
ಗಂಗಾವತಿ: ಮಾದಕ ವಸ್ತುಗಳ ಸೇವನೆಯು ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ತೀವ್ರವಾದ ಹಾಗೂ ಹಾನಿಕಾರಕ ಪರಿಣಾಮಗಳನ್ನು ಬೀರುತ್ತದೆ. ಆದ್ದರಿಂದ ನಮ್ಮ ಸಮಾಜ ಮಾದಕ ವಸ್ತುಗಳಿಂದ ವ್ಯಸನ ಮುಕ್ತರಾಗಲು ವಿದ್ಯಾರ್ಥಿಗಳ ಪಾತ್ರ ಬಹಳ ಮಹತ್ವ ಎಂದು ಗಂಗಾವತಿ ವಲಯದ ಅಬಕಾರಿ ನಿರೀಕ್ಷಕರಾದ ವಿಠ್ಠಲ ಪಿರುಗಣ್ಣನವರು ಹೇಳಿದರು.
ನಗರದ ಕೊಲ್ಲಿ ನಾಗೇಶ್ವರರಾವ್ ಗಂಗಯ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ ಘಟಕ ಮತ್ತು ಗಂಗಾವತಿ ವಲಯ ಅಬಕಾರಿ ನಿರೀಕ್ಷಕರ ಕಾರ್ಯಾಲಯ, ಗಂಗಾವತಿ ಸಹಯೋಗದಲ್ಲಿ ಗುರುವಾರದಂದು ಹಮ್ಮಿಕೊಂಡಿದ್ದ ಮಾದಕ ವಸ್ತುಗಳ ಹಾಗೂ ಮನೋದ್ರೆಕಕಾರಿ ಪದಾರ್ಥಗಳ ಸೇವೆನೇಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಅಭಿಯಾನದಲ್ಲಿ ಅವರು ಮಾತನಾಡಿದರು.
ಇಂದು ಯುವಕರು ಹೆಚ್ಚಾಗಿ ಮಾದಕ ವಸ್ತುಗಳಿಗೆ ಬಲಿ ಆಗುತ್ತಿದ್ದಾರೆ. ನಾವು ವಿದೇಶಿ ಶೈಲಿಯನ್ನು ಅನುಕರಣೆ ಮಾಡುತ್ತಿದ್ದೇವೆ.
ಮಾದಕ ವಸ್ತುಗಳು ಸೇವನೆಯು ಮೆದುಳಿನ ನರ ವೈಜ್ಞಾನಿಕ ಕಾರ್ಯಗಳನ್ನು ಬದಲಾಯಿಸುತ್ತವೆ ಮತ್ತು ಆನಂದವನ್ನು ಗ್ರಹಿಸುವ ಸಾಮರ್ಥ್ಯವನ್ನು ಕುಂಠಿತಗೊಳಿಸುತ್ತವೆ. ತೀವ್ರವಾದ ಆತಂಕ, ಖಿನ್ನತೆ ಮತ್ತು ವರ್ತನೆಯಲ್ಲಿ ಬದಲಾವಣೆ ಕಂಡು ಬರುತ್ತದೆ. ಇದನ್ನು ಯೋಗ, ಧ್ಯಾನ ಮತ್ತು ವ್ಯಾಯಾಮದಿಂದ ಹೋಗಲಾಡಿಸಬಹುದು ಎಂದು ಅವರು ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಡಾ. ಶಿವರಾಜ ಗುರಿಕಾರ ಅವರು ವಹಿಸಿದ್ದರು.
ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳಿಂದ ದೂರವಿರುವ ಮತ್ತು ತಡೆಗಟ್ಟುವ ಪ್ರತಿಜ್ಞಾ ವಿಧಿಯನ್ನು ಭೋದಿಸಲಾಯಿತು.
ಕಾರ್ಯಕ್ರಮದಲ್ಲಿ ಗಂಗಾವತಿ ವಲಯದ
ಅಬಕಾರಿ ಉಪ ನಿರೀಕ್ಷಕರಾದ ಶಶಿಧರ,
ಅಬಕಾರಿ ಮುಖ್ಯ ಪೇದೆ
ವಿಜಯ ಕುಮಾರ್ ನಾಯ್ಕ, ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕರಾದ ಡಾ. ನರಸಿಂಹ, ಡಾ .ಬಸವರಾಜ ಗಡದು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
- ಕರುನಾಡ ಕಂದ ಸುದ್ದಿ




















