕಳ ಆರೋಗ್ಯ ವಿಶೇಷ ತಪಾಸಣಾ ಶಿಬಿರ.

ರೋಟರಿ ಕ್ಲಬ್ ಕೊರಟಗೆರೆ ಹಾಗೂ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಮಕ್ಕಳ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದ್ದು, ಶಿಬಿರದಲ್ಲಿ ಮಕ್ಕಳಿಗೆ ವೈದ್ಯಕೀಯ ತಪಾಸಣೆ ನಡೆಸಿ ಅಗತ್ಯ ಆರೋಗ್ಯ ಸಲಹೆ ಹಾಗೂ ಪೌಷ್ಟಿಕಾಂಶದ ಔಷಧಿಗಳನ್ನು ವಿತರಿಸಲಾಯಿತು.

ಶಿಬಿರದಲ್ಲಿ ಮಕ್ಕಳ ತಜ್ಞರಾದ Dr. Mohammad Mustak ಹಾಗೂ Dr. Lavanya ಸೇರಿದಂತೆ ವೈದ್ಯಕೀಯ ತಂಡವು ಮಕ್ಕಳ ಆರೋಗ್ಯ ತಪಾಸಣೆ ನಡೆಸಿತು. ತಪಾಸಣೆಗೆ ಆಗಮಿಸಿದ್ದ ತಾಯಂದಿರಿಗೆ ಮಕ್ಕಳ ಆರೋಗ್ಯ, ಪೌಷ್ಟಿಕಾಂಶ ಹಾಗೂ ಅಗತ್ಯ ಮುನ್ನೆಚ್ಚರಿಕೆಗಳ ಕುರಿತು ವೈದ್ಯರು ಮಾಹಿತಿ ನೀಡಿದರು.

ಶಿಬಿರದಲ್ಲಿ ಪಾಲ್ಗೊಂಡಿದ್ದ ತಾಯಂದಿರಿಗೆ Syrup Iron Kids-120, Syrup Calcium-30 ಹಾಗೂ Syrup Multivitamin-30 ವಿತರಿಸಲಾಯಿತು. ಮಕ್ಕಳಲ್ಲಿ ರಕ್ತಹೀನತೆ, ಕ್ಯಾಲ್ಸಿಯಂ ಕೊರತೆ ಹಾಗೂ ಪೌಷ್ಟಿಕಾಂಶದ ಕೊರತೆ ಉಂಟಾಗದಂತೆ ಅಗತ್ಯ ಆಹಾರ ಪದ್ಧತಿ ಮತ್ತು ಆರೋಗ್ಯ ಕಾಳಜಿಯ ಕುರಿತು ಸಲಹೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಕೊರಟಗೆರೆ ರೋಟರಿ ಕ್ಲಬ್ ಅಧ್ಯಕ್ಷರಾದ Rtn. Dr. ನರಸಿಂಹಮೂರ್ತಿ, ಕಾರ್ಯದರ್ಶಿ ಹೊನ್ನೇಶ್, ಶಿರಾ ಗೇಟ್ ಯಲ್ಲಾಪುರ ರೋಟರಿ ಕ್ಲಬ್ ಅಧ್ಯಕ್ಷರಾದ ಎಂ.ಎನ್. ಚಂದ್ರಶೇಖರ್, ಕಾರ್ಯದರ್ಶಿ ರಮೇಶ್, ನಿರ್ದೇಶಕರಾದ ಪ್ರಸನ್ನ ಕುಮಾರ್. ಎಸ್. ಹಾಗೂ ರಾಮಕೃಷ್ಣಪ್ಪ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಮುಖ್ಯ ವೈದ್ಯಾಧಿಕಾರಿ Dr. Mohammad Mustak, ಮಕ್ಕಳ ತಜ್ಞರಾದ Dr. Lavanya, Dr. ಜೋಶ್ನಾ ರೆಡ್ಡಿ, ತಾಲೂಕು ಆರೋಗ್ಯ ಅಧಿಕಾರಿಗಳು, RBSK ವೈದ್ಯಾಧಿಕಾರಿಗಳಾದ Dr. ಸಾಯಿ ಕೌಸಲ್ಯ ಹಾಗೂ Dr. ಶಿವಲೀಲಾ ಅಕ್ಕಿ ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿ ಮತ್ತು ರೋಟರಿ ಕ್ಲಬ್ ಸದಸ್ಯರು ಭಾಗವಹಿಸಿದ್ದರು.

ಮಕ್ಕಳ ಆರೋಗ್ಯದ ಬಗ್ಗೆ ಪೋಷಕರು ಹೆಚ್ಚಿನ ಕಾಳಜಿ ವಹಿಸಬೇಕು. ನಿಯಮಿತ ಆರೋಗ್ಯ ತಪಾಸಣೆ, ಸಮತೋಲಿತ ಆಹಾರ, ಅಗತ್ಯ ಪೌಷ್ಟಿಕಾಂಶ ಹಾಗೂ ವೈದ್ಯರ ಸಲಹೆಯನ್ನು ಪಾಲಿಸುವ ಮೂಲಕ ಮಕ್ಕಳ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬಹುದು ಎಂದು ವೈದ್ಯರು ತಿಳಿಸಿದರು.

ಮಕ್ಕಳ ಆರೋಗ್ಯ ಮತ್ತು ಪೌಷ್ಟಿಕಾಂಶದ ಕುರಿತು ಜಾಗೃತಿ ಮೂಡಿಸುವ ಇಂತಹ ಶಿಬಿರಗಳು ಗ್ರಾಮೀಣ ಪ್ರದೇಶದ ಜನರಿಗೆ ಹೆಚ್ಚಿನ ಪ್ರಯೋಜನ ನೀಡುತ್ತವೆ ಎಂದು ರೋಟರಿ ಕ್ಲಬ್ ನ ಅಭಿಪ್ರಾಯ.

ವರದಿ.ಪ್ರಸನ್ನ ಕುಮಾರ್ .ಎಸ್. ಕೊರಟಗೆರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!