ವಿಜಯಪುರ : ಬಸವನ ಬಾಗೇವಾಡಿ ತಾಲ್ಲೂಕನ್ನು ಬರಪೀಡಿತ ತಾಲೂಕನ್ನಾಗಿ ಘೋಷಣೆ ಮಾಡುವಂತೆ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಹುಲ ಕಲಗೊಂಡ ಆಗ್ರಹಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು ಸರ್ಕಾರವು ವಿಜಯಪುರ ಜಿಲ್ಲೆಯಲ್ಲಿ ಕೇವಲ ಮೂರು ತಾಲ್ಲೂಕನ್ನು ಮಾತ್ರ ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಿದ್ದಾರೆ. ಜಿಲ್ಲೆಯಲ್ಲಿ ಮಳೆ ಕೊರತೆ, ಬೆಳೆ ನಷ್ಟ ಹಾಗೂ ಸಂಕಷ್ಟದಿಂದ ರೈತರು ತೀವ್ರ ತೊಂದರೆ ಅನುಭವಿಸುತ್ತಿರುವ ಸಂದರ್ಭದಲ್ಲಿ ಸರ್ಕಾರ ಕೂಡಲೇ ವಾಸ್ತವ ಪರಿಸ್ಥಿತಿಯನ್ನು ಪರಿಗಣಿಸಿ ಸಂಪೂರ್ಣ ವಿಜಯಪುರ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಬೇಕು. ರೈತರ ಸಂಕಷ್ಟಕ್ಕೆ ಸ್ಪಂದಿಸಿ ತಕ್ಷಣವೇ ಬರ ಪರಿಹಾರ ರೈತರಿಗೆ ಪ್ರತಿ ಎಕರೆಗೆ 25000 ಸಾವಿರ ಹಾಗೂ ಅಗತ್ಯ ನೆರವು ನೀಡಬೇಕು ಎಂದು ಆಗ್ರಹಿಸಿದರು. ರೈತರ ಹಿತ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದು ಸರ್ಕಾರಕ್ಕೆ ಒತ್ತಾಯಿಸಿದರು.
- ಕರುನಾಡ ಕಂದ ಸುದ್ದಿ




















