ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪಾಳ್ಯ ಕೆರೆಗಳಿಗೆ ನೀರು ತುಂಬಿಸಲು ರೈತರಿಂದ ಒತ್ತಾಯ

ಕೊಳ್ಳೇಗಾಲ : ತಾಲ್ಲೂಕಿನ ಪಾಳ್ಯ ಕೆರೆಗಳಿಗೆ ನೀರು ತುಂಬಿಸುವಂತೆ ಗ್ರಾಮದ ಕೆರೆ ಅಚ್ಚುಕಟ್ಟು ಸಮಿತಿ ರೈತ ಮುಖಂಡರು ಮತ್ತು ಗ್ರಾಮಸ್ಥರು ಗುರುವಾರ ಪ್ರತಿಭಟನೆ ನಡೆಸಿದರು.

ಪಟ್ಟಣದ ನೀರಾವರಿ ಕಚೇರಿ ಮುಂದೆ ಪಾಳ್ಯ ಗ್ರಾಮದ ರೈತರು ಕುಳಿತು ಘೋಷಣೆಯ ಕೂಗುವ ಮೂಲಕ ಪ್ರತಿಭಟಿಸಿದರು , ನಂತರ ಕಚೇರಿಯ ಟೆಕ್ನಿಕಲ್ ಅಸಿಸ್ಟೆಂಟ್ ಪುಣ್ಯಶ್ರೀ ರವರಿಗೆ ಮನವಿಪತ್ರ ಸಲ್ಲಿಸಿದರು.

ನಂತರ ಯುವ ರೈತ ಹರೀಶ್ ಮಾತನಾಡಿ, ನಮ್ಮ ಪಾಳ್ಯ ಗ್ರಾಮದ ಕೆರೆಗಳಿಗೆ ನೀರು ಬಿಡದೇ ಕಬಿನಿ ಜಲಾಶಯದ ನೀರು ಕಳೆದ 15 ದಿನಗಳಿಂದ ಚಾನಲ್ ಮೂಲಕ ಕಾವೇರಿ ನದಿಗೆ ಹರಿಸುತ್ತಿದ್ದಾರೆ. ಇದ್ದರಿಂದ ಪಾಳ್ಯ ಗ್ರಾಮದ ಸಾವಿರಾರು ಎಕರೆ ಜಮೀನುಗಳು ಸರಿಯಾದ ಸಮಯಕ್ಕೆ ಮಳೆಯಾಗದೇ ಹಾಗೂ ಜಲಾಶಯದಿಂದ ನೀರು ಬಿಡದೇ ಒಣಗುತ್ತಿದೆ ಎಂದು ಆರೋಪಿಸಿದರು.

ರೈತರು ಐದಾರು ಬಾರಿ ಬಂದು ಮನವಿ ಸಲ್ಲಿಸಿದ್ದರೂ ಕೂಡ ಯಾವುದೇ ಅಧಿಕಾರಿಗಳು ಬಂದು ಪರಿಶೀಲನೆ ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಆದ್ದರಿಂದ ಕೂಡಲೇ ಪಾಳ್ಯ ಗ್ರಾಮದ ಚಿಕ್ಕ ಕೆರೆ ಹಾಗೂ ದೊಡ್ಡ ಕೆರೆಗೆ ನೀರು ತುಂಬಿಸಿ ಸುತ್ತಮುತ್ತಲಿನ ಜಮೀನುಗಳಿಗೆ ನೀರು ಹರಿಸುವಂತೆ ಒತ್ತಾಯ ಮಾಡಿದರು.

ಪ್ರತಿಭಟನೆಯಲ್ಲಿ ಪಾಳ್ಯ ಗ್ರಾಮದ ಸಿದ್ದಪ್ಪನಾಯಕ, ಸೀಗನಾಯಕ, ದೊಡ್ಡರಾಜನಾಯಕ, ತಂಬಡಿ ಬಸವರಾಜಪ್ಪ, ನಂಜುಂಡಸ್ವಾಮಿ, ಪಕಾಲಿನಾಯಕ, ದೊಡ್ಡಸೀಗನಾಯಕ, ರಾಜಪ್ಪ, ಪಾರ್ಥ ಸೇರಿದಂತೆ ರೈತ ಮುಖಂಡರು ಇದ್ದರು.

ವರದಿ : ಕೊಡಕ್ಕಲ್ ಶಿವಪ್ರಸಾದ್ , ಶಿವಮೊಗ್ಗ /ಬೆಂಗಳೂರು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!