ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಾಸಕ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ



ಬೆಂಗಳೂರು : ಕರ್ನಾಟಕ ಮಹರ್ಷಿ ವಾಲ್ಮೀಕಿ
ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ/ಹಗರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಸಚಿವ ಬಿ.ನಾಗೇಂದ್ರ ಅವರು ತನ್ನ ಸಚಿವ ಸ್ಥಾನಕ್ಕೆ ಶುಕ್ರವಾರ (ಆ.28) ರಾಜೀನಾಮೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ವಿರೋಧ ಪಕ್ಷಗಳು ಸದನದಲ್ಲಿ ನನ್ನ ರಾಜೀನಾಮೆಗೆ ಅಗ್ರಹಿಸಿ ಇಡೀ ಅಧಿವೇಶನವನ್ನೇ ಹಾಳು ಮಾಡಿದರು. ರಾಜ್ಯದಲ್ಲಿನ ಬರ ಪರಿಸ್ಥಿತಿ, ಕಸ್ತೂರಿ ರಂಗನ್ ಕರಡು ಅಧಿಸೂಚನೆಯ ಸಂಕಷ್ಟ ಸೇರಿದಂತೆ ಜನರನ್ನು ಕಾಡುತ್ತಿರುವ ಜ್ವಲಂತ ಸಮಸ್ಯೆಗಳು ಅವರ ಕಣ್ಣಿಗೆ ಕಾಣಲೇ ಇಲ್ಲ. ಮನುಸ್ಮೃತಿ ಪಾಲಿಸುವ ಅವರಿಗೆ ಸಂವಿಧಾನದ ಆಶಯಗಳೇ ಬೇಕಿಲ್ಲ ಎಂದು ದೂರಿದರು.

ವಾಲ್ಮೀಕಿ ನಿಗಮದ ಹಗರಣದಲ್ಲಿ‌ ಆರೋಪ ಬಂದಾಗ ಅಂದು ನಾನೇ ಸ್ವಯಂ ರಾಜೀನಾಮೆ‌ ನೀಡಿದ್ದೆ. ಅಂದು ರಾಜ್ಯದ ತನಿಖಾ ಸಂಸ್ಥೆಗಳು ಆರೋಪ ಮುಕ್ತ ಮಾಡಿವೆ. ಅದರೆ, ಬಿಜೆಪಿ ನಾಯಕರು ಕೇಂದ್ರದ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಹಗರದಲ್ಲಿ ಮತ್ತೆ ಸಿಲುಕಿಸುವ ಪ್ರಯತ್ನ ಮಾಡಿವೆ ಎಂದು ಆರೋಪಿಸಿದರು.

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಮೇಲೂ ಆರೋಪವಿದೆ. ರಾಜ್ಯಪಾಲರ ಅನುಮತಿ ಕೋರಲಾಗಿದೆ. ಆದರೆ, ಅವರು ಎನ್‌ಡಿಎ ಭಾಗವಾಗಿರುವ ಕಾರಣ ಅವರನ್ನು ರಕ್ಷಿಸಲಾಗುತ್ತಿದೆ. ಪರಿಶಿಷ್ಟ ಪಂಗಡದ ನನ್ನನ್ನು ಸಿಲುಕಿಸಲಾಗುತ್ತಿದೆ ಎಂದರು.

ನಾನು ನಿರಪರಾಧಿ. ಆದರೆ, ಸಂವಿಧಾನದ ಮೇಲೆ ನಂಬಿಕೆ ಇಟ್ಟು. ಪಕ್ಷಕ್ಕೆ, ಸರ್ಕಾರಕ್ಕೆ, ಅಭಿವೃದ್ಧಿ ಗೆ ಆಗುತ್ತಿರುವ ಅಡ್ಡಿ ನಿವಾರಣೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದರು.

ಬಿಜೆಪಿ ಸುಳ್ಳು ಆರೋಪಗಳ ವಿರುದ್ಧ ಪ್ರತಿ ಕ್ಷೇತ್ರದ ಜನರಲ್ಲೂ ಜಾಗೃತಿ‌ ಮೂಡಿಸುತ್ತೇನೆ. ರಾಜ್ಯದ ಎಲ್ಲೆಡೆ ಪ್ರವಾಸ ಮಾಡುತ್ತೇನೆ ಎಂದರು.

ಬಹುಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ತೀವ್ರ ಪ್ರತಿಭಟನೆ ನಡೆಸಿ ಸಚಿವರ ರಾಜೀನಾಮೆಗೆ ಪಟ್ಟು ಹಿಡಿದಿದ್ದವು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!