ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಿಕ್ಷಣದಿಂದ ಜ್ಞಾನವಂತರಾಗಬೇಕು : ಜೂಗಲ್ ಮಂಜುನಾಯಕ

ಬಳ್ಳಾರಿ / ಕಂಪ್ಲಿ: ವಚನಗಳು ಸಾಮಾನ್ಯ ಜನರ ನಾಡಿಮಿಡಿತಗಳಾಗಿ, ವೈಚಾರಿಕ ಮತ್ತು ವೈಜ್ಞಾನಿಕ ಮನೋ ಚಿಂತನೆಗೆ ತಮ್ಮ ಕಾಯಕದ ಮೂಲಕ ಮಹತ್ವವನ್ನು ಶಿವಶರಣರು ನೀಡಿದ್ದಾರೆ ಎಂದು ತಹಶೀಲ್ದಾರ್ ಜೂಗಲ್ ಮಂಜುನಾಯಕ ಹೇಳಿದರು.
ಪಟ್ಟಣದ ತಹಶೀಲ್ದಾರ್ ಕಛೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಬ್ರಹ್ಮಶ್ರೀ ನಾರಾಯಣ ಗುರು, ಶ್ರೀನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿ, 12ನೇ ಶತಮಾನದ ಕಾಲದಲ್ಲಿ ಭಾಷೆಯಲ್ಲಿ ಸಾಕಷ್ಟ್ಟು ಬದಲಾವಣೆಗಳಾಗಿವೆ. ನಮ್ಮಲ್ಲಿರುವ ಮೂಢನಂಬಿಕೆಗಳಿಗೆ ಜೋತು ಬೀಳದೆ ಆಧುನಿಕ ಭಾರತದ ನಿರ್ಮಾಣಕ್ಕೆ ಪ್ರಾಮುಖ್ಯತೆ ನೀಡಬೇಕು. ಕಾಯಕ ನಿಷ್ಠೆಯಲ್ಲಿ ನುಲಿಯ ಚಂದಯ್ಯರಂತಹ ಶರಣರ ತತ್ವ ಸಿದ್ದಾಂತಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಜನ ಸಮೂಹವನ್ನು ಕತ್ತಲೆಯ ಅಂಧಕಾರ ದಿಂದ ಬೆಳಕಿನೆಡೆಗೆ ಕೊಂಡೊಯ್ದ ಶ್ರೀ ನಾರಾಯಣ ಗುರುಗಳು ಸಮಾಜಕ್ಕೆ ಒಂದು ದಿಕ್ಕನ್ನು ತೋರಿಸಿಕೊಟ್ಟವರು. ಕ್ರಾಂತಿ ಪುರುಷರಾದ ಅವರಿಗೆ ಭಗವಂತನ ಸಾಕ್ಷಾತ್ಕಾರವಾಗಿತ್ತು. ಶಿಕ್ಷಣದಿಂದ ಜ್ಞಾನವಂತರಾಗಬೇಕು ಎಂದರು.
ಈ ಸಂದರ್ಭದಲ್ಲಿ ಪ್ರಭಾರಿ ಉಪ ತಹಶೀಲ್ದಾರ್ ರಮೇಶ, ಶಿರಸ್ತೇದಾರ ಪಂಪಾಪತಿ, ಕಂದಾಯ ನಿರೀಕ್ಷಕ ಸುರೇಶ, ಆರ್ಯ ಈಡಿಗರ ಸಮಾಜದ ಅಧ್ಯಕ್ಷ ಇ. ನರಸಪ್ಪ, ಬಸವರಾಜ, ಗಂಗಾಧರಗೌಡ, ಧನ್ ರಾಜ್, ಇ.ಕೆ.ಶ್ರೀನಿವಾಸ, ಶಿವುಕುಮಾರ, ಲಕ್ಷ್ಮೀ, ಇಪಿ ಇದ್ದಪ್ಪ, ವೆಂಕಟೇಶ, ಕೊರಚ ಕೊರಮ ಕೊರವರ ಸಮಾಜದ ಅಧ್ಯಕ್ಷ ಕೆ.ಯಂಕಪ್ಪ, ಕಾರ್ಯದರ್ಶಿ ವಿರುಪಾಕ್ಷಿ, ಮುಖಂಡರಾದ ಹನುಮಂತಪ್ಪ, ಶ್ರೀನಿವಾಸ, ಶಿವರಾಜ, ಸುಧೀರ್, ವಿರೇಶ, ರಾಮ, ರಾಮಕೃಷ್ಣ ಸೇರಿದಂತೆ ಸಿಬ್ಬಂದಿ ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!