ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಈದ್ ಮಿಲಾದ್ ಮಾನವೀಯತೆ ಮತ್ತು ಸಹೋದರತ್ವದ ಸಂದೇಶವನ್ನು ಸಾರುವ ಮಹತ್ವದ ಹಬ್ಬ ಶಾಸಕ ಡಾ. ಮಂತರ್ ಗೌಡ

ಸೋಮವಾರಪೇಟೆ: ಈದ್ ಮಿಲಾದ್ ಪ್ರೀತಿ, ಶಾಂತಿ, ಸಹನೆ, ಮಾನವೀಯತೆ ಮತ್ತು ಸಹೋದರತ್ವದ ಸಂದೇಶವನ್ನು ನೆನಪಿಸುವ ಮಹತ್ವದ ಪವಿತ್ರ ದಿನವಾಗಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡರವರು ಹೇಳಿದರು.
ಸೋಮವಾರಪೇಟೆಯ ಬಜೆಗುಂಡಿ ಗ್ರಾಮದ ಖಿಳರಿಯ ಮಸಿದಿಯಲ್ಲಿ ನಡೆದ ಈದ್ ಮಿಲಾದ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಮನುಷ್ಯರು ಪರಸ್ಪರ ಗೌರವದಿಂದ, ಯಾವುದೇ ಭೇದಭಾವವಿಲ್ಲದೆ ಬದುಕಬೇಕು ಎಂಬ ಸಂದೇಶ ಹಬ್ಬದ ನಿಜವಾದ ಆಶಯವಾಗಿದೆ. ನಮ್ಮ ದೇಶದ ವೈವಿಧ್ಯತೆಯಲ್ಲಿ ಏಕತೆಯನ್ನು ಮತ್ತಷ್ಟು ಬಲಪಡಿಸುವಲ್ಲಿ ಇಂತಹ ಹಬ್ಬಗಳು ಪ್ರಮುಖ ಪಾತ್ರ ವಹಿಸುತ್ತವೆ. ಎಲ್ಲ ಧರ್ಮಗಳ ಜನರು ಪರಸ್ಪರ ಗೌರವದಿಂದ ಬದುಕಿದಾಗ ಮಾತ್ರ ಸುಂದರ ಮತ್ತು ಶಾಂತಿಯುತ ಸಮಾಜ ನಿರ್ಮಾಣ ಸಾಧ್ಯ ಎಂದರು.

ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಅವರನ್ನು ಸಮಾಜದ ಆಸ್ತಿಯನ್ನಾಗಿ ಮಾಡಬೇಕು. ಮಕ್ಕಳಿಗೆ ಶಿಕ್ಷಣ ನೀಡುವುದರೊಂದಿಗೆ ಅವರು ಸಮಾಜವನ್ನು ಮುನ್ನಡೆಸುವಂತಾಗಲು ಉತ್ತಮ ಸಂಸ್ಕಾರ ನೀಡಿದಲ್ಲಿ ಅವರ ಜೀವನ ಸುಗಮವಾಗಲಿದೆ.
ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಅವರನ್ನು ಸಮಾಜದ ಆಸ್ತಿಯನ್ನಾಗಿ ಮಾಡಬೇಕು ಅದರಲ್ಲಿಯೂ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವುದರೊಂದಿಗೆ, ಅವರ ಜೀವನವನ್ನು ಮುನ್ನಡೆಸುವಂತಾದಾಗ ಅವರಿಗೆ ಮದುವೆ ಮಾಡಿದಲ್ಲಿ ಅವರ ಜೀವನ ಸುಗಮವಾಗಿ ನಡೆಯುತ್ತದೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಮಸೀದಿಯ ಅಭಿವೃದ್ಧಿಗೆ ೧೦ ಲಕ್ಷ ರೂ. ಗಳನ್ನು ಶಾಸಕರ ನಿಧಿಯಿಂದ ನೀಡಲಾಗುವುದು. ಸ್ಮಶಾನಕ್ಕೆ ಸ್ಥಳ ಮೀಸಲಿಡಲು ಶ್ರಮಿಸಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಿಳಾರಿಯ ಮಸೀದಿ ಅಧ್ಯಕ್ಷ ಕೆ.ಎ. ಯಾಕೂಬ್ ಮಾತನಾಡಿ ಈದ್ ಮಿಲಾದ್ ಎಂದರೆ ಪ್ರವಾದಿ ಹಜರತ್ ಮುಹಮ್ಮದ್ ಪೈಗಂಬರ್ ಅವರ ಜನ್ಮದಿನವನ್ನು ಸ್ಮರಿಸುವ ಪವಿತ್ರ ದಿನ ಇದು ಕೇವಲ ಹಬ್ಬದ ಆಚರಣೆಯಲ್ಲ ಪ್ರವಾದಿ ಮುಹಮ್ಮದ್ ಅವರು ತಮ್ಮ ಜೀವನದ ಮೂಲಕ ಸತ್ಯ ನ್ಯಾಯ, ದಯೆ, ಕ್ಷಮೆ ಮತ್ತು ಬಡವರ ಬಗ್ಗೆ ಕಾಳಜಿ ವಹಿಸುವ ಮಹತ್ವವನ್ನು ಸಾರಿದರು.
ಬಡವರು, ನಿರ್ಗತಿಕರು ಮತ್ತು ಸಂಕಷ್ಟದಲ್ಲಿರುವವರನ್ನು ನೆರವಾಗುವುದು, ನೆರೆಹೊರೆಯವರೊಂದಿಗೆ ಪ್ರೀತಿಯಿಂದ ನಡೆದುಕೊಳ್ಳುವುದು ಮತ್ತು ಸಮಾಜದಲ್ಲಿ ಶಾಂತಿ ಹಾಗೂ ಸೌಹಾರ್ದತೆಯನ್ನು ಕಾಪಾಡುವುದು ಈ ಹಬ್ಬದ ಆಶಯವಾಗಿದೆಯೆಂದರು.

ಕಾರ್ಯಕ್ರಮವನ್ನು ಮಸೀದಿಯ ಖತೀಬರಾದ ನೌಷಾದ್ ಫೌಜಿ ಉದ್ಘಾಟಿಸಿದರು.
ಸಭೆಯಲ್ಲಿ ಫೌಜಿ ವೇದಿಕೆಯಲ್ಲಿದ್ದರು. ಕಾರ್ಯಕ್ರಮದಲ್ಲಿ ಹುಸೇನ್, ಈಚೆಗೆ ನೇಪಾಳದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಪರವಾಗಿ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

ವರದಿ: ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!