ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸೋಮವಂಶ ಆರ್ಯ ಕ್ಷತ್ರಿಯ ಚಿತ್ರಗಾರ ಸಮಾಜದಿಂದ ಶ್ರಾವಣ ಮಾಸದ ನೂಲು ಹುಣ್ಣಿಮೆ ನಿಮಿತ್ತ ಶ್ರೀ ನಿಮಿಷಾಂಬ ದೇವಿಯ ಗಂಗೆ ಸ್ಥಳ, ಭವ್ಯ ಮೆರವಣಿಗೆ

ಬಳ್ಳಾರಿ / ಕಂಪ್ಲಿ : ಇಲ್ಲಿನ ಸೋಮವಂಶ ಆರ್ಯ ಕ್ಷತ್ರಿಯ ಚಿತ್ರಗಾರ ಸಮಾಜದ ವತಿಯಿಂದ ಶ್ರಾವಣ ಮಾಸದ ಪವಿತ್ರ ನೂಲು ಹುಣ್ಣಿಮೆಯ ಅಂಗವಾಗಿ ಶ್ರೀ ನಿಮಿಷಾಂಬ ದೇವಿಯ ಗಂಗೆ ಸ್ಥಳ ಹಾಗೂ ಭವ್ಯ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು. ದೇವಿಯ ಗಂಗೆ ಸ್ಥಳ ನೆರವೇರಿದ ನಂತರ, ಮಂಗಲ ವಾದ್ಯಗಳೊಂದಿಗೆ ದೇವಿಯ ಭವ್ಯ ಮೆರವಣಿಗೆಯು ಊರಿನ ಪ್ರಮುಖ ಬೀದಿಗಳಲ್ಲಿ ಅತ್ಯಂತ ಸಡಗರ-ಸಂಭ್ರಮದಿಂದ ಜರುಗಿತು.
ಇದೇ ಸಂದರ್ಭದಲ್ಲಿ ಶ್ರೀ ನಿಮಿಷಾಂಬ ದೇವಿ ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳಾದ ಪಂಚಾಮೃತ ಅಭಿಷೇಕ ಮತ್ತು ಕುಂಕುಮಾರ್ಚನೆಗಳನ್ನು ಭಕ್ತಿಭಾವದಿಂದ ನೆರವೇರಿಸಲಾಯಿತು.
ಸಂಜೆ ದೇವಸ್ಥಾನದ ಆವರಣದಲ್ಲಿ ದೇವಿಯ ಪಲ್ಲಕ್ಕಿ ಉತ್ಸವ ಅದ್ದೂರಿಯಾಗಿ ನಡೆಯಿತು. ತದನಂತರ ಭಕ್ತಾದಿಗಳಿಗೆ ಮಹಾಪ್ರಸಾದ ವಿತರಣೆ ಮಾಡಲಾಯಿತು.
ಈ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಮಾಜದ ಅಧ್ಯಕ್ಷರಾದ ಎಸ್. ಜಿ. ಚಿತ್ರಗಾರ್, ಪ್ರಮುಖರಾದ ನಾಗರಾಜ್ ಉಭಾಳೆ, ರಾಜಣ್ಣ ಬೂಸಾರೆ, ನಾರಾಯಣ, ರಾಘವೇಂದ್ರ ಬೂಸಾರೆ, ರಾಜ ಕಾಂಬಳೆಕರ್, ಮಾರುತಿ, ವೆಂಕಟೇಶ್ ಚಿತ್ರಗಾರ್, ಶಶಿಧರ್, ವಾಸು, ಪ್ರಸಾದ್, ನಾಗರಾಜ್, ಗಜಾನನ, ಕೃಷ್ಣ, ಮುರಳಿ ಸೇರಿದಂತೆ ಸಮಾಜದ ಮುಖಂಡರು ಹಾಗೂ ನೂರಾರು ಭಕ್ತಾದಿಗಳು ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!